ಕಳೆದ ಹತ್ತು ವರ್ಷಗಳಲ್ಲಿ ಸೌರ ವಿದ್ಯುತ್ ಕ್ಷೇತ್ರದಲ್ಲಿ ಭಾರತವು 32 ಪಟ್ಟು ಪ್ರಗತಿಯನ್ನು ಸಾಧಿಸಿದೆ. 2015ರಲ್ಲಿ ಹುಟ್ಟುಹಾಕಿದ ಅಂತರರಾಷ್ಟ್ರೀಯ ಸೌರ ಒಕ್ಕೂಟ ಇಂದು ಹೆಮ್ಮರವಾಗಿ ಬೆಳೆದಿದೆ. ಅತ್ಯಂತ ಕಡಿಮೆ ಸಮಯದಲ್ಲಿ 100 ದೇಶಗಳು ಒಕ್ಕೂಟದ ಸದಸ್ಯರಾಗಿವೆ. 19 ದೇಶಗಳು ಪೂರ್ಣ ಸದಸ್ಯತ್ವವನ್ನು ಸಾಧಿಸುವ ಮೂಲಕ ಸೌರ ವಿದ್ಯುತ್ ಕ್ಷೇತ್ರದಲ್ಲಿ ಬಹುದೊಡ್ಡ ಕೊಡುಗೆ ನೀಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಅವರು ಮೊದಲ ಅಂತರಾಷ್ಟ್ರೀಯ ಸೌರ ಉತ್ಸವ ಪ್ರಯುಕ್ತ ಜನತೆಯನ್ನು ಉದ್ದೇಶಿಸಿ ಮಾತನಾಡಿದರು. ಭಾರತವು ಹಸಿರು ಇಂಧನ ಕ್ಷೇತ್ರದಲ್ಲಿ ದಾಪುಗಾಲು ಇಟ್ಟಿದೆ. ಇದು ನಮ್ಮ ಸೌರಶಕ್ತಿಯ ಸಾಮರ್ಥ್ಯವನ್ನು 32 ಪಟ್ಟು ಹೆಚ್ಚಿಸುವಲ್ಲಿ ಪ್ರಮುಖ ಕಾರಣವಾಗಿದೆ. ಕಳೆದ 10 ವರ್ಷಗಳಲ್ಲಿ ಸೌರ ವಿದ್ಯುತ್ ಕ್ಷೇತ್ರವು ವೇಗ ಪಡೆದುಕೊಂಡಿದೆ. 2030 ರ ವೇಳೆಗೆ 500 ಗಿಗಾ ವ್ಯಾಟ್ ಪಳೆಯುಳಿಕೆ ರಹಿತ ಸಾಮರ್ಥ್ಯವನ್ನು ಸಾಧಿಸುವ ನಿಟ್ಟಿನಲ್ಲಿ ಭಾರತ ಮುನ್ನುಡಿ ಬರೆದಿದೆ ಎಂದು ಹೇಳಿದರು.
ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ ಅಡಿ ಇದಾಗಲೇ ಲಕ್ಷಾಂತರ ಮಂದಿಗೆ ಉಚಿತ ಸೌರ ವಿದ್ಯುತ್ ಕಲ್ಪಿಸಲಾಗಿದೆ. ಸೌರ ಉತ್ಪಾದನೆಯನ್ನು ಉತ್ತೇಜಿಸುವ ಮೂಲಕ ಸುಸ್ಥಿರ ಶಕ್ತಿಯ ಮೂಲಗಳ ಅಗತ್ಯತೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಒಂದು ಕೋಟಿ ಮನೆಗಳಿಗೆ ಇದನ್ನು ವಿಸ್ತರಿಸುವ ಯೋಜನೆ ರೂಪಿಸಲಾಗಿದೆ. ಸೌರ ವಿದ್ಯುತ್ ಅನ್ನು ಮಾರಾಟ ಮಾಡುವ ಮೂಲಕವೂ ಕೃಷಿಕರು ಆದಾಯ ಗಳಿಸಲು ಈ ಯೋಜನೆ ಸಹಕಾರಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…
ರಾಜ್ಯದಲ್ಲಿ ತುಮಕೂರು, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಹೆಚ್ಚಾಗಿ ಹುಣಸೆಹಣ್ಣು ಬೆಳೆಯಲಾಗುತ್ತಿದೆ. ಈ…
ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಗೆ 200…
ಗ್ರಾಹಕರಿಗೆ ಗುಣಮಟ್ಟದ ಜೇನುತುಪ್ಪ ದೊರಕುವಂತೆ ಮಾಡಲು ಹಾಗೂ ಜೇನು ಕೃಷಿಕರ ಆರ್ಥಿಕ ಮಟ್ಟ…