MIRROR FOCUS

ಎರಡನೇ ಹಂತದ ಮತದಾನಕ್ಕೆ ರಾಜ್ಯದಲ್ಲಿ ಭರ್ಜರಿ ತಯಾರಿ | ಭಾರತ ವಿಶ್ವದ ಟಾಪ್ 3 ಸ್ಥಾನಕ್ಕೇರಿಸುವ ಶಕ್ತಿ ನಿಮ್ಮ ಮತಕ್ಕಿದೆ : ಮೋದಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕರ್ನಾಟಕದಲ್ಲಿ(Karnakta) ಮೊದಲ ಹಂತದ ಚುನಾವಣೆ(Election) ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ(Campaign) ಕಾರ್ಯ ನಡೆಯುತ್ತಿದೆ. ಬಿಜೆಪಿಯ(BJP) ಸ್ಟಾರ್‌ ಪ್ರಚಾರಕ(Star campaigner) ಹಾಗೂ ಪ್ರಧಾನಿ ಅಭ್ಯರ್ಥಿ ಪ್ರಧಾನಿ ನರೇಂದ್ರ ಮೋದಿ ಉತ್ತರ ಕರ್ನಾಟಕದಲ್ಲಿ ಪ್ರಚಾರ ಗೈಗೊಂಡಿದ್ದಾರೆ. ಬಿರು ಬಿಸಿಲಿನ ಮಧ್ಯೆಯೂ ಪ್ರಚಾರ ಕಾರ್ಯ ಬಿರುಸಿನಿಂದ ನಡೆಯುತ್ತಿದೆ. ಬಾಗಲಕೋಟೆಗೆ(Bagalakote) ಪ್ರಚಾರ ಕಾರ್ಯಕ್ಕಾಗಿ ಬಂದ ಪ್ರಧಾನಿ ನರೇಂದ್ರ ಮೋದಿ (Narendra Modi) ಭಾರತ ವಿಶ್ವದ ಟಾಪ್ 3ನೇ ಸ್ಥಾನಕ್ಕೆ ಏರಲಿದ್ದು, ಅದನ್ನು ನಿಮ್ಮ ಮತ ಮಾಡಲಿದೆ. ಈ ಬಾರಿಯ ಲೋಕಸಭಾ ಚುನಾವಣೆ(Lok sabha Election) ಆತ್ಮನಿರ್ಭರದ್ದಾಗಿದ್ದು, ಭಾರತದ(India) ಭವಿಷ್ಯವನ್ನು ನಿರ್ಧಾರ ಮಾಡಲಿದೆ ಎಂದು  ಹೇಳಿದ್ದಾರೆ.

ಬಾಗಲಕೋಟೆಯಲ್ಲಿ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ಭಾರತವನ್ನು ವಿಶ್ವದ ಟಾಪ್ 3 ಸ್ಥಾನಕ್ಕೆ ಮೋಜು, ಮಸ್ತಿಯಲ್ಲಿ ಕಾಲ ಕಳೆಯುವವರು ಏರಿಸುವುದಿಲ್ಲ. ಒಂದು ಸಂಕಲ್ಪ ಮಾಡಿಕೊಂಡು 24*7 ಕೆಲಸ ಮಾಡಿದರೆ ಇದು ಸಾಧ್ಯವಾಗಲಿದೆ. ಈ ವಿಚಾರದಲ್ಲಿ ಮೋದಿಯ ಗಮನ ಸ್ಪಷ್ಟವಾಗಿದೆ ಎಂದು ಅವರು ಹೇಳಿದ್ದಾರೆ. ಸರ್ಕಾರದಲ್ಲಿ ಇದ್ದುಕೊಂಡು ದೇಶವನ್ನು ಕೊಳ್ಳೆ ಹೊಡೆಯುವವರಿಗೆ ನೀವು ಅಧಿಕಾರ ಕೊಡ್ತಿರಾ? ಈ ಕಾಂಗ್ರೆಸ್‍ನ (Congress) ಇತಿಹಾಸ ದೇಶವನ್ನು ಲೂಟಿ ಹೊಡೆಯುವುದೇ ಆಗಿದೆ. ಇಂತಹ ಲೂಟಿಕೋರರ ಕೈಯಲ್ಲಿ ದೇಶವನ್ನ ಕೊಡುತ್ತೀರಾ? ಕಾಂಗ್ರೆಸ್ ಕರ್ನಾಟಕವನ್ನು ಲೂಟಿಯ ಎಟಿಎಂ ಆಗಿ ಮಾಡಿಕೊಂಡಿದ್ದಾರೆ. ಅಧಿಕಾರ ಪಡೆದು ಇಷ್ಟು ಕಡಿಮೆ ಸಮಯದಲ್ಲೇ ಖಜಾನೆ ಲೂಟಿ ಹೊಡದಿದ್ದಾರೆ. ಇಲ್ಲಿನ ಸರ್ಕಾರಿ ನೌಕರರಿಗೆ ಸಂಬಳ ಕೂಡಲಾಗುತ್ತಿಲ್ಲ. ಜನರ ಹಿತಕ್ಕಾಗಿ ಒಂದು ಯೋಜನೆ ಇಲ್ಲ. ಕಾಂಗ್ರೆಸ್ ಬಂದ್ರೆ ದೇಶ ಹಾಳಾಗುತ್ತದೆ ಎಂದು ಇತಿಹಾಸ ಹೇಳುತ್ತದೆ ಎಂದು ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕದಲ್ಲಿ ನಮ್ಮ ಸರ್ಕಾರ, ರೇಲ್ವೆ ನಿಲ್ದಾಣ ಮಾಡುತ್ತಿದೆ. ವಿಜಯಪುರದಲ್ಲಿ ವಿಮಾನ ನಿಲ್ದಾಣ ಮಾಡಲಾಗುತ್ತಿದೆ. ಹಿಂದಿನ 10 ವರ್ಷದಲ್ಲಿ ಮೋದಿ ಸರ್ಕಾರ ಬಡ ಜನರ ಪರ ಯೋಚಿಸಿದೆ. ಕಾಂಗ್ರೆಸ್‍ನವರು ಒಂದು ಕ್ಷಣದಲ್ಲಿ ಬಡತನ ನಿರ್ಮೂಲನೆ ಮಾಡುತ್ತೇವೆ ಅಂತಾರೆ, 70 ವರ್ಷದಿಂದ ಆಗದದ್ದನ್ನು ಈಗೇನು ಮಾಡ್ತೀರಾ ಎಂದು ಅವರು ಪ್ರಶ್ನಿಸಿದ್ದಾರೆ. ನಾನು ಪ್ರಧಾನಿ ಆಗುವ ಮೊದಲು 18 ಸಾವಿರ ಗ್ರಾಮಗಳ ಜನರು ಕಗ್ಗತ್ತಲಲ್ಲಿ ಜೀವಿಸುತ್ತಿದ್ದರು. ನನಗೆ ಅವಕಾಶ ಕೊಟ್ಟ ನಂತರ ಎಲ್ಲೆಡೆ ವಿದ್ಯುತ್ ಕೊಟ್ಟೆವು, ದೇಶದಲ್ಲಿ ಒಂದೇ ಒಂದು ವಿದ್ಯುತ್ ಇಲ್ಲದ ಗ್ರಾಮವಿಲ್ಲ. 75%ನಷ್ಟು ಜನರಿಗೆ ನೀರು ಕೊಡಲಾಗಿದೆ. ಈ ಮೊದಲು ಕಾಂಗ್ರೆಸ್ ಮಾಡಬಹುದಿತ್ತಲ್ಲಾ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ. ಈ ವೇಳೆ ಬಾಲಕಿ ಮೇಟಿ ರಚಿಸಿದ ಮೋದಿ ಹಾಗೂ ಅವರ ತಾಯಿಯ ಭಾವಚಿತ್ರವನ್ನು ಪ್ರಧಾನಿಗೆ ಉಡುಗೊರೆಯಾಗಿ ನೀಡಲಾಯಿತು. ಇದಕ್ಕೆ ಪ್ರತಿಯಾಗಿ, ಮಗಳೇ ನಿನಗೆ ಪತ್ರ ಬರೆಯುತ್ತೇನೆ ಎಂದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅರಣ್ಯ ಉಳಿದರೆ ಮಾತ್ರ ಭೂಮಿ ಉಳಿಯಲು ಸಾಧ್ಯ – ವನ್ಯಜೀವಿ ಸಪ್ತಾಹ ಸಮಾರೋಪದಲ್ಲಿ ಮುಖ್ಯಮಂತ್ರಿ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

5 hours ago

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಹೊಸದಾಗಿ 900 ಬಸ್ ಗಳು ಸೇರ್ಪಡೆ

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಹೊಸದಾಗಿ 900 ಬಸ್ ಗಳು ಸೇರ್ಪಡೆಗೊಳ್ಳಲಿವೆ ಎಂದು…

5 hours ago

ಗದಗದಲ್ಲಿ ಶೇಂಗಾ ಹುಟ್ಟುವಳಿ  ಖರೀದಿಸಲು ಪ್ರತಿ ಕ್ವಿಂಟಾಲ್ ಗೆ 7263 ರೂಪಾಯಿ ದರ ನಿಗದಿ

2025-26 ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಎಫ್.ಎ.ಕ್ಯೂ ಗುಣಮಟ್ಟದ ಶೇಂಗಾ…

5 hours ago

ಸರ್ಕಾರದಿಂದ 200 ಕಾಲು ಸಂಕ ನಿರ್ಮಾಣದ ಗುರಿ

ರಾಜ್ಯದಲ್ಲಿ  ಈಗಾಗಲೇ ಮಲೆನಾಡು ಪ್ರದೇಶದಲ್ಲಿ ಕಳೆದ ವರ್ಷ 100 ಕಾಲುಸಂಕ ನಿರ್ಮಾಣ ಮಾಡಲಾಗಿದೆ.…

5 hours ago

ಉತ್ತರ ಕರ್ನಾಟಕದಲ್ಲಿ ಸೀಗೆ ಹುಣ್ಣಿಮೆ ಆಚರಣೆ | ಭೂಮಿ ತಾಯಿಗೆ ಪೂಜೆ ಸಲ್ಲಿಸಿ ಉತ್ತಮ ಫಸಲಿಗೆ ಪ್ರಾರ್ಥನೆ

ಉತ್ತರ ಕರ್ನಾಟಕ ಭಾಗದಲ್ಲಿ ಮುಂಗಾರು ಫಸಲು ಬಂದಾಗ ಭೂತಾಯಿಗೆ ಪೂಜೆ ಸಲ್ಲಿಸಿ ಫಸಲನ್ನು…

5 hours ago

ಕರ್ನಾಟಕದಲ್ಲಿ ಮುಗಿಯದ ಸಮೀಕ್ಷೆ | ಗಡುವು ದೀಪಾವಳಿಯವರೆಗೆ ವಿಸ್ತರಣೆ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ಜನರ ಸಾಮಾಜಿಕ ಮತ್ತು…

5 hours ago