Advertisement
MIRROR FOCUS

ಕಾಡ್ಗಿಚ್ಚು ನಿಗ್ರಹಕ್ಕೆ ಕಟ್ಟೆಚ್ಚರ ವಹಿಸಲು ಈಶ್ವರ ಖಂಡ್ರೆ ಸೂಚನೆ

Share

ಮುಂಬರುವ ಬೇಸಿಗೆಯಲ್ಲಿ ರಾಜ್ಯದ ಯಾವುದೇ ಕಾಡಿನಲ್ಲಿ ಕಾಡ್ಗಿಚ್ಚಿನಿಂದ ಹಾನಿ ಆಗದಂತೆ ಅಗತ್ಯ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳುವಂತೆ ಮತ್ತು ಕಟ್ಟೆಚ್ಚರ ವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅರಣ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಅವರು ಕುಕ್ಕೆ ಸುಬ್ರಹ್ಮಣ್ಯದ ಕಾಡ್ಗಿಚ್ಚು ನಂದಿಸುವ ಅಣಕು ಕಾರ್ಯಾಚರಣೆ ವೀಕ್ಷಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.  ಈ ಬಾರಿ ರಾಜ್ಯದಲ್ಲಿ ಮಳೆ ಕೊರತೆಯಿಂದ ನೀರಿನ ಸಮಸ್ಯೆ ಇದ್ದು, ಕಾಡ್ಗಿಚ್ಚಿನ ಭೀತಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಅರಣ್ಯದಲ್ಲಿ ಸತತ ನಿಗಾ ಇಟ್ಟು ಯಾವುದೇ ಅಗ್ನಿ ದುರಂತ ಸಂಭವಿಸದಂತೆ ಕಟ್ಟೆಚ್ಚರ ವಹಿಸಲು ಸೂಚಿಸಿದರು.

ಇದಕ್ಕೂ ಮುನ್ನ ಸಚಿವರು ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನಕ್ಕೆ ಭೇಟಿ ನೀಡಿ, ಅರಣ್ಯ ಸಂರಕ್ಷಣೆ ಕುರಿತ ಬೀದಿ ನಾಟಕ ವೀಕ್ಷಿಸಿದರು. ನಂತರ ಕಾಲೇಜು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ಇಂದು ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ವೈಪರೀತ್ಯದಿಂದಾಗಿ ಋತುಮಾನಗಳೇ ಬದಲಾಗಿದೆ. ಕಾಡು ಉಳಿದರೆ ಮಾತ್ರ ನಾಡು ಉಳಿಯಲು ಸಾಧ್ಯ ಎಂದು ತಿಳಿಸಿದರು.ಈ ಭೂಮಿಯಲ್ಲಿ ಹುಟ್ಟಿದ ಪ್ರತಿಯೊಂದು ಜೀವಿಗೂ ನಮ್ಮಂತೆಯೇ ಬದುಕುವ ಹಕ್ಕಿದೆ. ಯುವಜನರು ಪಶು, ಪಕ್ಷಿಗಳೊಂದಿಗೆ ಸಹಬಾಳ್ವೆ ನಡೆಸುವುದನ್ನು ಕಲಿಯಬೇಕು. ಪ್ರಕೃತಿ ಪರಿಸರ ಉಳಿಸಬೇಕು ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

10 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

21 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

22 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

1 day ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

1 day ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

1 day ago