ಬೆಂಗಳೂರು ತಂತ್ರಜ್ಞಾನ ಮತ್ತು ಕೈಗಾರಿಕಾ ಪ್ರಗತಿಯ ಸಂಕೇತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮೆಟಲ್ಸ್ ಜಿಕೆವಿಕೆ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ 78ನೇ ವಾರ್ಷಿಕ ತಾಂತ್ರಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸುಮಾರು 1700 ರಷ್ಟು ಹೆಚ್ಚು ತಜ್ಞರನ್ನು ಒಗ್ಗೂಡಿಸಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು. ಕೈಗಾರಿಕೆಗಳಲ್ಲಿ ಹಸಿರು ತಂತ್ರಜ್ಞಾನ ಅಳವಡಿಸಿಕೊಳ್ಳಲು ಕರ್ನಾಟಕ ಆದ್ಯತೆ ನೀಡುತ್ತಿದೆ ಎಂದು ಸ್ಪಷ್ಟಪಡಿಸಿದರು. ರಾಜ್ಯದಲ್ಲಿನ 669 ಹೂಡಿಕೆ ಯೋಜನೆಗಳು, 90,027 ಕೋಟಿ ಹೂಡಿಕೆಯೊಂದಿಗೆ ಸುಮಾರು 1,73,741 ಲಕ್ಷ ಜನರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಕಾರಣವಾಗಿದೆ. 2024 ರ ಅಂತ್ಯದ ವೇಳೆಗೆ ಕರ್ನಾಟಕವು 54427 ಕೋಟಿ ಹೂಡಿಕೆಯೊಂದಿಗೆ ರಾಷ್ಟ್ರ ಮಟ್ಟದಲ್ಲಿ ಮೂರನೇ ಸ್ಥಾನ ಪಡೆಯುವ ಗುರಿ ಹೊಂದಿದೆ ಎಂದು ತಿಳಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು…
ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್ ಫ್ರುಟ್(ಕಮಲಂ) ಹಾಗೂ…
ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ…
ಗುಜ್ಜೆ ರೋಲ್ ಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಮೊದಲಿಗೆ ಗುಜ್ಜೆ ಕಟ್…
ಹಿಂದೂಗಳ ಪವಿತ್ರ ಯಾತ್ರಾಸ್ಥಳ, ವಾರ್ಷಿಕ ಪವಿತ್ರ ಅಮರನಾಥ ಯಾತ್ರೆ ಜೂನ್ 29 ರಿಂದ, …