ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕತ್ತಿಗೆ ಗ್ರಾಮದಲ್ಲಿ ಅರ್ಚಕ ಮಹೇಶ್ವರಯ್ಯ ಆಂಜನೇಯ ಸ್ವಾಮಿ ಮೂರ್ತಿಯ ಮೇಲೆ ಕಾಲಿಟ್ಟು ಪೂಜೆ ಮಾಡಿದ್ದರು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಭಕ್ತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಅರ್ಚಕ ಮಹೇಶ್ವರಯ್ಯ ಕ್ಷಮೆಯಾಚಿಸಿದ್ದಾರೆ.
ಬೇಡರ ಕಣ್ಣಪ್ಪನ ರೀತಿಯಲ್ಲಿ ದೇವರ ಮೂರ್ತಿ ಮೇಲೆ ಕಾಲಿಟ್ಟು ತನ್ನ ಭಕ್ತಿಯನ್ನು ಸಮರ್ಪಿಸಿದ ರೀತಿ ಅರ್ಚಕನೊಬ್ಬ ಆಂಜನೇಯನ ಮೂರ್ತಿ ಮೇಲೆ ಕಾಲಿಟ್ಟು ಅಭಿಷೇಕ ಮಾಡಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತು. ವಿಡಿಯೋ ನೋಡಿ ಭಕ್ತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು.
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಬಳ್ಳೂರ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದಲ್ಲೂ ದೇವರ ಮೂರ್ತಿ ಮೇಲೆ ಕಾಲಿಟ್ಟು ಹಿಂದೆ ವಿವಾದವಾಗಿತ್ತು. ಅಲ್ಲಿನ ಅರ್ಚಕರೂ ಬಳಿಕ ಕ್ಷಮೆಯಾಚನೆ ಮಾಡಿದ್ದರು. ಅದೊಂದು ಸಂಪ್ರದಾಯ ಎಂದು ಆಂಜನೇಯ ದೇವರ ಮೇಲೆ ಕಾಲಿಟ್ಟು ಪೂಜೆ ಮಾಡಿದ್ದೆ. ನನ್ನಿಂದ ತಪ್ಪಾಗಿದೆ ಎಂದು ಅರ್ಚಕ ಹೇಳಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel