ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿ, ನಮ್ಮ ದೇಶದ ಸಂಸ್ಕೃತಿ ಹಾಗೂ ನಮ್ಮ ದೇಶದ ಸೇನೆಗೆ ಮೊದಲ ಪ್ರಾಶಸ್ತ್ಯ ನೀಡ್ತಾರೆ. ಪ್ರತೀ ವರ್ಷ ಅವರು ದೀಪಾವಳಿ ಹಬ್ಬವನ್ನು ಸೇನೆಯೊಂದಿಗೆ ಆಚರಿಸಿಕೊಳ್ಳುತ್ತಾರೆ. ಅದರಂತೆ ಈ ಬಾರಿಯೂ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ದೀಪಾವಳಿಯನ್ನು (Deepavali) ಸೈನಿಕರೊಂದಿಗೆ (Soldiers) ಆಚರಿಸಲು ಚೀನಾ (China) ಗಡಿಗೆ ಹೊಂದಿಕೊಂಡಿರುವ ಹಿಮಾಚಲ ಪ್ರದೇಶದ (Himachal Pradesh) ಲೆಪ್ಚಾಗೆ (Lepcha) ತೆರಳಿದ್ದಾರೆ.
ಭಾನುವಾರ ಬೆಳಗ್ಗೆ ದೂರದ ಗ್ರಾಮವನ್ನು ತಲುಪಿದ ಪ್ರಧಾನಿ ಮೋದಿ, ನಮ್ಮ ವೀರ ಭದ್ರತಾ ಪಡೆಗಳೊಂದಿಗೆ ದೀಪಾವಳಿಯನ್ನು ಆಚರಿಸಲು ಹಿಮಾಚಲ ಪ್ರದೇಶದ ಲೆಪ್ಚಾವನ್ನು ತಲುಪಿದ್ದೇನೆ ಎಂದು ಎಕ್ಸ್‌ನಲ್ಲಿ (X) ಬರೆದುಕೊಂಡಿದ್ದಾರೆ. ಇದಕ್ಕೂ ಮೊದಲು ಪ್ರಧಾನಿ ಮೋದಿ, ದೇಶದ ಜನರಿಗೆ ಒಳ್ಳೆಯ ಆರೋಗ್ಯ ಲಭಿಸಲಿ ಎಂದು ದೀಪಾವಳಿಯ ಶುಭಾಶಯಗಳನ್ನು ಕೋರಿದ್ದಾರೆ.
ಎಲ್ಲರಿಗೂ ದೀಪಾವಳಿಯ ಶುಭಾಶಯಗಳು. ಈ ವಿಶೇಷ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಒಳ್ಳೆಯ ಆರೋಗ್ಯವನ್ನು ತರಲಿ ಎಂದು ಟ್ವೀಟ್ ಮಾಡುವ ಮೂಲಕ ಜನತೆಗೆ ದೀಪಾವಳಿಯ ಸಂದೇಶವನ್ನು ಸಾರಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ದೇಶದ ಗಡಿ ಕಾಯುವ ಸೈನಿಕರೊಂದಿಗೆ ದೀಪಾವಳಿಯನ್ನು ಆಚರಿಸುವ ಸಂಪ್ರದಾಯವನ್ನು ಹಿಂದಿನಿಂದಲೂ ಹೊಂದಿದ್ದಾರೆ. 2014ರಲ್ಲಿ ಅಧಿಕಾರ ವಹಿಸಿಕೊಂಡಾಗಿನಿಂದ, ಅವರು ಸಶಸ್ತ್ರ ಪಡೆಗಳೊಂದಿಗೆ ಬೆಳಕಿನ ಹಬ್ಬವನ್ನು ಕಳೆಯಲು, ಅವರ ತ್ಯಾಗಕ್ಕೆ ಕೃತಜ್ಞತೆಯನ್ನು ವ್ಯಕ್ತಪಡಿಸಲು ದೂರದ ಸ್ಥಳಗಳಿಗೆ ಪ್ರಯಾಣಿಸುವುದನ್ನು ರೂಢಿಸಿಕೊಂಡಿದ್ದಾರೆ.
Prime Minister Narendra Modi has gone to Lepcha in Himachal Pradesh bordering China to celebrate Deepavali with soldiers. Reaching a remote village on Sunday morning, PM Modi wrote in X that he reached Lepcha in Himachal Pradesh to celebrate Diwali with our brave security forces. Earlier, Prime Minister Modi wished the people of the country good health on Diwali.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…