ಕೃಷಿ ಕ್ಷೇತ್ರದ ನಂತರ ಜವಳಿ ಕ್ಷೇತ್ರದಲ್ಲಿ ಅತಿ ಹೆಚ್ಚು ಉದ್ಯೋಗ ಸೃಷ್ಟಿಗೆ ಅವಕಾಶವಿದ್ದು, ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಅಗತ್ಯ ಕಾರ್ಯಯೋಜನೆಗಳನ್ನು ರೂಪಿಸಿ ಜಾರಿಗೆ ತಂದಿದೆ ಎಂದು ಕೇಂದ್ರ ಜವಳಿ ಖಾತೆ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ.
ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೂರನೇ ಅವಧಿಯ ನೂರು ದಿನಗಳು ಪೂರೈಸಿದ ಹಿನ್ನೆಲೆಯಲ್ಲಿ ತಮ್ಮ ಸಚಿವಾಲಯದಲ್ಲಾಗಿರುವ ಪ್ರಗತಿ ಹಾಗೂ ಸಾಧನೆಗಳ ಕುರಿತು ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.ಪಿಎಂ ಮಿತ್ರ ಯೋಜನೆಯಡಿ ಮೆಗಾ ಜವಳಿ ಪಾರ್ಕ್ ಗಳನ್ನು ನಿರ್ಮಾಣ ಮಾಡಲಾಗುತ್ತದೆ. ಈಗಾಗಲೇ ಜವಳಿ ಕ್ಷೇತ್ರದಲ್ಲಿ 11 ವಿವಿಧ ಯೋಜನೆಗಳಿಗೆ ಚಾಲನೆ ನೀಡಲಾಗಿದೆ. ಹೊಸತಂತ್ರಜ್ಞಾನ ಅಳವಡಿಕೆ ಮತ್ತು ಆವಿಷ್ಕಾರಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ 4 ನವೋದ್ಯಮಗಳ ಆರಂಭಕ್ಕೆ ಮಂಜೂರಾತಿ ನೀಡಲಾಗಿದೆ ಎಂದರು.ವಿನ್ಯಾಸ , ಹೊಸ ಆವಿಷ್ಕಾರ ಮತ್ತು ಅಭಿವೃದ್ಧಿ , ಸಂಶೋಧನೆಗೂ ಒತ್ತು ನೀಡಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel