ಉತ್ತರಕನ್ನಡ ಜಿಲ್ಲೆಯಲ್ಲಿ ಕನಿಷ್ಠ ಬೆಂಬಲ ಬೆಲೆಯ ಮೆಕ್ಕಜೋಳ ಖರೀದಿ ಕೇಂದ್ರಗಳನ್ನು ತೆರೆಯಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಕೃಷಿ ಮಾರಾಟ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಸೂಚನೆ ನೀಡಿದರು.
ಅವರು ಕಾರವಾರದಲ್ಲಿ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ 8100 ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕಜೋಳವನ್ನು ಬೆಳೆಯಲಾಗಿದೆ. ಕೇಂದ್ರ ಸರ್ಕಾರವು ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆದ ಮೆಕ್ಕಜೋಳಕ್ಕೆ ಪ್ರತೀ ಕ್ವಿಂಟಾಲ್ ಗೆ 2400 ರೂಪಾಯಿ ಗಳ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಿದೆ. ಜಿಲ್ಲೆಯಲ್ಲಿ ಪ್ರಸ್ತುತ ಕಟಾವು ಪ್ರಕ್ರಿಯೆ ನಡೆಯುತ್ತಿರುವುದರಿಂದ ಮಾರುಕಟ್ಟೆ ದರ ಸರಾಸರಿ 1950 ರೂಪಾಯಿ ಇದೆ, ಮುಂದಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮೆಕ್ಕಜೋಳ ಮಾರುಕಟ್ಟೆಗೆ ಆಗಮಿಸುವುದರಿಂದ ಬೆಲೆ ಕುಸಿಯುವ ಸಾಧ್ಯತೆಗಳಿದೆ ಅದರಿಂದ ಜಿಲ್ಲೆಯ ರೈತರಿಗೆ ಸರ್ಕಾರದ ಕನಿಷ್ಠ ಬೆಂಬಲ ಬೆಲೆಯ ಪ್ರಯೋಜನ ಒದಗಿಸಲು ತ್ವರಿತವಾಗಿ ಕೇಂದ್ರಗಳನ್ನು ತೆರೆಯಬೇಕಾಗಿದೆ ಎಂದರು.

