Advertisement
MIRROR FOCUS

ತ್ರಿಪುರಾದಲ್ಲಿ ಅಡಿಕೆ ಬೆಳೆ ವಿಸ್ತರಣೆಯ ಜೊತೆಗೇ ಉಪಬೆಳೆಗೆ ಆದ್ಯತೆ..!

Share

ತ್ರಿಪುರಾದಲ್ಲಿ ಅಡಿಕೆ ಬೆಳೆ ವಿಸ್ತರಣೆಗೆ ಸರ್ಕಾರ ಪ್ರೋತ್ಸಾಹ ನೀಡುವುದರ ಜೊತೆಗೇ ಉಪಬೆಳೆಯಾಗಿ ಕೊಕೋ ಬೆಳೆಯಲು ಕೂಡಾ ಉತ್ತೇಜನ ನೀಡುತ್ತಿದೆ. ಈಗಾಗಲೇ ಅಡಿಕೆ ಹಾಗೂ ಕೊಕೋ ಕೂಡಾ ಬೆಳೆಯಲು ಅನುಕೂಲಕರ ಕೃಷಿ ಹವಾಮಾನ ಪರಿಸ್ಥಿತಿ ಇರುವುದರಿಂದ ಕೊಕೋ ಬೆಳೆಗೆ ಭರವಸೆಯ ವಲಯವೆಂದು ಗುರುತಿಸಲ್ಪಟ್ಟಿದೆ. ಹೀಗಾಗಿ ಕೊಕೋ ಬೆಳೆಯ ಬಗ್ಗೆಯೂ ಈಗ ತರಬೇತಿ ಆರಂಭವಾಗಿದೆ.

ವೈಜ್ಞಾನಿಕ ಕೊಕೋ ಕೃಷಿ ಮತ್ತು ಮೌಲ್ಯವರ್ಧನೆಯ ಬಗ್ಗೆ ಜಾಗೃತಿ ಮೂಡಿಸುವ ಗುರಿಯನ್ನು ಕೂಡಾ ಸರ್ಕಾರ ಹೊಂದಿದೆ. ವಿಶೇಷವಾಗಿ ಉತ್ತರ ತ್ರಿಪುರಾದಲ್ಲಿ  ಕೊಕೋವನ್ನು  ಅಡಿಕೆ ಆಧಾರಿತ ಬೆಳೆ ವ್ಯವಸ್ಥೆಗಳೊಂದಿಗೆ ಪರಿಣಾಮಕಾರಿಯಾಗಿ ಅಂತರ ಬೆಳೆಯಾಗಿ ಬೆಳೆಯಬಹುದು ಎಂದು ಮಾಹಿತಿ ನೀಡಲಾಗಿದೆ.  ಭಾರತ ಸರ್ಕಾರದ ಕೃಷಿ ಸಚಿವಾಲಯವು ಈಶಾನ್ಯ ಪ್ರದೇಶದಲ್ಲಿ ಕೊಕೋ ಕೃಷಿ ಪ್ರದೇಶವನ್ನು 50,000 ಹೆಕ್ಟೇರ್‌ಗಳಿಗೆ ವಿಸ್ತರಿಸಲು ಸಲಹೆ ನೀಡಿದೆ. ತ್ರಿಪುರಾ ಕೃಷಿಕರು ಈ ವಿಸ್ತರಣಾ ಅಭಿಯಾನದಿಂದ ಪ್ರಯೋಜನ ಪಡೆಯುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದೇ ವೇಳೆ  ಸಿಪಿಸಿಆರ್‌ಐ ಅಭಿವೃದ್ಧಿಪಡಿಸಿದ ತಂತ್ರಜ್ಞಾನವನ್ನು ಬಳಸಿಕೊಂಡು ಸಣ್ಣ ಉದ್ಯಮಿಗಳು ಮತ್ತು ಸ್ವಸಹಾಯ ಗುಂಪುಗಳಿಗೆ  “ಬೀನ್ ಟು ಬಾರ್” ಚಾಕೊಲೇಟ್ ಘಟಕದ ಬಗ್ಗೆಯೂ ಮಾಹಿತಿ ನೀಡಲಾಗಿದೆ.

ತ್ರಿಪುರಾದಲ್ಲಿ ಸರ್ಕಾರದ ನೆರವಿನೊಂದಿಗೆ ಅಡಿಕೆ ಬೆಳೆ ವಿಸ್ತರಣೆ ಹಾಗೂ ಉಪಬೆಳೆಯ ಕಡೆಗೂ ಆದ್ಯತೆ ನೀಡಲಾಗುತ್ತಿದೆ. ಅನೇಕ ವರ್ಷಗಳಿಂದ ಅಡಿಕೆ ಬೆಳೆಯುವ ಪ್ರದೇಶಗಳಲ್ಲಿ ಈಗಷ್ಟೇ ಉಪ ಬೆಳೆಯ ಬಗ್ಗೆ ಗಂಭೀರ ಚಿಂತನೆ ನಡೆಯುತ್ತಿದೆ. ಅಡಿಕೆಯ ಜೊತೆಗೆ ಈಗ ಕೊಕೋ, ಕಾಫಿ, ಕಾಳುಮೆಣಸು ಮೊದಲಾದ ಉಪಬೆಳೆಯೂ ಅಗತ್ಯವಿದೆ.  ಕೃಷಿ, ಗ್ರಾಮೀಣ, ಪರಿಸರ ಸುದ್ದಿಗಳಿಗಾಗಿ ನಮ್ಮ ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿ…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

18 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

3 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago