Advertisement
MIRROR FOCUS

ಕೃಷಿ ವಲಯದ ಅಭಿವೃದ್ಧಿಗೆ ಆದ್ಯತೆ – ಪಿಎಂ ಧನ-ಧಾನ್ಯ ಕೃಷಿ ಯೋಜನೆ ಜಾರಿಗೆ ಸಮ್ಮತಿ

Share

ಕೇಂದ್ರ ಸರ್ಕಾರ ಕೃಷಿ ವಲಯದ ಅಭಿವೃದ್ಧಿಗೆ ಆದ್ಯತೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಕನಿಷ್ಟ ಕೃಷಿ ಉತ್ಪಾದನೆ ಹೊಂದಿರುವ ದೇಶದ 100 ಜಿಲ್ಲೆಗಳಲ್ಲಿ ‘ಪಿಎಂ ಧನ-ಧಾನ್ಯ ಕೃಷಿ ಯೋಜನೆ’ಯನ್ನು ಜಾರಿಮಾಡಲು ಕೇಂದ್ರ ಸಚಿವ ಸಂಪುಟ ಸಮ್ಮತಿ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯ ಬಳಿಕ ಮಾಹಿತಿ ನೀಡಿದ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್, ಪಿಎಂ ಧನ-ಧಾನ್ಯ  ಕೃಷಿ ಯೋಜನೆ ಸೇರಿದಂತೆ ಮೂರು ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಹೇಳಿದರು.

ಪಿಎಂ ಧನ-ಧಾನ್ಯ ಕೃಷಿ ಯೋಜನೆ 2025-26 ರಿಂದ ಮುಂದಿನ 6 ವರ್ಷಗಳ ಅವಧಿಗೆ ದೇಶಾದ್ಯಂತ 100 ಜಿಲ್ಲೆಗಳಲ್ಲಿ ಜಾರಿಯಾಗಲಿದೆ. ಈ ಯೋಜನೆಗೆ 24 ಸಾವಿರ ಕೋಟಿ  ರೂಪಾಯಿ ಅನುದಾನ ನೀಡಲಾಗುವುದು. ಒಟ್ಟಾರೆ 11 ಸಚಿವಾಲಯಗಳ 36 ಯೋಜನೆಗಳನ್ನು ಸಮನ್ವಯಗೊಳಿಸಿ, ಕೇಂದ್ರೀಕೃತ ಮಾದರಿಯಲ್ಲಿ ಜಿಲ್ಲೆಗಳ ಅಭಿವೃದ್ಧಿಗೆ ಒತ್ತು ನೀಡಲಾಗುವುದು. ರಾಜ್ಯ ಸರ್ಕಾರ ಹಾಗೂ ಕೃಷಿ ವಲಯಕ್ಕೆ ಸಂಬಂಧಸಿದ ಎಲ್ಲ ಪಾಲುದಾರರ ಸಹಭಾಗಿತ್ವದಲ್ಲಿ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಹೇಳಿದರು. ದೇಶದ 1 ಕೋಟಿ 70 ಲಕ್ಷ ರೈತರಿಗೆ ಇದರಿಂದ ಅನುಕೂಲವಾಗಲಿದೆ. ಈ ಯೋಜನೆಯಡಿ ಕೃಷಿ ಉತ್ಪಾದಕತೆ ಹೆಚ್ಚಿಸುವುದು, ಬೆಳೆಗಳ ವೈವಿಧ್ಯೀಕರಣ , ಸುಸ್ಥಿರ ಪದ್ಧತಿ, ನೀರಾವರಿ ಸೌಲಭ್ಯ, ಪಂಚಾಯಿತಿ ಮಟ್ಟದಲ್ಲಿ ಕೃಷಿ ಉತ್ಪನ್ನಗಳ ಗೋದಾಮುಗಳ ಸ್ಥಾಪನೆ ಹಾಗೂ ಸಾಲ ಸೌಲಭ್ಯದ ನೆರವು ನೀಡಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ-ಎನ್ ಟಿ ಪಿಸಿಯ ಬಲವರ್ಧನೆಗೆ ಕ್ರಮಕೈಗೊಳ್ಳಲಾಗಿದ್ದು, ಮರು ಬಳಕೆ ಇಂಧನ ವಲಯದಲ್ಲಿ 20 ಸಾವಿರ ಕೋಟಿ ರೂಪಾಯಿ ಹೂಡಿಕೆಗೆ ಅನುಮತಿ ನೀಡಲಾಗಿದೆ. ವಿದ್ಯುತ್ ಉತ್ಪಾದನೆಯನ್ನು 2032 ರೊಳಗೆ 60 ಗಿಗಾ ವ್ಯಾಟ್ ಗೆ ಏರಿಸುವ ಗುರಿ ಹೊಂದಲಾಗಿದೆ. ಹಾಗೆಯೇ ನೈವೇಲಿ ಲಿಗ್ನೈಟ್ ಕಾರ್ಪೋರೇಷನ್ ಗೂ ಸಹ ಮರುಬಳಕೆ ಇಂಧನ ವಲಯದಲ್ಲಿ ಹೂಡಿಕೆ ಮಾಡಲು ಸಚಿವ ಸಂಪುಟ ಅನುಮೋದಿಸಿದೆ ಎಂದು ಹೇಳಿದರು. ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ ಕಾರ್ಯನಿರ್ವಹಿಸಿ,  ಭೂಮಿಗೆ ವಾಪಸ್ಸಾಗಿರುವ ಭಾರತೀಯ ವಾಯುಸೇನೆಯ  ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರಿಗೆ ಅಭಿನಂದನೆ ಸಲ್ಲಿಸುವ ಪ್ರಸ್ತಾವನೆಯನ್ನು ಅನುಮೋದಿಸಲಾಗಿದೆ. ಅವರು ದೇಶದ ಯುವ ಜನತೆಗೆ ಪ್ರೇರಣೆಯಾಗಿದ್ದಾರೆ. ಈ ಯಶಸ್ಸು ಭಾರತದ ಗಗನಯಾನದ ಗುರಿ ತಲುಪುವಲ್ಲಿ ಮತ್ತೊಂದು ಹೆಜ್ಜೆಯನ್ನು ಇಟ್ಟಂತಾಗಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

2 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

21 hours ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

1 day ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

2 days ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

2 days ago