ಪ್ಲಾಸ್ಟಿಕ್ #Plastic ಎಂಬ ಪೆಡಂಭೂತ ಇಡೀ ವಿಶ್ವವನ್ನೇ ತಿಂದು ಹಾಕುತಿದೆ. ಈ ಸಮಸ್ಯೆಯಿಂದ ಹೊರ ಬರಲು ಅನೇಕ ದೇಶಗಳು ಹೆಣಗಾಡುತ್ತಿವೆ. ಅನೇಕ ಕ್ರಮಗಳನ್ನು ಸರ್ಕಾರ, ಸಂಘಸಂಸ್ಥೆಗಳು, ಎನ್‌ಜಿಓಗಳು ತೆಗೆದುಕೊಳ್ಳುತ್ತಲೇ ಇದೆ. ಆದರೆ ಪ್ಲಾಸ್ಟಿಕ್ ಹಾವಳಿ ಎಗ್ಗಿಲ್ಲದೆ ನಡೆಯುತ್ತಿದೆ. ಅದರಲ್ಲೂ ರಾಜ್ಯ ರಾಜಧಾನಿಯಲ್ಲಿ ಏಕ ಬಳಕೆ ಫ್ಲಾಸ್ಟಿಕ್ಗಳನ್ನು ಬ್ಯಾನ್ ಮಾಡಿ ಒಂದು ವರ್ಷವೇ ಕಳೆದಿದೆ. ಆದರೆ ಬೆಂಗಳೂರಿನಲ್ಲಿ ಮಾತ್ರ ಪ್ಲಾಸ್ಟಿಕ್ ಇನ್ನೂ ಓಡಾಡುತ್ತಿದೆ…!
ಈ ಬ್ಯಾನ್ ಕೇವಲ ಹೆಸರಿಗೆ ಮಾತ್ರ ಎನ್ನುವಂತೆ ಕಾಣುತ್ತಿದೆ. ಯಾಕೆಂದರೆ ರಾಜಧಾನಿಯಲ್ಲಿ ಯಾವುದೇ ಅಧಿಕಾರಿಗಳ ಭಯವಿಲ್ಲದೇ ಕಾರ್ಖಾನೆಗಳಲ್ಲಿ ಫ್ಲಾಸ್ಟಿಕ್ ತಯಾರಾಗುತ್ತಿದ್ದು, ಅಧಿಕಾರಿಗಳು ಮಾತ್ರ ಏನೂ ಗೊತ್ತಿಲ್ಲದಂತೆ ಕಣ್ಮುಚ್ಚಿ ಕುಳಿತಿದ್ದಾರೆ. ಹೌದು, ರಾಜಧಾನಿಯಲ್ಲಿ ಒಂದು ವರ್ಷದ ಹಿಂದೆ ಪ್ಲಾಸ್ಟಿಕ್ ಬ್ಯಾನ್ ಆಗಿತ್ತು. ಇನ್ನು ಸಿಂಗಲ್ ಯೂಸ್ ಪ್ಲಾಸ್ಟಿಕ್ಗಳನ್ನ ಬಳಕೆ ಮಾಡಿದರೆ ಫೈನ್ ಹಾಕುವುದಾಗಿ ಅಧಿಕಾರಿಗಳು ಹೇಳಿದ್ದರು. ಇನ್ನು ಸಣ್ಣ-ಪುಟ್ಟ ವ್ಯಾಪಾರಸ್ಥರು ಪ್ಲಾಸ್ಟಿಕ್ ಬಳಸಿದ್ರೆ ಪೌರುಷ ತೋರಿಸುವ ಅಧಿಕಾರಿಗಳು ರಾಜಾರೋಷವಾಗಿ ಕಾರ್ಖಾನೆಗಳಲ್ಲಿ ಪ್ಲಾಸ್ಟಿಕ್ ತಯಾರಾಗುತ್ತಿದ್ದರೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಹೀಗಾಗಿ ಯಲಚೇನಹಳ್ಳಿಯ ನಾಯ್ಡು ಲೇಔಟ್ ನಲ್ಲಿ ಪ್ಲಾಸ್ಟಿಕ್ ತಯಾರಿ ಮಾಡಿ, ತಮಗಿಷ್ಟದ ಬೆಲೆ ಮಾರಾಟ ಮಾಡ್ತಿದ್ದಾರೆ.
