ಲೋಕ ಸಮರದ ಜಿದ್ದಾ ಜಿದ್ದಿನಲ್ಲಿ ಅಭ್ಯರ್ಥಿಗಳಿಗಿಂತ(Candidate) ಹೆಚ್ಚು ಸ್ಟಾರ್ ಪ್ರಚಾರಕರಿಗೇ(Star Campaigner) ಡಿಮ್ಯಾಂಡ್ ಜಾಸ್ತಿ. ಅದರಲ್ಲೂ ಪ್ರಧಾನಿ ಮೋದಿ(PM Modi) ವಿರುದ್ಧ ವಿರೋಧ ಪಕ್ಷಗಳ ಅಭ್ಯರ್ಥಿಗಳು, ನಾಯಕರುಗಳು(Leaders) ಟೀಕೆ ಮಾಡಲು ಕಾಯುತ್ತಿರುತ್ತಾರೆ. ಇದೀಗ ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾನುವಾರ ಕರ್ನಾಟಕಕ್ಕೆ(Karnataka) ಭೇಟಿ ನೀಡಲಿದ್ದಾರೆ. ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿಗೆ ಬೆಂಗಳೂರು ಉತ್ತರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜೀವ್ ಗೌಡ (Rajeev Gowda) ಹಲವು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.
15 ನೇ ಹಣಕಾಸು ಆಯೋಗದ ರಿಪೋರ್ಟ್ ಏನಿದೆ? ಕರ್ನಾಟಕಕ್ಕೆ 5,400 ಕೋಟಿ ಶಿಫಾರಸು ಮಾಡಿತ್ತು. ಅದರ ಬಗ್ಗೆ ಯಾಕೆ ಚಕಾರವಿಲ್ಲ. ಇಂಪ್ಲಿಮೆಂಟ್ ಮಾಡ್ತೇವೆ ಅಂದವರು ಯಾಕೆ ಮಾಡಿಲ್ಲ? ಫೈನಾನ್ಸ್ ಕಮಿಷನ್ ರೆಕಮೆಂಡೇಷನ್ ಮಾಡಿತ್ತು. ಯಾಕೆ ಹಣವನ್ನ ನಮಗೆ ಬಿಡುಗಡೆ ಮಾಡಿಲ್ಲ? ಪೆರಿಪೆರಲ್ ರಿಂಗ್ ರಸ್ತೆಗೆ ಹಣ ಯಾಕೆ ಕೊಟ್ಟಿಲ್ಲ. ಪ್ರಧಾನಿ, ಸಬರಬನ್ ರೈಲು ಉದ್ಘಾಟಿಸಿದರು. 40 ತಿಂಗಳಲ್ಲಿ ಯೋಜನೆ ಪೂರ್ಣ ಎಂದಿದ್ರಿ. ಈಗ 20 ತಿಂಗಳಾಯ್ತು, ಎಲ್ಲಿ ಹೋಯ್ತು ಯೋಜನೆ? ಬರ ಪರಿಹಾರದ ಬಗ್ಗೆ ಗಮನವೇ ಕೊಟ್ಟಿಲ್ಲ. 223 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹೆಚ್ಚಿದೆ. ಗ್ರಾಮೀಣ ಭಾಗದ ಜನ ಸಂಕಷ್ಟದಲ್ಲಿದ್ದಾರೆ. ಇಲ್ಲಿಯವರೆಗೆ ಪರಿಹಾರದ ಹಣ ಕೊಟ್ಟಿಲ್ಲ ಎಂದು ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ನಾ ಕಾವೂಂಗಾ ನಾ ಕಾನೇ ದೂಂಗಾ ಅಂತೀರ. ನಮ್ಮ ಎಂಪಿಯೊಬ್ಬರ ಮೇಲೆ ಇಡಿ ಕೇಸ್ ಇದೆ. ಅವರನ್ನ ಯಾಕೆ ಸಚಿವ ಸಂಪುಟಕ್ಕೆ ತೆಗೆದುಕೊಂಡ್ರಿ. ಶೋಭಾ ಅವರ ಮೇಲೆ 44 ಕೋಟಿ ರೂ. ಆರೋಪವಿದೆ. ಅವರನ್ನ ಹೇಗೆ ಸಚಿವೆಯನ್ನಾಗಿ ಮಾಡಿದ್ರಿ. ಇದು ನ್ಯಾಯಕ್ಕೆ ವಿರುದ್ಧವಾದುದು. ಶೋಭಾ ಕರಂದ್ಲಾಜೆ ಅವರನ್ನ ತಕ್ಷಣ ಕೆಳಗಿಳಿಸಿ, ಎಲೆಕ್ಟ್ರೋ ಬಾಂಡ್‌ನಲ್ಲಿ ದೊಡ್ಡ ಭ್ರಷ್ಟಾಚಾರ ಆಗಿದೆ. ಇಡಿ ರೇಡ್ ಮಾಡಿಸ್ತೀರ. ನಂತರ ಹಣವನ್ನ ಕಲೆಕ್ಟ್ ಮಾಡ್ತೀರ. ಭ್ರಷ್ಟಾಚಾರ ಅಂದ್ರೆ ಮೋದಿ ಸರ್ಕಾರ ಬರುತ್ತೆ. ನಮ್ಮ ರಾಜ್ಯಕ್ಕೆ ಬಂದಾಗ ಉತ್ತರ ಕೊಡಬೇಕು ಎಂದು ಟಾಂಗ್ ಕೊಟ್ಟಿದ್ದಾರೆ.
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಕೊಡಗಿನ…
ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…
ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…
ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…
ರಾಜ್ಯದೆಲ್ಲೆಡೆ ಇಂದು ನಾಗರಪಂಚಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ…
ಕೊಪ್ಪಳ ಜಿಲ್ಲೆಯಲ್ಲಿ ಜುಲೈ ಅಂತ್ಯದವರಿಗೆ 2 ಲಕ್ಷ ಹೆಕ್ಟೇರ್ ಪ್ರದೇಶದ ಬಿತ್ತನೆಯ ಗುರಿ…