ಹರಿಯಾಣ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು ರಾಮ್ ಉಷ್ಣ ವಿದ್ಯುತ್ ಸ್ಥಾವರದ 800 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಘಟಕ ಯೋಜನೆ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶದಲ್ಲಿ ವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಹಲವು ವಿನೂತನ ಯೋಜನೆಗಳು ಜಾರಿಯಲ್ಲಿವೆ. ವಿದ್ಯುತ್ ಕೊರತೆ ನೀಗಿಸಲು ಸರ್ಕಾರ ಬದ್ಧವಾಗಿದೆ. ಇಂಧನ ಸ್ವಾವಲಂಬನೆಯನ್ನು ಆದ್ಯತೆ ವಿಷಯವಾಗಿ ಪರಿಗಣಿಸಲಾಗಿದೆ. ಗ್ರಾಮೀಣಾಭಿವೃದ್ಧಿಯನ್ನು ಆಶಯವಾಗಿ ಹೊಂದಿದ್ದ ಧೀನಬಂಧು ಚೋಟು ರಾಮ್ ಅವರ ಆದರ್ಶಗಳನ್ನು ಸಾಕಾರಗೊಳಿಸಲಾಗುತ್ತಿದೆ ಎಂದರು.
ಹರಿಯಾಣ ರಾಜ್ಯದಲ್ಲಿ 24 ವಿವಿಧ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಲಾಗಿದ್ದು, ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯಡಿ ಆರೂವರೆ ಸಾವಿರ ಕೋಟಿ ರೂಪಾಯಿಗಳನ್ನು ರಾಜ್ಯದ ರೈತರ ಖಾತೆಗಳಿಗೆ ನೇರ ವರ್ಗಾವಣೆ ಮಾಡಲಾಗಿದೆ. ಮುದ್ರಾ ಯೋಜನೆಯಡಿ ಕಳೆದ 10 ವರ್ಷಗಳಲ್ಲಿ ದೇಶಾದ್ಯಂತ 33 ಲಕ್ಷ ಕೋಟಿ ರೂಪಾಯಿ ಗ್ಯಾರಂಟಿ ರಹಿತ ಸಾಲವನ್ನು ಸ್ವಯಂ ಉದ್ಯೋಗಿಗಳಿಗೆ ನೀಡಲಾಗಿದೆ ಎಂದು ವಿವರಿಸಿದರು.
ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್, ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡಿದ್ದರು.
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…
ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…
ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…
ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…
ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…
ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…