ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ

July 26, 2025
10:13 PM

ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಪ್ರಸಕ್ತ ಸಾಲಿನ ಕೃಷಿ ಇಲಾಖಾ ಯೋಜನೆಗಳ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯಲ್ಲಿ  ಮಾತನಾಡಿದ ಅವರು, ಪ್ರಸ್ತುತ ಮಾಯಕೊಂಡ, ಜಗಳೂರು, ಚನ್ನಗಿರಿ, ಹೊನ್ನಾಳಿ ಭಾಗದಲ್ಲಿ ಮೆಕ್ಕೆಜೋಳ ಬೆಳೆಗೆ ಯೂರಿಯಾವನ್ನು ಮೇಲುಗೊಬ್ಬರವಾಗಿ ಬಳಕೆ ಮಾಡುತ್ತಿದ್ದು ಮುಂದಿನ 15 ದಿನಗಳಲ್ಲಿ ಇದು ಪೂರ್ಣಗೊಳ್ಳಲಿದೆ ಎಂದು ತಿಳಿಸಿದ್ದಾರೆ. ರೈತರು ಯೂರಿಯಾ ಗೊಬ್ಬರವನ್ನು ಹೆಚ್ಚು ಬಳಸದೆ ನ್ಯಾನೋ ಯೂರಿಯಾ ಬಳಕೆಗೆ ಮುಂದಾಗಬೇಕು. ನ್ಯಾನೋ ಯೂರಿಯಾ ಬಳಕೆ ಹರಳು ರೂಪದ ಯೂರಿಯಾಕ್ಕಿಂತಲೂ ಹೆಚ್ಚು ಗುಣಮಟ್ಟ, ಸಮೃದ್ಧತೆ ಹೊಂದಿದೆ ಎಂದು ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 20-10-2026 | ಅ.25ರವರೆಗೆ ಮಳೆ ಸಾಧ್ಯತೆ ; ಅ.26 ರಿಂದ ತಾತ್ಕಾಲಿಕ ಬಿಡುವು?
October 20, 2026
2:23 PM
by: ಸಾಯಿಶೇಖರ್ ಕರಿಕಳ
ರಾವಣನನ್ನು ಸಂಹರಿಸುವುದಕ್ಕಿಂತ ನಮ್ಮೊಳಗಿನ ರಾವಣನನ್ನು ಗೆಲ್ಲುವುದು ಮುಖ್ಯ..!
October 20, 2026
9:51 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಿಜೋರಾಂನಲ್ಲಿ ಅಡಿಕೆ ಕೃಷಿಗೆ ವೈಜ್ಞಾನಿಕ ನೆರವು : ಕೀಟಬಾಧೆ ನಿಯಂತ್ರಣಕ್ಕೆ ಕ್ರಮ, ಕೋಕೋ ಅಂತರಬೆಳೆಗೂ ಚಿಂತನೆ
October 20, 2026
7:18 AM
by: ದ ರೂರಲ್ ಮಿರರ್.ಕಾಂ
ನಿಮ್ಮ ಮನೆಯ ಮೇಲ್ಛಾವಣಿಯೇ ವಿದ್ಯುತ್ ಉತ್ಪಾದನಾ ಕೇಂದ್ರವಾಗಲಿ..!
October 20, 2026
7:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror