ಅರಣ್ಯದಂಚಿನ ಗ್ರಾಮಗಳಲ್ಲಿ ಆನೆ ಹಾವಳಿ ತಡೆ |ತಮಿಳುನಾಡು ಮಾದರಿ ಅಧ್ಯಯನಕ್ಕೆ ಈಶ್ವರ್ ಖಂಡ್ರೆ ಸೂಚನೆ

December 6, 2024
7:01 AM

ಅರಣ್ಯದಂಚಿನ ಗ್ರಾಮಗಳಲ್ಲಿ ಜೀವ ಮತ್ತು ಬೆಳೆ ಹಾನಿ ಉಂಟು ಮಾಡುತ್ತಿರುವ ಕಾಡಾನೆ ಮತ್ತು ಕಾಡೆಮ್ಮೆ ಹಾವಳಿ ತಡೆಗೆ ಪರ್ಯಾಯ ಮಾರ್ಗೋಪಾಯಗಳ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕಾಡಾನೆ ಹಾವಳಿಗೆ ಪರಿಹಾರ ರೈಲ್ವೆ ಬ್ಯಾರಿಕೇಡ್ ಅಳವಡಿಕೆಯಾಗಿದ್ದು, ಪ್ರತಿ  ಕಿ.ಮೀ. ಬ್ಯಾರಿಕೇಡ್ ಅಳವಡಿಕೆಗೆ ಸುಮಾರು 1ಕೋಟಿ 50 ಲಕ್ಷ ರೂಪಾಯಿ ವೆಚ್ಚವಾಗುತ್ತಿದೆ. ತಮಿಳುನಾಡಿನಲ್ಲಿ ಅಳವಡಿಸಿರುವ ಉಕ್ಕಿನ ಹಗ್ಗದ ತಡೆಗಳಿಗೆ ಪ್ರತಿ ಕಿ.ಮೀ.ಗೆ 45 ಲಕ್ಷ ರೂ. ವೆಚ್ಚವಾಗುತ್ತದೆ.  ಈ ಬಗ್ಗೆ ಪರಿಶೀಲಿಸಿ 10 ದಿನಗಳ ಒಳಗಾಗಿ ವರದಿ ಸಲ್ಲಿಸಲು  ಸೂಚಿಸಿದ್ದಾರೆ. ರಾಜ್ಯದಲ್ಲಿ ಈಗಾಗಲೇ 312 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಅಳವಡಿಸಲಾಗಿದೆ. ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ ಮುನ್ನ ಮತ್ತು ಅಳವಡಿಕೆ ನಂತರದ ಜೀವಹಾನಿ ಮತ್ತು ಬೆಳೆಹಾನಿ ಕುರಿತಂತೆ ತುಲನಾತ್ಮಕ ವರದಿ ಸಲ್ಲಿಸುವಂತೆಯೂ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror