ಅರಣ್ಯ ರಕ್ಷಕರ ನೇಮಕಾತಿಗೆ ಪ್ರಕ್ರಿಯೆ ಪ್ರಗತಿಯಲ್ಲಿ | ಸಚಿವ ಈಶ್ವರ ಖಂಡ್ರೆ ಮಾಹಿತಿ

August 19, 2025
7:19 AM

ಅರಣ್ಯ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ನೀಗಿಸಲು ಕ್ರಮ ವಹಿಸಲಾಗಿದ್ದು, 540 ಅರಣ್ಯ ರಕ್ಷಕರ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.

ವಿಧಾನಪರಿಷತ್ತಿನಲ್ಲಿ ಎಸ್.ಕೇಶವ ಪ್ರಸಾದ್ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಕಾಡಾನೆ ದಾಳಿ, ಹುಲಿ ದಾಳಿ ಸೇರಿದಂತೆ ವನ್ಯಜೀವಿ ದಾಳಿಯಿಂದ ಮೃತಪಟ್ಟವರಿಗೆ 20 ಲಕ್ಷ ರೂಪಾಯಿ ಹಾಗೂ ಹಾವು ಕಚ್ಚಿ ಮೃತಪಟ್ಟವರಿಗೆ ಕೃಷಿ ಇಲಾಖೆಯ ವತಿಯಿಂದ 2 ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು. ದಕ್ಷಿಣ ಕನ್ನಡ ಜಿಲ್ಲೆಗೆ ಪ್ರತ್ಯೇಕವಾಗಿ ಆನೆ ಕಾರ್ಯಪಡೆ ಮಂಜೂರು ಮಾಡಲು ಸೂಚಿಸಲಾಗಿದ್ದು, 2-3 ದಿನಗಳಲ್ಲಿ ಅಧಿಕೃತವಾಗಿ ಪ್ರಕಟಿಸಲಾಗುವುದು.  ಆನೆಪಥ ಮತ್ತು ಆವಾಸಸ್ಥಾನ ಸಂರಕ್ಷಣೆಗಾಗಿ ಅಧ್ಯಯನ ನಡೆಸಲು ಐಐಎಸ್‌ಸಿಯೊಂದಿಗೆ ತಿಳುವಳಿಕೆ ಒಪ್ಪಂದ ಮಾಡಿಕೊಳ್ಳಲಾಗಿದ್ದು, ಪ್ರೊ. ಆರ್. ಸುಕುಮಾರ್ ಅವರ ತಂಡ ಅಧ್ಯಯನ ಆರಂಭಿಸಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಮಂಗಗಳ ಹಾವಳಿಯಿಂದ ಬೆಳೆ ಹಾನಿ ಆಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಮಂಗಗಳನ್ನು ಹಿಡಿಯಲು ಸೂಚನೆ ನೀಡುವುದಾಗಿ ಸದನಕ್ಕೆ ತಿಳಿಸಿದ್ದಾರೆ.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ
January 10, 2026
10:35 PM
by: ರೂರಲ್‌ ಮಿರರ್ ಸುದ್ದಿಜಾಲ
ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..
January 10, 2026
10:33 PM
by: ರೂರಲ್‌ ಮಿರರ್ ಸುದ್ದಿಜಾಲ
ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭ | 2026 ಮಾರ್ಚ್ ವರೆಗೆ ಅವಕಾಶ
January 10, 2026
10:30 PM
by: ರೂರಲ್‌ ಮಿರರ್ ಸುದ್ದಿಜಾಲ
ಸ್ವಾವಲಂಬಿ ಸಾರಥಿ ಯೋಜನೆ | ಆಟೋ ಗೂಡ್ಸ್ ವಾಹನ ಖರೀದಿಗೆ ರೂ.4 ಲಕ್ಷ ಸಹಾಯಧನ
January 10, 2026
10:28 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror