ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಪ್ರಸಕ್ತ ಸಾಲಿನ ಕೃಷಿ ಇಲಾಖಾ ಯೋಜನೆಗಳ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಮಾಯಕೊಂಡ, ಜಗಳೂರು, ಚನ್ನಗಿರಿ, ಹೊನ್ನಾಳಿ ಭಾಗದಲ್ಲಿ ಮೆಕ್ಕೆಜೋಳ ಬೆಳೆಗೆ ಯೂರಿಯಾವನ್ನು ಮೇಲುಗೊಬ್ಬರವಾಗಿ ಬಳಕೆ ಮಾಡುತ್ತಿದ್ದು ಮುಂದಿನ 15 ದಿನಗಳಲ್ಲಿ ಇದು ಪೂರ್ಣಗೊಳ್ಳಲಿದೆ ಎಂದು ತಿಳಿಸಿದ್ದಾರೆ. ರೈತರು ಯೂರಿಯಾ ಗೊಬ್ಬರವನ್ನು ಹೆಚ್ಚು ಬಳಸದೆ ನ್ಯಾನೋ ಯೂರಿಯಾ ಬಳಕೆಗೆ ಮುಂದಾಗಬೇಕು. ನ್ಯಾನೋ ಯೂರಿಯಾ ಬಳಕೆ ಹರಳು ರೂಪದ ಯೂರಿಯಾಕ್ಕಿಂತಲೂ ಹೆಚ್ಚು ಗುಣಮಟ್ಟ, ಸಮೃದ್ಧತೆ ಹೊಂದಿದೆ ಎಂದು ಮಾಹಿತಿ ನೀಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