ಈ ಸಿಂಗಲ್ ಯೂಸ್ ಪ್ಲಾಸ್ಟಿಕ್ ತಯಾರು ಮಾಡ್ಬೇಕು ಅಂತ ಹೇಳಿದ್ರೆ ಪರಿಸರ ನಿಯಂತ್ರಣ ಮಂಡಳಿಯಿಂದ ಒಪ್ಪಿಗೆ ಪಡಿಯಬೇಕು. ಆದರೆ ಈ ಪ್ಲಾಸ್ಟಿಕ್ ತಯಾರಿಕಾ ಘಟಕದ ಮಾಲೀಕರು ಯಾವುದೇ ಅನುಮತಿ ಪಡೆಯದೇ ಯಾರಿಸುವುದಲ್ಲದೇ, ಎಲ್ಲರೂ ತಾಯಾರಿ ಮಾಡ್ತಿದ್ದಾರೆ. ಇನ್ನು, ಈ ಕುರಿತಾಗಿ ಅಧಿಕಾರಿಗಳಿಗೆ ಮಾಹಿತಿ ನೀಡುತ್ತಿದ್ದಂತೆ ಸ್ಥಳ ವೀಕ್ಷಣೆ ಮಾಡಿ ಸ್ಥಳೀಯ ಎಇ ದೂರು ದಾಖಾಲಿಸಿಕೊಂಡಿದ್ದಾರೆ. ಜೊತೆಗೆ ಪ್ಲಾಸ್ಟಿಕ್ ತಯಾರಿಕಾ ಘಟಕದ ಬೆಸ್ಕಾಂ ಪವರ್ ಲೈನ್ ಕಟ್ ಮಾಡುವುದಾಗಿ ಹೇಳಿದ್ದಾರೆ. ಒಟ್ನಲ್ಲಿ, ಸಿಂಗಲ್ ಯೂಸ್ ಪ್ಲಾಸ್ಟಿಕ್ ಬಳಕೆಗೆ ನಿಷೇಧ ಎನ್ನುವ ಮಾಲಿನ್ಯ ನಿಯಂತ್ರಣ ಮಂಡಳಿ ಪ್ಲಾಸ್ಟಿಕ್ ತಯಾರಿಕಾ ಘಟಕಗಳ ಮೇಲೆ ನಿರ್ಧಾಕ್ಷಿಣ್ಯ ಕ್ರಮ ಜರುಗಿಸದೇ ಇರುವುದುದೇ ಸಧ್ಯ ಪ್ಲಾಸ್ಟಿಕ್ ತಯಾರಿಕೆಗೆ ಕಾರಣವಾಗುತ್ತಿದ್ದು, ಕಾರ್ಖಾನೆಗಳ ಮೇಲೆ ಮಾಲಿನ್ಯ ನಿಯಂತ್ರಣ ಮಂಡಳಿ ಹದ್ದಿನ ಕಣ್ಣಿಡಬೇಕಿದೆ.
(ಅಂತರ್ಜಾಲ ಮಾಹಿತಿ)
ರಾಜ್ಯದ ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…
ಜಲಾನಯನ ಯಾತ್ರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸಲಿದ್ದು, ನೀರು ನಿರ್ವಹಣೆ ಬಗ್ಗೆ…
15 ರಾಜ್ಯಗಳಲ್ಲಿ 2 ಸಾವಿರದ 590 ಮೊಬೈಲ್ ಸಂಪರ್ಕರಹಿತ ಗ್ರಾಮಗಳನ್ನು ಗುರುತಿಸಲಾಗಿದೆ. ಈ…
ಗದಗ ಜಿಲ್ಲೆಯ ಮುಂಡರಗಿ ಮತ್ತು ಶಿರಹಟ್ಟಿ ತಾಲೂಕಿನ ಸುಮಾರು 33 ಸಾವಿರ ಹೆಕ್ಟೇರ್…
ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…
ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…