ಹತ್ತು ವರ್ಷಗಳಲ್ಲಿ ಸೌರ ವಿದ್ಯುತ್ ಕ್ಷೇತ್ರದಲ್ಲಿ ಭಾರತವು 32 ಪಟ್ಟು ಪ್ರಗತಿಯನ್ನು ಸಾಧಿಸಿದೆ | ಅಂತರಾಷ್ಟ್ರೀಯ ಸೌರ ಉತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ |

September 5, 2024
8:28 PM

ಕಳೆದ ಹತ್ತು ವರ್ಷಗಳಲ್ಲಿ ಸೌರ ವಿದ್ಯುತ್ ಕ್ಷೇತ್ರದಲ್ಲಿ ಭಾರತವು 32 ಪಟ್ಟು ಪ್ರಗತಿಯನ್ನು ಸಾಧಿಸಿದೆ. 2015ರಲ್ಲಿ ಹುಟ್ಟುಹಾಕಿದ ಅಂತರರಾಷ್ಟ್ರೀಯ ಸೌರ ಒಕ್ಕೂಟ ಇಂದು ಹೆಮ್ಮರವಾಗಿ ಬೆಳೆದಿದೆ. ಅತ್ಯಂತ ಕಡಿಮೆ ಸಮಯದಲ್ಲಿ 100 ದೇಶಗಳು ಒಕ್ಕೂಟದ ಸದಸ್ಯರಾಗಿವೆ. 19 ದೇಶಗಳು ಪೂರ್ಣ ಸದಸ್ಯತ್ವವನ್ನು ಸಾಧಿಸುವ ಮೂಲಕ ಸೌರ ವಿದ್ಯುತ್ ಕ್ಷೇತ್ರದಲ್ಲಿ ಬಹುದೊಡ್ಡ ಕೊಡುಗೆ ನೀಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

Advertisement
Advertisement
Advertisement
Advertisement

ಅವರು ಮೊದಲ ಅಂತರಾಷ್ಟ್ರೀಯ ಸೌರ ಉತ್ಸವ ಪ್ರಯುಕ್ತ ಜನತೆಯನ್ನು ಉದ್ದೇಶಿಸಿ ಮಾತನಾಡಿದರು.  ಭಾರತವು ಹಸಿರು ಇಂಧನ ಕ್ಷೇತ್ರದಲ್ಲಿ ದಾಪುಗಾಲು ಇಟ್ಟಿದೆ. ಇದು ನಮ್ಮ ಸೌರಶಕ್ತಿಯ ಸಾಮರ್ಥ್ಯವನ್ನು 32 ಪಟ್ಟು ಹೆಚ್ಚಿಸುವಲ್ಲಿ ಪ್ರಮುಖ ಕಾರಣವಾಗಿದೆ. ಕಳೆದ 10 ವರ್ಷಗಳಲ್ಲಿ ಸೌರ ವಿದ್ಯುತ್ ಕ್ಷೇತ್ರವು ವೇಗ ಪಡೆದುಕೊಂಡಿದೆ. 2030 ರ ವೇಳೆಗೆ 500 ಗಿಗಾ ವ್ಯಾಟ್ ಪಳೆಯುಳಿಕೆ ರಹಿತ ಸಾಮರ್ಥ್ಯವನ್ನು ಸಾಧಿಸುವ ನಿಟ್ಟಿನಲ್ಲಿ ಭಾರತ ಮುನ್ನುಡಿ ಬರೆದಿದೆ ಎಂದು ಹೇಳಿದರು.

Advertisement

ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ ಅಡಿ ಇದಾಗಲೇ ಲಕ್ಷಾಂತರ ಮಂದಿಗೆ ಉಚಿತ ಸೌರ ವಿದ್ಯುತ್ ಕಲ್ಪಿಸಲಾಗಿದೆ. ಸೌರ ಉತ್ಪಾದನೆಯನ್ನು ಉತ್ತೇಜಿಸುವ ಮೂಲಕ ಸುಸ್ಥಿರ ಶಕ್ತಿಯ ಮೂಲಗಳ ಅಗತ್ಯತೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಒಂದು ಕೋಟಿ ಮನೆಗಳಿಗೆ ಇದನ್ನು ವಿಸ್ತರಿಸುವ ಯೋಜನೆ ರೂಪಿಸಲಾಗಿದೆ. ಸೌರ ವಿದ್ಯುತ್ ಅನ್ನು ಮಾರಾಟ ಮಾಡುವ ಮೂಲಕವೂ ಕೃಷಿಕರು ಆದಾಯ ಗಳಿಸಲು ಈ ಯೋಜನೆ ಸಹಕಾರಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ
ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |
February 20, 2025
6:58 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror