Advertisement
MIRROR FOCUS

ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆಗೆ ಪ್ರಧಾನಿ ಕರೆ

Share

ಸ್ಥಳೀಯ ಉತ್ಪನ್ನಗಳನ್ನು ಉತ್ತೇಜಿಸುವುದರೊಂದಿಗೆ ಭಾರತದಲ್ಲೇ ತಯಾರಿಸಿದ ವಸ್ತುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಖರೀದಿಸಬೇಕು ಎಂದು ಪ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.…..ಮುಂದೆ ಓದಿ….

ದೆಹಲಿಯಲ್ಲಿ ಶಾಂತಿ ಮತ್ತು ಆಧ್ಯಾತ್ಮಿಕ ಏಕತೆಗಾಗಿ ಜಾಗತಿಕ ನವಕರ್ ಮಹಾಮಂತ್ರ ದಿವಸ್ ಅಂಗವಾಗಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು, ನವಕರ್ ಮಹಾಮಂತ್ರದ ತತ್ವಶಾಸ್ತ್ರವು ಅಭಿವೃದ್ಧಿ ಹೊಂದಿದ ಭಾರತದ ದೃಷ್ಟಿಕೋನಕ್ಕೆ ಸಂಬಂಧಿಸಿದೆ. ಸ್ಥಳೀಯ ಉತ್ಪನ್ನಗಳನ್ನು ಜಾಗತಿಕ ಮಟ್ಟಕ್ಕೆ ತಕ್ಕಂತೆ  ತಯಾರಿಸುವ ಅಗತ್ಯವಿದೆ ಎಂದರು.  ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು  ಮಾಡುವಂತೆ ಜನತೆಗೆ ಮನವಿ ಮಾಡಿದ ಅವರು, ನೀರನ್ನು ಉಳಿಸುವುದು,  ತಾಯಿಯ ಹೆಸರಿನಲ್ಲಿ ಮರವೊಂದನ್ನು ಪೋಷಿಸುವುದು, ಸ್ವಚ್ಛತೆಯ ಧ್ಯೇಯ, ಸ್ಥಳೀಯ  ಉತ್ಪನ್ನಗಳಿಗೆ ಉತ್ತೇಜನ, ದೇಶೀಯ ಪ್ರವಾಸೋದ್ಯಮ, ನೈಸರ್ಗಿಕ ಕೃಷಿಯನ್ನು ಅಳವಡಿಸಿಕೊಳ್ಳುವುದು, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದು, ಯೋಗ ಮತ್ತು ಕ್ರೀಡೆಗಳನ್ನು ಜೀವನದ ಭಾಗವಾಗಿಸುವುದು ಮತ್ತು ಬಡವರಿಗೆ ಸಹಾಯ ಮಾಡುವುದು ಇದರಲ್ಲಿ ಸೇರಿವೆ ಎಂದರು.

ಭಾರತದ ಇತಿಹಾಸ, ಹೆಗ್ಗುರುತು ಮತ್ತು ಆಧ್ಯಾತ್ಮಿಕ ಪ್ರಯಾಣದಲ್ಲಿ ಜೈನ ಧರ್ಮದ ಮಹತ್ವವನ್ನು ಪ್ರಸ್ತಾಪಿಸಿದ ಅವರು,  ಜೈನ ಸಾಹಿತ್ಯವು ಭಾರತದ ಬೌದ್ಧಿಕ ವೈಭವದ ಬೆನ್ನೆಲುಬಾಗಿದೆ. ಜ್ಞಾನವನ್ನು ಸಂರಕ್ಷಿಸುವ ಸರ್ಕಾರದ ಬದ್ಧತೆಯಂತೆ ಪ್ರಾಕೃತ್ ಮತ್ತು ಪಾಲಿ ಭಾಷೆಗೆ ಶಾಸ್ತ್ರೀಯ ಭಾಷಾ ಸ್ಥಾನಮಾನ ನೀಡಲಾಗಿದೆ. ಜೈನ ಸಮುದಾಯವು ಶತಮಾನಗಳಿಂದ ಸುಸ್ಥಿರ ಜೀವನಶೈಲಿ ಪಾಲಿಸಿಕೊಂಡು ಬಂದಿದೆ.. ಇದು ಭಾರತದ ಮಿಷನ್ ಲೈಫ್‌ಗೆ ಹೊಂದಾಣಿಕೆಯಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ 108ಕ್ಕೂ ಹೆಚ್ಚು ದೇಶಗಳ ಜನರು ಶಾಂತಿ ಮತ್ತು ಒಗ್ಗಟ್ಟಿನಿಂದ ಈ ಜಾಗತಿಕ ಪಠಣದಲ್ಲಿ ಪಾಲ್ಗೊಂಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

14 hours ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

1 day ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

1 day ago

ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ

ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…

1 day ago

ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ

ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…

1 day ago

ಬೆಳಗಾವಿ ರೈತರಿಗೆ ಸಾಲ ಮರುಪಾವತಿಯಲ್ಲಿ ಪರಿಹಾರ ಸಿಗುತ್ತಾ?

ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…

1 day ago