ಸರ್ವೋಚ್ಚ ನ್ಯಾಯಾಲಯವು ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ (ಬಿ.ಪಿ.ಎಲ್) ನೀಡಲು ಆದೇಶಿಸಿದ್ದು, ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ನೀಡುವ ಕಾರ್ಯ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರಾರಂಭವಾಗಿರುತ್ತದೆ. ಆದ್ದರಿಂದ ಆದ್ಯತಾ ಪಡಿತರ ಚೀಟಿ ಹೊಂದಿಲ್ಲದ ಇ-ಶ್ರಮ್ ನೋಂದಾಯಿತ ಎಲ್ಲಾ ಅರ್ಹ ಕಾರ್ಮಿಕರು ನಿಮ್ಮ ಹತ್ತಿರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯನ್ನು ಸಂಪರ್ಕಿಸುವುದು. ಹೆಚ್ಚಿನ ಮಾಹಿತಿಗಾಗಿ ಟೋಲ್ ಫ್ರೀ ದೂರವಾಣಿ ಸಂಖ್ಯೆ:1800-425-9339 ಅಥವಾ ಸಹಾಯವಾಣಿ 1967 ಕ್ಕೆ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.30 ಗಂಟೆಯವರೆವಿಗೂ ಸಂಪರ್ಕಿಸುವಂತೆ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…