ವಿದ್ಯುತ್ ಸರಬರಾಜು ವ್ಯವಸ್ಥೆ ಸುಧಾರಣೆ ಮತ್ತು ಆದಾಯ ಸೋರಿಕೆ ತಡೆಗಟ್ಟಲು ಕೇಂದ್ರ ಸರ್ಕಾರ ಹೊಸ ಯೋಜನೆಯನ್ನು ರೂಪಿಸಿದೆ. ಇನ್ನು ಮುಂದೆ ಪ್ರಿಪೇಯ್ಡ್ ಸ್ಮಾರ್ಟ್ ಮೀಟರ್ ವ್ಯವಸ್ಥೆ ರಾಜ್ಯಾದ್ಯಂತ ಶೀಘ್ರವೇ ಜಾರಿಯಾಗಲಿದೆ.
ಈ ಮೀಟರ್ ಅಳವಡಿಸಿದ ಬಳಿಕ ಪ್ರತಿ ತಿಂಗಳಿಗೂ ಮೊದಲೇ ಶುಲ್ಕ ಪಾವತಿಸಬೇಕಾಗುತ್ತದೆ. ಪ್ರಸ್ತುತ ಗ್ರಾಹಕರು, ಬಳಕೆ ಮಾಡುವ ವಿದ್ಯುತ್ ಬಿಲ್ ಬಂದ ನಂತರ ಶುಲ್ಕ ಪಾವತಿಸಬೇಕಿತ್ತು. ಈ ಹೊಸ ವ್ಯವಸ್ಥೆ ಜಾರಿಯಾದ ನಂತರ ಮೊದಲೇ ನಿರ್ದಿಷ್ಟ ಹಣ ಪಾವತಿಸಿ ನಂತರ ವಿದ್ಯುತ್ ಬಳಸಬೇಕಾಗಿದೆ. ಈ ವರ್ಷದ ಡಿಸೆಂಬರ್ ಒಳಗೆ ಅಳವಡಿಸುವ ವಿದ್ಯುತ್ ಮೀಟರ್ ಗಳಿಗೆ ಶೇಕಡಾ 15ರಷ್ಟು ಸಬ್ಸಿಡಿ ನೀಡಲಾಗುವುದು. ನಂತರ ಸಬ್ಸಿಡಿ ಸಿಗುವುದಿಲ್ಲ. ಹಾಗೆಯೇ ಸಬ್ಸಿಡಿ ಪಡೆದುಕೊಳ್ಳಲು ರಾಜ್ಯದಲ್ಲಿ ಪ್ರಿಪೇಯ್ಡ್ ಮೀಟರ್ ಅಳವಡಿಕೆಗೆ ಇಂಧನ ಇಲಾಖೆ ಸಿದ್ದದೆ ನಡೆಸಿದೆ ಎಂದು ಹೇಳಲಾಗಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel