ಹರಿಯಾಣ | 800 ಮೆ.ವ್ಯಾ.ವಿದ್ಯುತ್ ಉತ್ಪಾದನಾ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆ

April 14, 2025
7:40 PM

ಹರಿಯಾಣ ಪ್ರವಾಸದಲ್ಲಿರುವ  ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು ರಾಮ್ ಉಷ್ಣ ವಿದ್ಯುತ್ ಸ್ಥಾವರದ 800 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಘಟಕ ಯೋಜನೆ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು.

Advertisement

ಬಳಿಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶದಲ್ಲಿ ವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಹಲವು ವಿನೂತನ ಯೋಜನೆಗಳು ಜಾರಿಯಲ್ಲಿವೆ. ವಿದ್ಯುತ್ ಕೊರತೆ ನೀಗಿಸಲು ಸರ್ಕಾರ ಬದ್ಧವಾಗಿದೆ. ಇಂಧನ ಸ್ವಾವಲಂಬನೆಯನ್ನು ಆದ್ಯತೆ ವಿಷಯವಾಗಿ ಪರಿಗಣಿಸಲಾಗಿದೆ. ಗ್ರಾಮೀಣಾಭಿವೃದ್ಧಿಯನ್ನು ಆಶಯವಾಗಿ ಹೊಂದಿದ್ದ ಧೀನಬಂಧು ಚೋಟು ರಾಮ್ ಅವರ ಆದರ್ಶಗಳನ್ನು ಸಾಕಾರಗೊಳಿಸಲಾಗುತ್ತಿದೆ ಎಂದರು.

ಹರಿಯಾಣ ರಾಜ್ಯದಲ್ಲಿ 24 ವಿವಿಧ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಲಾಗಿದ್ದು, ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯಡಿ ಆರೂವರೆ ಸಾವಿರ ಕೋಟಿ ರೂಪಾಯಿಗಳನ್ನು ರಾಜ್ಯದ ರೈತರ ಖಾತೆಗಳಿಗೆ ನೇರ ವರ್ಗಾವಣೆ ಮಾಡಲಾಗಿದೆ. ಮುದ್ರಾ ಯೋಜನೆಯಡಿ ಕಳೆದ 10 ವರ್ಷಗಳಲ್ಲಿ ದೇಶಾದ್ಯಂತ 33 ಲಕ್ಷ ಕೋಟಿ ರೂಪಾಯಿ ಗ್ಯಾರಂಟಿ ರಹಿತ ಸಾಲವನ್ನು ಸ್ವಯಂ ಉದ್ಯೋಗಿಗಳಿಗೆ ನೀಡಲಾಗಿದೆ ಎಂದು ವಿವರಿಸಿದರು.

ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್, ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡಿದ್ದರು.

 

 

 

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಒತ್ತುವರಿಯಾಗಿರುವ  ಕೆರೆಗಳನ್ನು ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿ ಸೂಚನೆ
April 25, 2025
7:47 AM
by: The Rural Mirror ಸುದ್ದಿಜಾಲ
ಭಾರತದಿಂದ ಅಫ್ಘಾನಿಸ್ತಾನಕ್ಕೆ 4.8 ಟನ್ ಜೀವರಕ್ಷಕ ಲಸಿಕೆ ರವಾನೆ
April 25, 2025
7:42 AM
by: The Rural Mirror ಸುದ್ದಿಜಾಲ
ಭ್ರಷ್ಟಾಚಾರದ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ  | ಉಪಲೋಕಾಯುಕ್ತ ಬಿ. ವೀರಪ್ಪ ಎಚ್ಚರಿಕೆ
April 25, 2025
7:31 AM
by: The Rural Mirror ಸುದ್ದಿಜಾಲ
ಶುಕ್ರ ಮತ್ತು ರಾಹು ಮೀನ ರಾಶಿಯಲ್ಲಿ ಸಂಯೋಗ | 5 ರಾಶಿಚಕ್ರಗಳಲ್ಲಿ ವಿಶೇಷ ಪ್ರಭಾವ |
April 25, 2025
7:27 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group