ಧನ ಧಾನ್ಯ ಕೃಷಿ ಯೋಜನೆ ಘೋಷಣೆ | ಯೋಜನೆಗೆ  ರೈತಾಪಿ ವರ್ಗದಿಂದ ಸ್ವಾಗತ

July 19, 2025
9:22 PM

ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ ಇತ್ತೀಚೆಗೆ   ಪ್ರಧಾನ ಮಂತ್ರಿ ಧನ ಧಾನ್ಯ ಕೃಷಿ ಯೋಜನೆಯನ್ನು ಘೋಷಿಸಿದೆ.ದೇಶದ ಆಯ್ದ ನೂರು ಜಿಲ್ಲೆಗಳಲ್ಲಿ  ಮೊದಲ ಹಂತದಲ್ಲಿ ಜಾರಿಗೆ  ಬರಲಿರುವ ಯೋಜನೆ  ಗ್ರಾಮೀಣ ಮಟ್ಟದಲ್ಲಿ ಕೃಷಿ ವಲಯದ ಸುಧಾರಣೆಯ ಗುರಿಯನ್ನು ಹೊಂದಿದೆ.  ಕೃಷಿ ಉತ್ಪಾದನೆ ಹೆಚ್ಚಳ, ಉತ್ಪಾದಕತೆ ಹಾಗೂ ಸುಸ್ಥಿರತೆಗೆ ಆದ್ಯತೆ, ನೀರಾವರಿ ಸೇರಿದಂತೆ ಕೃಷಿ  ವಲಯದ ಸಮಗ್ರ ಅಭಿವೃದ್ಧಿಯ  ಧ್ಯೇಯವನ್ನು ಈ ಯೋಜನೆ  ಹೊಂದಿದೆ.

ಈ ಯೋಜನೆಯು ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವುದು, ಬೆಳೆ ವೈವಿಧ್ಯೀಕರಣ ಮತ್ತು ಸುಸ್ಥಿರ ಕೃಷಿ ಪದ್ಧತಿಗಳ ಅಳವಡಿಕೆಯನ್ನು ಹೆಚ್ಚಿಸುವುದು, ಪಂಚಾಯತ್ ಮತ್ತು ಬ್ಲಾಕ್ ಮಟ್ಟದಲ್ಲಿ ಕೊಯ್ಲಿನ ನಂತರದ ಸಂಗ್ರಹಣೆಯನ್ನು ಹೆಚ್ಚಿಸುವುದು, ನೀರಾವರಿ ಸೌಲಭ್ಯಗಳನ್ನು ಸುಧಾರಿಸುವುದು ಮತ್ತು ದೀರ್ಘಾವಧಿ ಮತ್ತು ಅಲ್ಪಾವಧಿ ಸಾಲದ ಲಭ್ಯತೆಯನ್ನು ಸುಗಮಗೊಳಿಸುವ ಗುರಿಯನ್ನು ಹೊಂದಿದೆ. “ಪ್ರಧಾನ ಮಂತ್ರಿ ಧನ್-ಧಾನ್ಯ ಕೃಷಿ ಯೋಜನೆ” ಅಡಿಯಲ್ಲಿ 100 ಜಿಲ್ಲೆಗಳನ್ನು ಅಭಿವೃದ್ಧಿಪಡಿಸಲು 2025-26 ರ ಬಜೆಟ್ ಪ್ರಸ್ತಾವನೆಗಳ ಭಾಗವಾಗಿ ಈ ಯೋಜನೆಯನ್ನು ಘೋಷಿಸಲಾಗಿದೆ. ಈ ಯೋಜನೆಯನ್ನು 11 ಇಲಾಖೆಗಳಲ್ಲಿ ಅಸ್ತಿತ್ವದಲ್ಲಿರುವ 36 ಯೋಜನೆಗಳು, ಇತರ ರಾಜ್ಯ ಯೋಜನೆಗಳು ಮತ್ತು ಖಾಸಗಿ ವಲಯದೊಂದಿಗೆ ಸ್ಥಳೀಯ ಪಾಲುದಾರಿಕೆಗಳ ಒಗ್ಗೂಡಿಸುವಿಕೆಯ ಮೂಲಕ ಕಾರ್ಯಗತಗೊಳಿಸಲಾಗುತ್ತದೆ.  ಕಡಿಮೆ ಉತ್ಪಾದಕತೆ, ಕಡಿಮೆ ಬೆಳೆ  ಮತ್ತು ಕಡಿಮೆ ಸಾಲ ವಿತರಣೆಯ ಮೂರು ಪ್ರಮುಖ ಸೂಚಕಗಳ ಆಧಾರದ ಮೇಲೆ 100 ಜಿಲ್ಲೆಗಳನ್ನು ಗುರುತಿಸಲಾಗುತ್ತದೆ.

