Advertisement
MIRROR FOCUS

ವಿಶ್ವದ ಪ್ರತಿ ಡೈನಿಂಗ್ ಟೇಬಲ್ ಮೇಲೆ ಭಾರತದ ಒಂದಲ್ಲ ಒಂದು ಉತ್ಪನ್ನ ಇರಬೇಕು | ಕಿಸಾನ್ ಸಮ್ಮಾನ್ ಯೋಜನೆಯಡಿ 20 ಸಾವಿರ ಕೋಟಿ ಬಿಡುಗಡೆ ಮಾಡಿದ ಪ್ರಧಾನಿ ಮೋದಿ |

Share

ಎಂದಿನಂತೆ ಈ ಬಾರಿಯೂ ಕಿಸಾನ್ ನಿಧಿಯನ್ನು (PM-Kisan Samman Nidhi) ಪ್ರಧಾನಿ ಮೋದಿ ರಿಲೀಸ್ ಮಾಡಿದ್ದಾರೆ. ದೇಶದ ಒಟ್ಟು 9.26 ಕೋಟಿ ರೈತರ(Farmer) ಖಾತೆಗಳಿಗೆ(Account) 20 ಸಾವಿರ ಕೋಟಿ  ಬಿಡುಗಡೆ ಮಾಡಿದರು. ಮೂರನೇ ಬಾರಿಗೆ ಪ್ರಧಾನಿಯಾದ ನಂತರ ಪಿಎಂ ಕಿಸಾನ್ ನಿಧಿಗೆ ಸಂಬಂಧಿಸಿದ ಕಡತಕ್ಕೆ ಮೋದಿ (Narendra Modi) ಮೊದಲ ಸಹಿ ಹಾಕಿದ್ರು. ಇಂದು ಸ್ವಕ್ಷೇತ್ರದಲ್ಲಿ ನಡೆದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಸಮ್ಮೇಳನದಲ್ಲಿ, ಕೃಷಿ ಸಖಿಯರಾಗಿ ತರಬೇತಿ ಹೊಂದಿದ ಸ್ವಯಂ ಸಹಾಯಕ ತಂಡಗಳ ಮಹಿಳೆಯರಿಗೆ(Women) ಮೋದಿ ಪ್ರಮಾಣಪತ್ರ ವಿತರಿಸಿದರು. ಬಳಿಕ ವಾರಣಾಸಿಯ ದಶಾಶ್ವಮೇಧ ಘಾಟ್‍ನಲ್ಲಿ ನಡೆಯುವ ಗಂಗಾರತಿಯಲ್ಲಿ ಪ್ರಧಾನಿ ಮೋದಿ ಭಾಗಿಯಾದರು.

Advertisement
Advertisement

ಇದೇ ವೇಳೆ ವಾರಣಾಸಿಯಲ್ಲಿ ನಡೆದ ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನದಲ್ಲಿ ಮಾತನಾಡಿದ ಅವರು, ಮೂರನೇ ಅವಧಿಯಲ್ಲಿ ರೈತರು ಮತ್ತು ಬಡವರಿಗೆ ಸಂಬಂಧಿಸಿದ ಮೊದಲ ನಿರ್ಧಾರ ತೆಗೆದುಕೊಂಡಿದ್ದೇನೆ. ದೇಶದಲ್ಲಿ ಬಡವರಿಗಾಗಿ ಮೂರು ಕೋಟಿ ಮನೆ ನಿರ್ಮಾಣ ಮಾಡುವ ಗುರಿ ಇದೆ. ಕಿಸಾನ್ ಸಮ್ಮಾನ್ ನಿಧಿ ಮುಂದುವರಿಸಲು ನಿರ್ಧಾರ ಕೈಗೊಂಡಿದ್ದೇವೆ. ಈ ಯೋಜನೆಯು ಕೋಟ್ಯಂತರ ಜನರಿಗೆ ಲಾಭ ಮಾಡಲಿದೆ. ಇಂದು ಕೋಟ್ಯಂತರ ರೈತರು ನಮ್ಮ ಜೊತೆಗೆ ಸೇರಿದ್ದಾರೆ. ಕಿಸಾನ್ ಸಮ್ಮಾನ್ ನಿಧಿ ವಿಶ್ವದ ಅತಿದೊಡ್ಡ ಡಿಬಿಟಿ ಯೋಜನೆಯಾಗಿದೆ. ತಂತ್ರಜ್ಞಾನ ಬಳಸಿಕೊಂಡು ಫಲಾನುಭವಿಗೆ ನೇರ ಸರ್ಕಾರದ ಯೋಜನೆ ತಲುಪಿಸುತ್ತಿದೆ. ಯೋಜನೆಗೆ ಸೇರಲು ನಿಯಮಗಳನ್ನು ಇನ್ನಷ್ಟು ಸಡಿಲಿಸಲಾಗಿದೆ. ಕೃಷಿಯಲ್ಲಿ ನಾವು ಇನ್ನಷ್ಟು ಸ್ವಾವಲಂಬಿಯಾಗಬೇಕಿದೆ ಎಂದು ಹೇಳಿದರು. ಭಾರತದ ಹಲವಾರು ತರಕಾರಿ ವಿದೇಶಿ ಮಾರುಕಟ್ಟೆ ತಲುಪುತ್ತಿದೆ. ಒಂದು ಜಿಲ್ಲೆ, ಒಂದು ಉತ್ಪನ್ನ ಯೋಜನೆಯಿಂದ ರಫ್ತು ಹೆಚ್ಚುತ್ತಿದೆ. ವಿಶ್ವದ ಪ್ರತಿ ಡೈನಿಂಗ್ ಟೇಬಲ್ ಮೇಲೆ ಭಾರತದ ಒಂದಲ್ಲ ಒಂದು ಉತ್ಪನ್ನ ಇರಬೇಕು ಎನ್ನುವುದು ನನ್ನ ಗುರಿ ಎಂದು ಅವರು ತಿಳಿಸಿದರು.

Advertisement
ಕೃಷಿ ಸಖಿ ಯೋಜನೆ ಮೂಲಕ ಮಹಿಳೆಯರನ್ನು ಕೃಷಿಯಲ್ಲಿ ಗುರುತಿಸಲಾಗುವುದು. ಇದು ಲಕ್ ಪತಿ ದೀದಿಯನ್ನಾಗಿಸಲು ಅನುಕೂಲವಾಗಲಿದೆ. ಡೈರಿಗಳ ನಿರ್ಮಾಣದಿಂದ ರೈತರ ಬದುಕು ಬದಲಾಗಿದೆ. ಹಾಲಿನ ಉತ್ಪನ್ನ ದೊಡ್ಡ ಪ್ರಮಾಣ ಹೆಚ್ಚಾಗಿದೆ. ರೈತರಿಗೆ ಆರ್ಥಿಕವಾಗಿ ಶಕ್ತಿ ತುಂಬಿದೆ. 40 ಸಾವಿರ ಜನರು ಸೋಲಾರ್ ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಕಾಶಿ ಸುತ್ತಮುತ್ತಲಿನ ಸಾರಿಗೆ ಸಂಪರ್ಕ ಹೆಚ್ಚಿಸಿರುವುದು ಆರ್ಥಿಕತೆಗೆ ದೊಡ್ಡ ಶಕ್ತಿ ಸಿಕ್ಕಿದೆ ಎಂದು ಹೇಳಿದರು.
  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ‌ ಹಳದಿ ರೋಗಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ | ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಅಡಿಕೆ ಕೊಳೆರೋಗ ಮತ್ತು ಹಳದಿ ರೋಗದ ಬಗ್ಗೆ ಸಂಶೋಧನೆ ಮಾಡಿ ಸರಿಯಾದ ಕ್ರಮಗಳು…

6 hours ago

ಗ್ರಾಮೀಣ ಶಾಲೆಗೆ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಹಾಗೂ ಲೇಖನ ಸಾಮಾಗ್ರಿ ಕೊಡುಗೆ |

ಸುಳ್ಯ ತಾಲೂಕಿನ ಬೆಳ್ಳಾರೆ ಬಳಿಯ “ಗೋಕುಲ ಕಾಂಪ್ಲೆಕ್ಸ್” ಅಯ್ಯನಕಟ್ಟೆ ಇದರ ಮಾಲೀಕರಾದ  ರಾಮಚಂದ್ರ…

6 hours ago

ಬೋಲೇ ಬಾಬಾ ಮತ್ತು 125 ಸಾವು….. : ಉತ್ತರ ಪ್ರದೇಶದ ಹತ್ರಾಸ್ ಭೀಕರ ಘಟನೆ…….

ಇದು ಆಕಸ್ಮಿಕವೇ, ಅಪಘಾತವೇ, ಅನಿರೀಕ್ಷಿತವೇ, ಅನಿವಾರ್ಯವೇ, ಅಜ್ಞಾನವೇ, ಮೂರ್ಖತನವೇ,‌ ಸ್ವಯಂಕೃತಾಪರಾಧವೇ, ಸಹಜವೇ, ಅಸಹಜವೇ,…

8 hours ago

ಅಡಿಕೆ ಜಗಿಯುವುದರಿಂದ ಆಯಾಸ ದೂರ | ಅಧ್ಯಯನ ವರದಿಗೆ ಪೂರಕ ಮಾಹಿತಿ | ಊಟದ ನಂತರ ಅಡಿಕೆ ಪುಡಿ ಸೇವನೆ ಉತ್ತಮ ಪರಿಣಾಮ |

ಅಡಿಕೆ ಜಗಿಯುವುದರಿಂದ ಆಯಾಸ ದೂರವಾಗುತ್ತದೆ ಹಾಗೂ ಕರುಳಿನ ಚಟುವಟಿಕೆ ಹೆಚ್ಚಾಗುತ್ತದೆ ಎನ್ನುವ ಅಧ್ಯಯನವೊಂದು…

8 hours ago

ಸಹಜ ಕೃಷಿಯತ್ತ ರೈತರ ಚಿತ್ತ | ಚಾಮರಾಜನಗರ ಜಿಲ್ಲೆಯಲ್ಲಿ ಸಹಜ ಕೃಷಿಯನ್ನು ಅಳವಡಿಸಲು ರೈತರಿಗೆ ನೆರವು ನೀಡಲು ಕಾರ್ಯ ಯೋಜನೆ |

ಚಾಮರಾಜನಗರ ಜಿಲ್ಲೆಯ ಒಟ್ಟು 130 ಗ್ರಾಮ ಪಂಚಾಯಿತಿಗಳ ಪೈಕಿ ಕನಿಷ್ಠ 50 ಪಂಚಾಯಿತಿಗಳನ್ನು…

8 hours ago