ಕೃಷಿ ಬೆಳವಣಿಗೆಯ ಬಗ್ಗೆ ಮಿಜೋರಾಂ ಸರ್ಕಾರವು ಆದ್ಯತೆ ನೀಡುತ್ತಿದೆ. ಕಳೆದ ಕೆಲವು ಸಮಯಗಳಿಂದ ಕೃಷಿ ಬೆಳವಣಿಗೆ ಹಾಗೂ ಕೃಷಿಕರಿಗೆ ಆದ್ಯತೆಯನ್ನು ನೀಡುತ್ತಿದೆ, ಪ್ರೋತ್ಸಾಹದ ಯೋಜನೆಗಳನ್ನು ಹಮ್ಮಿಕೊಂಡಿದೆ. ಅಡಿಕೆ ಬೆಳೆಗೂ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಮೌಲ್ಯವರ್ಧನೆ ಹಾಗೂ ಮಾರುಕಟ್ಟೆ ಕಡೆಗೂ ಗಮನಹರಿಸಿದೆ. ಇದೀಗ ಮಿಜೋರಾಂನ ಕೋಲಾಸಿಬ್ ಮತ್ತು ಮಾಮಿತ್‌ಗಳಲ್ಲಿ ಅಡಿಕೆ ಸಂಸ್ಕರಣಾ ಘಟಕಗಳ ಸ್ಥಾಪಿಸಲು ಸಿದ್ಧತೆ ನಡೆಯುತ್ತಿದೆ.
ಮಿಜೋರಾಂ ಮುಖ್ಯಮಂತ್ರಿ ಲಾಲ್ದುಹೋಮ ಅವರು ಈ ಬಗ್ಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ್ದಾರೆ. ಯೋಜನೆಗಳ ಪ್ರಗತಿಯ ಕುರಿತು ಮಾತನಾಡಿದ ಭೂ ಸಂಪನ್ಮೂಲ ಕಾರ್ಯದರ್ಶಿ ಲಾಲ್‌ಸಾಂಗ್ಲಿಯಾನ, ಈಶಾನ್ಯ ಮಂಡಳಿಯ (ಎನ್‌ಇಸಿ) ಆರ್ಥಿಕ ನೆರವಿನೊಂದಿಗೆ ಕೊಲಾಸಿಬ್‌ನ ಚಂಫೈ ಮತ್ತು ಮಾಮಿತ್ ಜಿಲ್ಲೆಯ ಜಮುವಾಂಗ್‌ನಲ್ಲಿ ಅಡಿಕೆ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ರಾಜ್ಯದ ವಿವಿಧ ಭಾಗಗಳಲ್ಲಿ ರಬ್ಬರ್, ಕಾಫಿ, ಅಡಿಕೆಯಂತಹ ವಾಣಿಜ್ಯ ಬೆಳೆಗಳಿಗೆ ಆದ್ಯತೆ ನೀಡಲಾಗಿದೆ. ಈ ಎಲ್ಲಾ ಕೃಷಿಗಳಿಗೂ ಅಗತ್ಯವಾದ ಕೃಷಿ ಸಂಪರ್ಕ ರಸ್ತೆಗಳ ನಿರ್ಮಾಣ, ಗೋದಾಮುಗಳ ನಿರ್ಮಾಣವನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಇದೇ ವೇಳೆ, ರೈತರು ಎದುರಿಸುತ್ತಿರುವ ಸವಾಲುಗಳಿಂದಾಗಿ, ಮುಂದಿನ ವರ್ಷದಿಂದ ಪೊರಕೆ ಕಡ್ಡಿಗಳ ಗ್ರೇಡಿಂಗ್ ನಿಲ್ಲಿಸಲು ನಿರ್ಧರಿಸಲಾಯಿತು. ಸರ್ಕಾರವು ರೈತರಿಂದ ಶುಂಠಿ, ಅರಿಶಿನ, ಮಿಜೋ ಮೆಣಸಿನಕಾಯಿ ಮತ್ತು ಪೊರಕೆ ಕಡ್ಡಿಗಳನ್ನು ಖರೀದಿಸುತ್ತಿದೆ ಎಂದೂ ವಿವರಿಸಿದರು. ಮಿಜೋರಾಂನಲ್ಲಿ ಕಾಫಿ ಕೃಷಿಯನ್ನು ಉತ್ತೇಜಿಸಲು ನಿರ್ಧರಿಸಲಾಯಿತು ಮತ್ತು ರಬ್ಬರ್ ಕ್ಲಸ್ಟರ್‌ಗಳಿಗೆ 100 ಸಬ್ಸಿಡಿ ರಬ್ಬರ್ ರೋಲಿಂಗ್ ಯಂತ್ರಗಳನ್ನು ಒದಗಿಸಲಾಗುವುದು ಎಂದು ಹೇಳಿಕೆ ತಿಳಿಸಿದ್ದಾರೆ.
(ಸುದ್ದಿ ಮೂಲ :ಪಿಟಿಐ)
ಕೇರಳದಲ್ಲಿ ಸುಮಾರು ಒಂದು ಲಕ್ಷ ಹೆಕ್ಟೇರ್ ಪ್ರದೇಶದ ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಸ್ಥಗಿತವಾಗಿದೆ.
ಕರಾವಳಿ ಹಾಗೂ ಮಲೆನಾಡು ಭಾಗರದಲ್ಲಿ ಜುಲೈ 6 ರಿಂದ ಮಳೆಯ ಪ್ರಮಾಣ ಸ್ವಲ್ಪ…
ನಾವೊಂದು ಯೋಚನೆ ಮಾಡಿದ್ದೇವೆ. ಎಲ್ಲಾ ಕಡೆ ಮಕ್ಕಳು ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ನಗರ…
ವೃಷಭ ರಾಶಿಯಲ್ಲಿ ಶುಕ್ರನ ಸಂಚಾರ ಒಂದು ಶುಭಕರವಾದ ಮತ್ತು ಧನವೃದ್ಧಿಯ ತತ್ವವನ್ನು ಸಾರುವ…
ಅನೇಕ ವರ್ಷಗಳ ಬೇಡಿಕೆ-ಹೋರಟದ ಬಳಿಕ ಬೃಹತ್ ಸೇತುವೆಯೊಂದು ನಿರ್ಮಾಣವಾಗಿದೆ. ಅಂಬಾರಗೂಡ್ಲು-ಕಳಸವಳ್ಳಿ ಸೇತುವೆಯ ಹೋರಾಟದ…
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯದ ಗ್ರಾಮೀಣ ಪ್ರದೇಶಗಳ ಗ್ರಾಮ ಪಂಚಾಯತಿ…