ಕೃಷಿ ಕ್ಷೇತ್ರದಲ್ಲಿ ವಿಶೇಷ ಸಂರಕ್ಷಿತ ತಳಿಗಳಿಗೆ ಪ್ರೋತ್ಸಾಹ ಅಗತ್ಯ | ಹಲಸು-ನೇರಳೆ-ಹುಣಸೆ ಹಣ್ಣು ತಳಿಗಳ ಬಗ್ಗೆ ಸಂವಾದ |

October 23, 2024
6:24 AM
ಕೃಷಿ ಕ್ಷೇತ್ರದಲ್ಲಿ ಹಲವಾರು ವಿಶೇಷ ತಳಿಗಳು ಇವೆ. ಇವುಗಳ ರಕ್ಷಣೆಯ ಅಗತ್ಯ ಇದೆ. ರೈತರೊಂದಿಗೆ ಈ ಬಗ್ಗೆ ಸಂವಾದ ಅಗತ್ಯವಿದೆ.

ಕೃಷಿ ಕ್ಷೇತ್ರದಲ್ಲಿ ಹಲವಾರು ವಿಶೇಷ ತಳಿಗಳು ಇವೆ. ಇವುಗಳ ರಕ್ಷಣೆಯ ಅಗತ್ಯ ಇದ್ದು, ಈ ಮೂಲಕ ರೈತರ ಆದಾಯವನ್ನು ಹೆಚ್ಚು ಮಾಡುವ ಅವಕಾಶಗಳು ಇವೆ. ಇದಕ್ಕಾಗಿ ರೈತರೊಂದಿಗೆ ಹಲಸು, ನೇರಳೆ ಹಾಗೂ ಹುಣಸೆ ಹಣ್ಣು ಸೇರಿದಂತೆ ಇತರ ವಿಶೇಷ ತಳಿಗಳ ಬಗ್ಗೆ ಈಚೆಗೆ ತುಮಕೂರಿನಲ್ಲಿ ಸಂವಾದ ನಡೆಯಿತು.

ಭಾರತೀಯ ಸಸ್ಯ ಪ್ರಬೇಧಗಳ ರಕ್ಷಣೆ ಮತ್ತು ರೈತರ ಹಕ್ಕುಗಳ ಪ್ರಾಧಿಕಾರದ ಮುಖ್ಯಸ್ಥ ಡಾ.ತ್ರಿಲೋಚನ್ ಮಹಾಪಾತ್ರ ಅವರು ತುಮಕೂರಿನ ಹಿರೇಹಳ್ಳಿಯ ಕೇಂದ್ರೀಯ ತೋಟಗಾರಿಕೆ ಪ್ರಾಯೋಗಿಕ ಕೇಂದ್ರದಲ್ಲಿ ವಿಜ್ಞಾನಿಗಳು ಹಾಗೂ ತಳಿ ಸಂರಕ್ಷಿತ ರೈತರೊಂದಿಗೆ ಚರ್ಚೆ ನಡೆಸಿದರು.

ಈ ಸಂದರ್ಭ ಮಾತನಾಡಿದ ಅವರು, ಕೃಷಿ ಕ್ಷೇತ್ರದಲ್ಲಿ ವಿಶೇಷ ಸಂರಕ್ಷಿತ ತಳಿಗಳಿಗೆ ಪ್ರೋತ್ಸಾಹ ಅಗತ್ಯವಾಗಿದೆ. ಇಂದು ಹಲಸು, ನೇರಳೆ, ಹುಣಸೆ ಇತ್ಯಾದಿ ಸಂರಕ್ಷಿತ ತಳಿಗಳ ರೈತರೊಂದಿಗೆ ಚರ್ಚೆ ನಡೆಸಲಾಯಿತು. ತಳಿ ಸಂರಕ್ಷಣೆಗೆ ವಿಶೇಷ ಗಮನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ತುಷಾರ್ ಕಾಂತಿ ಬೆಹರಾ ಮಾತನಾಡಿ, ಸಂರಕ್ಷಿತ ತಳಿಗಳ ಮೂಲಕ ರೈತರ ಆದಾಯ ದ್ವಿಗುಣಗೊಳಿಸುವ ಕೇಂದ್ರ ಸರ್ಕಾರದ ಆಶಯ ಈಡೇರುತ್ತಿದೆ ಎಂದು ತಿಳಿಸಿದರು.

ಸಿದ್ದು ಹಲಸು ತಳಿಯ ಮಾಲೀಕ ಪರಮೇಶ್ ಸಿದ್ದು ತಮ್ಮ ಅನುಭವ ಹಂಚಿಕೊಳ್ಳುತ್ತಾ,  ತಳಿಯ ಸಂರಕ್ಷಣೆಯ ಜೊತೆಗೆ ಆದಾಯವೂ ಹೆಚ್ಚಾಗಿದೆ, ಕೇಂದ್ರೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಪ್ರೋತ್ಸಾಹವೂ ಇದೆ ಎಂದು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ
April 13, 2026
7:45 AM
by: ದ ರೂರಲ್ ಮಿರರ್.ಕಾಂ
ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
April 13, 2026
7:09 AM
by: ಮಿರರ್‌ ಡೆಸ್ಕ್
ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ
April 13, 2026
7:07 AM
by: ಮಿರರ್‌ ಡೆಸ್ಕ್
ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ
April 13, 2026
7:03 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror