ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯ ದಿ. ಪ್ರವೀಣ್ ನೆಟ್ಟಾರು ಹೊಸ ಮನೆಗೆ ಭಾನುವಾರ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಭೇಟಿ ನೀಡಿ ಕುಶಲೋಪರಿ ವಿಚಾರಿಸಿದರು. ಮತಾಂಧರಿಂದ ಹತ್ಯೆಗೀಡಾಗಿದ್ದ ಬಿಜೆಪಿ ಕಾರ್ಯಕರ್ತ ದಿ. ಪ್ರವೀಣ್ ನೆಟ್ಟಾರು ಮನೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಭಾನುವಾರ ಭೇಟಿ ನೀಡಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರವೀಣ್ ನೆಟ್ಟಾರು ಹತ್ಯೆಗೆ ನ್ಯಾಯ ಸಿಗೋವರೆಗೂ ವಿರಮಿಸಲ್ಲ. ಅವರ ಬಲಿದಾನ ಎಂದಿಗೂ ವ್ಯರ್ಥ ಆಗಲ್ಲ. ಪ್ರವೀಣ್ ಅವರ ಕುಟುಂಬಕ್ಕೆ ಸಂವೇದನಾಶೀಲ ಸರ್ಕಾರ ಎಲ್ಲವನ್ನೂ ಮಾಡಿದೆ ಎಂದು ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ನೇತೃತ್ವದಲ್ಲಿ ಪ್ರವೀಣ್ ನೆಟ್ಟಾರು ಹೊಸ ಮನೆ ನಿರ್ಮಾಣವಾಗಿದ್ದು, ಏ. 27ರಂದು ಗೃಹ ಪ್ರವೇಶ ನೆರವೇರಿಸಲಾಗಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel