ರಾಜ್ಯದಲ್ಲೂ ಬೆಲೆ ಏರಿಕೆಯ ಪರ್ವ | ರಾಜ್ಯದ ಜನತೆಗೆ ಮತ್ತೆ ಕರೆಂಟ್ ಶಾಕ್ | ವಿದ್ಯುತ್ ದರ ಏರಿಕೆಗೆ ಕೆಇಆರ್‌ಸಿ ಚಿಂತನೆ

January 5, 2024
2:23 PM

ರಾಜ್ಯದಲ್ಲಿ ವಿದ್ಯುತ್‌(Electricity), ನೀರು(Water), ಪದವಿ ಶಿಕ್ಷಣ(Graduation Fee), ಮದ್ಯದ ಬೆಲೆ(Alcohol) ಹೀಗೆ ಎಲ್ಲಿ ಎಲ್ಲಾ ಸಾಧ್ಯವೋ ಅಲ್ಲೆಲ್ಲಾ ಬೆಲೆ ಏರಿಕೆಯ ಬಿಸಿ ತಟ್ಟಲು ಆರಂಭವಾಗಿದೆ.ಇದೀಗ ವಿದ್ಯುತ್ ದರ ಏರಿಕೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ(KERC) ಚಿಂತನೆ ನಡೆಸಿದೆ. ಪ್ರತಿ ಯೂನಿಟ್‍ಗೆ 50-60 ಪೈಸೆ ಏರಿಕೆಗೆ ಎಸ್ಕಾಂಗಳು ಕೆಇಆರ್‌ಸಿ ಮುಂದೆ ಪ್ರಸ್ತಾವನೆ ಇಟ್ಟಿವೆ. ಇದರಿಂದ ಈ ವರ್ಷ ಏಪ್ರಿಲ್ ತಿಂಗಳಲ್ಲಿ ವಿದ್ಯುತ್ ಬೆಲೆ ಏರಿಕೆಯಾಗುವ (Electricity Rate Hike) ಸಾಧ್ಯತೆ ಇದೆ.

Advertisement

ಯೂನಿಟ್‍ಗೆ 49 ಪೈಸೆ ಏರಿಕೆ ಮಾಡುವಂತೆ ಡಿಸೆಂಬರ್ ಕೊನೆಯ ವಾರದಲ್ಲಿ ಬೆಸ್ಕಾಂ (BESCOM) ಪ್ರಸ್ತಾವನೆ ಸಲ್ಲಿಸಿತ್ತು. ಪ್ರಸ್ತಾವನೆಯಂತೆ ಉತ್ಪಾದನೆಯ ಖರ್ಚು-ವೆಚ್ಚ ಮತ್ತು ನಿರ್ವಹಣೆಯ ನಷ್ಟ ಸರಿದೂಗಿಸುವ ನಿಟ್ಟಿನಲ್ಲಿ ದರ ಏರಿಕೆಗೆ ಕೆಇಆರ್‌ಸಿ ಮುಂದಾಗಿದೆ. ಗೃಹಜ್ಯೋತಿ ಯೋಜನೆ ಮೂಲಕ ಇಡೀ ರಾಜ್ಯದಾದ್ಯಂತ ಉಚಿತ ವಿದ್ಯತ್‌ ನೀಡುತ್ತಿರುವ ಸರ್ಕಾರಕ್ಕೆ ನಷ್ಟದ ಬಿಸಿಯನ್ನು ತಡೆದುಕೊಳ್ಳಲು ಕಷ್ಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇದೀಗಗ ಈ ನಿರ್ಧಾರಕ್ಕೆ ಬಂದಿದೆ. ಇದು ಮತ್ತೆ ಜನಸಾಮಾನ್ಯರ ಮೇಲೆಯೇ ಬರೆ ಎಳೆದಂತಾಗುತ್ತದೆ.

ಸದ್ಯ ಪ್ರಸ್ತಾವನೆ ಪರಿಶೀಲಿಸಲಿರುವ ಆಯೋಗ, ಗ್ರಾಹಕ ಮತ್ತು ಬೆಸ್ಕಾಂ ಇಬ್ಬರಿಗೂ ಹೊರೆಯಾಗದಂತೆ ಏಪ್ರಿಲ್ 1 ರಿಂದಲೇ ಪರಿಷ್ಕೃತ ದರ ಜಾರಿ ಮಾಡುವ ಸಾಧ್ಯತೆಯಿದೆ. ಬೆಸ್ಕಾಂ ಮಾತ್ರವಲ್ಲದೇ ಉಳಿದ ನಾಲ್ಕು ಎಸ್ಕಾಂಗಳಿಂದಲೂ ದರ ಪರಿಷ್ಕರಣೆಗೆ ಪ್ರಸ್ತಾವನೆ ಸಲ್ಲಿಕೆಯಾಗಿದೆ. ನಾಲ್ಕು ಎಸ್ಕಾಂಗಳಿಂದ 50-60 ಪೈಸೆ ದರ ಪರಿಷ್ಕರಣೆಗೆ ಪ್ರಸ್ತಾಪ ಸಲ್ಲಿಕೆಯಾಗಿದೆ. ಎಲ್ಲಾ ಪರಿಷ್ಕೃತ ದರಗಳು ಏಪ್ರಿಲ್ 1 ರಿಂದಲೇ ಜಾರಿಯಾಗುವ ಸಾಧ್ಯತೆ ಇದ್ದು, ರಾಜ್ಯದ ಜನರಿಗೆ ವಿದ್ಯುತ್ ದರದ ಬಿಸಿ ತಟ್ಟಲಿದೆ.

– ಅಂತರ್ಜಾಲ ಮಾಹಿತಿ

The Karnataka Electricity Regulatory Commission (KERC) has contemplated the hike in electricity rates. The Eskoms have put a proposal before KERC for an increase of 50-60 paise per unit. Due to this, there is a possibility of electricity rate hike in the month of April this year. In the last week of December, BESCOM had submitted a proposal to increase the rate by 49 paise per unit. As per the proposal, KERC has proposed to increase the rates to cover the cost of production and maintenance losses.

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಒಂದು ವರ್ಷದಲ್ಲಿ 5600 ಕಿ.ಮೀ. ಹೆದ್ದಾರಿ ನಿರ್ಮಾಣ |
April 3, 2025
7:42 AM
by: The Rural Mirror ಸುದ್ದಿಜಾಲ
81 ಕೋಟಿಗೂ ಹೆಚ್ಚು ಜನರಿಗೆ ಉಚಿತ ಆಹಾರ ಧಾನ್ಯ
April 3, 2025
7:32 AM
by: The Rural Mirror ಸುದ್ದಿಜಾಲ
ಮೇಷ ರಾಶಿಯವರಿಗೆ ಬಹಳ ಶುಭ ದಿನ
April 3, 2025
7:05 AM
by: ದ ರೂರಲ್ ಮಿರರ್.ಕಾಂ
ಹೆಚ್ಚುತ್ತಿರುವ ತಾಪಮಾನ | 2030 ರ ವೇಳೆಗೆ ಭಾರತದಲ್ಲಿ ಶೇ.5 ರಷ್ಟು ಉತ್ಪಾದನೆ ಕುಸಿತ
April 2, 2025
11:46 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group