ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಿದರು. ಬೆಂಗಳೂರು ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲಿರುವ 108 ಅಡಿ ಎತ್ತರದ ಪ್ರತಿಮೆ ಇದಾಗಿದೆ.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಸಚಿವ ಆರ್. ಅಶೋಕ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಆದಿ ಚುಂಚನಗಿರಿ ಮಹಾಮಠದ ನಿರ್ಮಲನಾನಂದ ಸ್ವಾಮೀಜಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಇದರ ಜೊತೆಗೆ ಕನಸದಾಸರ ಪ್ರತಿಮೆಗೆ ಪ್ರಧಾನಿ ನರೇಂದ್ರ ಮೋದಿ ನಮಿಸಿದರು. ಕೆಂಪೇಗೌಡರ ಕಂಚಿನ ಪ್ರತಿಮೆಯ ಎತ್ತರ 108 ಅಡಿ ಇದ್ದು, 218 ಟನ್ ತೂಕದ ಪ್ರತಿಮೆ ಇದಾಗಿದೆ. ಪ್ರತಿಮೆ ನಿರ್ಮಾಣಕ್ಕೆ ಮಾಡಿದ 84 ಕೋಟಿ ಖರ್ಚಾಗಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel