ರಾಜ್ಯದಲ್ಲಿ 18500 ಕ್ಕೂ ಅಧಿಕ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗಳ ಸಿದ್ಧತೆ ನಡೆಯುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಸರಕಾರಿ ಶಾಲೆಗಳಿಗೆ 13 ಸಾವಿರ ಶಿಕ್ಷಕರು ಹಾಗೂ ಅನುದಾನಿತ ಶಾಲೆಗಳಿಗೆ ಸುಮಾರು 5800 ಶಿಕ್ಷಕರ ನೇಮಕವಾಗಲಿದೆ. ಜಸ್ಟಿಸ್ ನಾಗಮೋಹನ್ ದಾಸ್ ವರದಿಯ ಹಿನ್ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆಯಲ್ಲಿ ಸ್ವಲ್ಪ ವಿಳಂಬವಾಗಿತ್ತು ಎಂದು ಹೇಳಿದ್ದಾರೆ. ಮೂರು ಹಂತದ ಪರೀಕ್ಷಾ ಪದ್ಧತಿಯೂ ಮಕ್ಕಳ ಫಲಿತಾಂಶವನ್ನು ಉತ್ತಮ ಪಡಿಸಲು ಸಹಕಾರಿಯಾಗಿದೆ. ಈ ಪರೀಕ್ಷಾ ವ್ಯವಸ್ಥೆಯಿಂದ 2 ನೆ ಸ್ತರ ಹಾಗೂ 3 ನೆ ಸ್ತರದ ಎಸೆಸೆಲ್ಸಿ ಪರೀಕ್ಷೆಯಲ್ಲಿ 11600 ಮಕ್ಕಳು ಉತ್ತೀಣರಾಗಿದ್ದು, ಪಿಯುಸಿಯಲ್ಲಿಯೂ 56 ಸಾವಿರಕ್ಕೂ ಅಧಿಕ ಮಕ್ಕಳು ಉತ್ತೀಣರಾಗಿದ್ದಾರೆ ಎಂದು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…