ಮೋದಿ 3.0 ಸರ್ಕಾರ ರಚನೆಗೆ ಸಿದ್ಧತೆ | ಖಾತೆ ಹಂಚಿಕೆ ಬಗ್ಗೆ ಚರ್ಚೆ |

June 6, 2024
3:08 PM
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ NDA ಸರ್ಕಾರ ರಚನೆಯ ಪ್ರಯತ್ನಗಳಿಗೆ ಚಾಲನೆ ದೊರೆತಿದೆ. ಈ ನಡುವೆ ಖಾತೆ ಹಂಚಿಕೆ ಸೂತ್ರಗಳ ಬಗ್ಗೆಯೂ ಚರ್ಚೆ ನಡೆದಿದೆ ಎಂದು ವರದಿಯಾಗಿದೆ. ಜೂ.9 ರಂದು ಸಂಜೆ ಪ್ರಮಾಣವಚನ ಸಮಾರಂಭ ನಡೆಯುವ ಸಾಧ್ಯತೆ ಇದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ NDA ಸರ್ಕಾರ ರಚನೆಯ ಪ್ರಯತ್ನಗಳಿಗೆ ಚಾಲನೆ ದೊರೆತಿದೆ. ಈ ನಡುವೆ ಬಿಜೆಪಿಯ ಹಿರಿಯ ನಾಯಕರು ಗುರುವಾರ ಸಮಾಲೋಚನೆ ನಡೆಸಿದರು. ಖಾತೆ ಹಂಚಿಕೆ ಬಗ್ಗೆಯೂ ಕೆಲವು ಸೂತ್ರಗಳ ಬಗ್ಗೆ ಚರ್ಚೆ ನಡೆಸಿದರು ಎಂದು ಮಾಧ್ಯಮ ವರದಿ ತಿಳಿಸಿದೆ.

Advertisement

ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರ ನಿವಾಸದಲ್ಲಿ ಭೇಟಿಯಾದ ಬಿಜೆಪಿ ಹಿರಿಯ ನಾಯಕರು, ಮುಂಬರುವ ಸರ್ಕಾರದಲ್ಲಿ ಮಂತ್ರಿಮಂಡಲ ರಚನೆ, ಖಾತೆಗಳ ಹಂಚಿಕೆ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಮಾಧ್ಯಮ ಮೂಲಗಳಿಂದ ತಿಳಿದುಬಂದಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಸಚಿವ ಸ್ಥಾನಗಳನ್ನು ಹಂಚಿಕೊಳ್ಳಲು ಸೂತ್ರವೊಂದನ್ನು ರಚಿಸಿಕೊಂಡಿದೆ.  ವರದಿಗಳ ಪ್ರಕಾರ, ಪ್ರತಿ ನಾಲ್ಕು ಸಂಸದರಿಗೆ, ಆ ಪಕ್ಷವು ಒಬ್ಬ ಕ್ಯಾಬಿನೆಟ್ ಮಂತ್ರಿಯನ್ನು ಪಡೆಯುತ್ತದೆ. ಹೀಗಾಗಿ ಟಿಡಿಪಿ 16 ಸಂಸದರನ್ನು ಹೊಂದಿದ್ದರೆ, ಅದು 4 ಕ್ಯಾಬಿನೆಟ್ ಮಂತ್ರಿಗಳನ್ನು ಪಡೆಯುವ ಸಾಧ್ಯತೆಯಿದೆ . 12 ಸಂಸದರನ್ನು ಹೊಂದಿರುವ ಜೆಡಿಯು 3 ಕ್ಯಾಬಿನೆಟ್ ಮಂತ್ರಿಗಳನ್ನು ಪಡೆಯಬಹುದು. 7 ಸಂಸದರನ್ನು ಹೊಂದಿರುವ ಶಿವಸೇನೆ ಎರಡು ಕ್ಯಾಬಿನೆಟ್ ಸಚಿವ ಸ್ಥಾನಗಳನ್ನು ಪಡೆಯಬಹುದು ಮತ್ತು ಐದು ಸಂಸದರನ್ನು ಹೊಂದಿರುವ ಎಲ್‌ಜೆಪಿ ರಾಮ್ ವಿಲಾಸ್ ಅವರು ಒಂದು ಕ್ಯಾಬಿನೆಟ್ ಮಂತ್ರಿಯನ್ನು ಪಡೆಯಬಹುದು ಎಂದು ವರದಿಯಾಗಿದೆ. ಈ ನಡುವೆ, ಗೃಹ, ಹಣಕಾಸು, ರಕ್ಷಣೆ, ವಿದೇಶಾಂಗ ವ್ಯವಹಾರಗಳಂತಹ ದೊಡ್ಡ ಸಚಿವಾಲಯಗಳನ್ನು ತನ್ನೊಂದಿಗೆ ಇರಿಸಿಕೊಳ್ಳಲು ಬಿಜೆಪಿ ನಿರ್ಧರಿಸಿದೆ ಎಂದು ವರದಿಯಾಗಿದೆ.

ಎನ್‌ಡಿಎ ಸರ್ಕಾರದಲ್ಲಿ ಕೃಷಿ ಖಾತೆಯಲ್ಲಿ ತಮ್ಮ ಪಕ್ಷವು ಆಸಕ್ತಿ ಹೊಂದಿದೆ ಎಂದು ಜೆಡಿಎಸ್ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬುಧವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡುತ್ತಾ ಹೇಳಿದ್ದಾರೆ, ತಮ್ಮ ಪಕ್ಷದ ಆಸಕ್ತಿ ಕೃಷಿ ಇಲಾಖೆಯಲ್ಲಿದೆ ,ಏನು ನಿರ್ಧಾರಗಳು ಆಗುತ್ತವೆ ಎಂಬುದನ್ನು ನೋಡೋಣ, ಮೊದಲಿನಿಂದಲೂ ನಮ್ಮ ಹೋರಾಟ ರೈತ ಸಮುದಾಯಕ್ಕೆ ಒಳಿತಾಗುವ ನಿಟ್ಟಿನಲ್ಲಿದೆ ಎಂದು ಕುಮಾರಸ್ವಾಮಿ ಹೇಳಿದರು.

ಮೂಲಗಳ ಪ್ರಕಾರ ಜೂನ್ 9 ರಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಈ ಮೊದಲು ಜೂನ್ 8 ರಂದು ಸಮಾರಂಭ ನಡೆಯಬೇಕಿತ್ತು ಆದರೆ ಈಗ ಭಾನುವಾರ ಸಂಜೆ 6 ಗಂಟೆಗೆ ನಡೆಯಲಿದೆ ಎಂದೂ ವರದಿಯಾಗಿದೆ. ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಮತ್ತು ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಲ್ ಸೇರಿದಂತೆ ವಿಶ್ವ ನಾಯಕರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ,  8,000 ಕ್ಕೂ ಹೆಚ್ಚು ಗಣ್ಯರ ಉಪಸ್ಥಿತಿ ಇರಲಿದೆ ಎಂದು ವರದಿಯಾಗಿದೆ.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಾಮಾಜಿಕ ಕಾರ್ಯಕರ್ತ ಧನಂಜಯ ವಾಗ್ಲೆ ಇನ್ನಿಲ್ಲ | ಅವರು ಬರೆದಿರುವ ಓದಲೇಬೇಕಾದ ಬರಹ ಇಲ್ಲಿದೆ…
July 13, 2025
5:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-07-2025 | ಇಂದು ಸಾಮಾನ್ಯ ಮಳೆ | ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ – ಏಕೆ?
July 13, 2025
2:14 PM
by: ಸಾಯಿಶೇಖರ್ ಕರಿಕಳ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶರಧಿ.ಡಿ.ಎಸ್
July 13, 2025
8:14 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕೃತಿಕಾ
July 13, 2025
8:01 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group