ಈ ಯೋಜನೆ ಗ್ರಾಮೀಣ ಭಾಗದ ರೈತರಿಂದ ಪ್ರತಿಕ್ರಿಯೆ ವ್ಯಕ್ತವಾಗಿದೆ. ಗ್ರಾಮೀಣ ಭಾಗದ ರೈತರಿಗೆ  ಯೋಜನೆಯಿಂದ ಸಹಾಯವಾಗಲಿದೆ.ಹಳ್ಳಿಗಾಡಿನ ರೈತರಿಗೆ ಉತ್ತಮ ಬೆಳೆ ಬೆಳೆಯಲು ಸ್ಫೂರ್ತಿಯಾಗಿದೆ. ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವ ಜೊತೆಗೆ  ನೀರಾವರಿ ಸೌಲಭ್ಯಗಳ ಸುಧಾರಣೆಗೂ ಆದ್ಯತೆ ನೀಡಲಿದೆ.ಯೋಜನೆಯಿಂದ ರೈತರ ಭೂಮಿಯ ಫಲವತ್ತತೆ ಹೆಚ್ಚಲಿದ್ದು, ಉತ್ತಮ  ಕೃಷಿ  ಮಾಡಲು ಅನುಕೂಲವಾಗಲಿದೆ ಎನ್ನುವುದು ರೈತರ ಅಭಿಪ್ರಾಯ. ಈ ಯೋಜನೆಯ ಬಗ್ಗೆ ರೈತರಿಗೆ ಮಾಹಿತಿ ನೀಡುವಲ್ಲಿ ಕೃಷಿ ಅಧಿಕಾರಿಗಳು ಮುಂದಾಗಬೇಕು  ಎನ್ನುತ್ತಾರೆ ರೈತ ಮಾರ್ಬಳ್ಳಿ  ನೀಲಕಂಠ.

ನೀತಿ ಆಯೋಗದ ಮಹತ್ವಾಕಾಂಕ್ಷೆಯ ಪ್ರಧಾನಮಂತ್ರಿ ಧನ-ಧಾನ್ಯ ಕೃಷಿ ಯೋಜನೆ ಜಾರಿಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿರುವುದಕ್ಕೆ ಬೆಳಗಾವಿ ಜಿಲ್ಲೆಯ ರೈತರು ಸಂತಸ ವ್ಯಕ್ತಪಡಿಸಿದ್ದಾರೆ. ಕೃಷಿ ಕ್ಷೇತ್ರಕ್ಕೆ ವಿಶೇಷ ಆದ್ಯತೆ ನೀಡುತ್ತಿರುವುದು ದೇಶದ ಬೆಳವಣಿಗೆಗೆ ಪೂರಕವಾಗಲಿದೆ ಎಂದು ರೈತರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಬೆಳಗಾವಿಯಲ್ಲಿ ಕಬ್ಬು, ಭತ್ತ, ಸೋಯಾಬಿನ್ ಸೇರಿದಂತೆ ಹಲವು ಬೆಳೆಗಳನ್ನು ಬೆಳೆಯಲಾಗುತ್ತದೆ. ಕೇಂದ್ರ ಸರ್ಕಾರದ ನೂತನ ಕೃಷಿ ಯೋಜನೆಯು ಆರ್ಥಿಕವಾಗಿ ರೈತರನ್ನು ಸಬಲೀಕರಣಗೊಳಿಸಲಿದೆ.ಕೃಷಿ ಅಭಿವೃದ್ಧಿಗೆ ವರದಾನವಾಗಲಿದೆ  ಎನ್ನುವ ಆಶಾವಾದವನ್ನು ರೈತರು ವ್ಯಕ್ತಪಡಿಸುತ್ತಾರೆ. ಕೇಂದ್ರ ಸರ್ಕಾರದ ನೂತನ ಕೃಷಿ ಯೋಜನೆಯು ಆರ್ಥಿಕವಾಗಿ ರೈತರನ್ನು ಸಬಲೀಕರಣಗೊಳಿಸಲಿದೆ. ರೈತರು ಮನಸಾರೆ ಹೊಲದಲ್ಲಿ ದುಡಿದರೂ ಕೃಷಿಯಿಂದ ಲಾಭ ದೊರೆಯದೇ ಕಂಗಾಲಾಗುತ್ತಿದ್ದರು.ಕೇಂದ್ರ ಸರ್ಕಾರ ಜಾರಿ ಮಾಡಲಿರುವ ಹೊಸ ಯೋಜನೆಯಿಂದ ಆರ್ಥಿಕ ಪ್ರಗತಿ ಕಾಣಬಹುದಾಗಿದೆ ಎನ್ನುವ ನಿರೀಕ್ಷೆಯನ್ನು ವ್ಯಕ್ತಪಡಿಸಿದ್ದಾರೆ ರೈತ ದೇವಕುಮಾರ್.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ
ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ
October 13, 2026
9:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror