ಅರಣ್ಯದಂಚಿನ ಗ್ರಾಮಗಳಲ್ಲಿ ಜೀವ ಮತ್ತು ಬೆಳೆ ಹಾನಿ ಉಂಟು ಮಾಡುತ್ತಿರುವ ಕಾಡಾನೆ ಮತ್ತು ಕಾಡೆಮ್ಮೆ ಹಾವಳಿ ತಡೆಗೆ ಪರ್ಯಾಯ ಮಾರ್ಗೋಪಾಯಗಳ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕಾಡಾನೆ ಹಾವಳಿಗೆ ಪರಿಹಾರ ರೈಲ್ವೆ ಬ್ಯಾರಿಕೇಡ್ ಅಳವಡಿಕೆಯಾಗಿದ್ದು, ಪ್ರತಿ ಕಿ.ಮೀ. ಬ್ಯಾರಿಕೇಡ್ ಅಳವಡಿಕೆಗೆ ಸುಮಾರು 1ಕೋಟಿ 50 ಲಕ್ಷ ರೂಪಾಯಿ ವೆಚ್ಚವಾಗುತ್ತಿದೆ. ತಮಿಳುನಾಡಿನಲ್ಲಿ ಅಳವಡಿಸಿರುವ ಉಕ್ಕಿನ ಹಗ್ಗದ ತಡೆಗಳಿಗೆ ಪ್ರತಿ ಕಿ.ಮೀ.ಗೆ 45 ಲಕ್ಷ ರೂ. ವೆಚ್ಚವಾಗುತ್ತದೆ. ಈ ಬಗ್ಗೆ ಪರಿಶೀಲಿಸಿ 10 ದಿನಗಳ ಒಳಗಾಗಿ ವರದಿ ಸಲ್ಲಿಸಲು ಸೂಚಿಸಿದ್ದಾರೆ. ರಾಜ್ಯದಲ್ಲಿ ಈಗಾಗಲೇ 312 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಅಳವಡಿಸಲಾಗಿದೆ. ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ ಮುನ್ನ ಮತ್ತು ಅಳವಡಿಕೆ ನಂತರದ ಜೀವಹಾನಿ ಮತ್ತು ಬೆಳೆಹಾನಿ ಕುರಿತಂತೆ ತುಲನಾತ್ಮಕ ವರದಿ ಸಲ್ಲಿಸುವಂತೆಯೂ ತಿಳಿಸಿದ್ದಾರೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…