Advertisement
MIRROR FOCUS

ಪಶ್ಚಿಮ ಘಟ್ಟದಲ್ಲಿ ಭೂಪರಿವರ್ತನೆಗೆ ತಾತ್ಕಾಲಿಕ ತಡೆ ಪ್ರಸ್ತಾವನೆ | ಈಶ್ವರ ಖಂಡ್ರ ಸೂಚನೆ

Share

ಹಲವು ನದಿಗಳ ಮೂಲ ಮತ್ತು ಜೀವ ವೈವಿಧ್ಯತೆಯ ತಾಣವಾದ ಪಶ್ಚಿಮ ಘಟ್ಟ(Western Ghat) ಸಂರಕ್ಷಿಸುವ ನಿಟ್ಟಿನಲ್ಲಿ, ಈ ವ್ಯಾಪ್ತಿಯ ಭೂ ಉಪಯೋಗ ಕುರಿತು ಹೊಸ ನಿಯಮಾವಳಿ ರೂಪಿಸುವವರೆಗೆ ಎಲ್ಲ ಭೂ ಪರಿವರ್ತನೆ ಪ್ರಸ್ತಾವನೆಗಳನ್ನು ತಾತ್ಕಾಲಿಕವಾಗಿ ತಡೆ ಹಿಡಿಯುವುದು ಸೂಕ್ತ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದರು.  ಈ ಕುರಿತಂತೆ ಪ್ರಸ್ತಾವನೆ ಸಲ್ಲಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆಸೂಚನೆ ನೀಡಿದ್ದಾರೆ.

Advertisement
Advertisement
Advertisement

ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಕಳುಹಿಸಿರುವ ಟಿಪ್ಪಣಿಯಲ್ಲಿ ಅವರು, ಇತ್ತೀಚೆಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ಅಧಿಸೂಚನೆ ಮಾಡಿರುವ ಕಸ್ತೂರಿ ರಂಗನ್ ವರದಿಯ ಕುರಿತಂತೆ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಲು ಉದ್ದೇಶಿಸಲಾಗಿದೆ ಎಂದೂ ತಿಳಿಸಿದ್ದಾರೆ. ಕರ್ನಾಟಕ, ಕೇರಳ ಸೇರಿದಂತೆ ಪಶ್ಚಿಮಘಟ್ಟದ ಹಲವೆಡೆ, ಭೂಕುಸಿತ, ಗುಡ್ಡ ಕುಸಿತ ಸಂಭವಿಸುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಅವರು, ಕೊಡಗಿನ ಭೂಕುಸಿತ ಪ್ರಕರಣಗಳ ಅಧ್ಯಯನದಲ್ಲಿ ಅರಣ್ಯ ಒತ್ತುವರಿ ಮತ್ತು ಮಾನವ ಅಭಿವೃದ್ಧಿ ಚಟುವಟಿಕೆಗಳೇ ಪ್ರಾಥಮಿಕ ಕಾರಣ ಎನ್ನಲಾಗಿದ್ದು, ಪಶ್ಚಿಮಘಟ್ಟದಲ್ಲಿ ಸಂಭಾವ್ಯ ಅವಗಢ ತಡೆಯಲು ಮುಂಜಾಗರೂಕತಾ ಕ್ರಮವಾಗಿ ಈ ಪ್ರದೇಶದ ಒತ್ತುವರಿ ತೆರವಿಗೆ ಕ್ರಮವಹಿಸಲಾಗಿದೆ ಎಂದು ಈಶ್ವರ ಖಂಡ್ರೆ ಹೇಳಿದ್ದಾರೆ.

Advertisement

ಹಿಮಾಲಯದ ಕಣಿವೆ ರಾಜ್ಯ ಹಿಮಾಚಲ ಪ್ರದೇಶದ ಘಟ್ಟ ಪ್ರದೇಶಗಳಲ್ಲಿ ಭೂಪರಿವರ್ತನೆ ಮತ್ತು ಕಟ್ಟಡ ನಿರ್ಮಾಣಕ್ಕೆ ನಿರ್ದಿಷ್ಟವಾದ ಹಾಗೂ ಪ್ರತ್ಯೇಕವಾದ ನಿಯಮಗಳನ್ನು ರೂಪಿಸಿರುವುದು ತಮ್ಮ ಗಮನಕ್ಕೆ ಬಂದಿದೆ ಎಂದು ತಿಳಿಸಿರುವ ಸಚಿವರು, ಪಶ್ಚಿಮ ಘಟ್ಟ ವ್ಯಾಪ್ತಿಯ ನಗರ ಮತ್ತು ಗ್ರಾಮಾಂತರ ಪ್ರದೇಶಗಳ ವ್ಯಾಪ್ತಿಯಲ್ಲಿ ಭೂ-ಉಪಯೋಗದ ರೀತಿ ಮತ್ತು ಭೂ ಪರಿವರ್ತನೆಯೂ ಸೇರಿದಂತೆ ಕಟ್ಟಡ ನಿರ್ಮಾಣಕ್ಕೆ ಕಂದಾಯ ಇಲಾಖೆ, ನಗರಾಭಿವೃದ್ದಿ ಇಲಾಖೆ, ಪೌರಾಢಳಿತ ಇಲಾಖೆ, ನಗರ ಮತ್ತು ಗ್ರಾಮಾಂತರ ಯೋಜನೆ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಸಮನ್ವಯದಲ್ಲಿ ಭೂ ಉಪಯೋಗ ಸ್ವರೂಪ ಕುರಿತಂತೆ ಹೊಸ ಪ್ರಾದೇಶಿಕ ನಿಯಂತ್ರಣ ಮತ್ತು ಮಾಸ್ಟರ್ ಯೋಜನೆ (Zonal Regulation and Master plan on Land use pattern) ರೂಪಿಸುವವರೆಗೆ ಪಶ್ಚಿಮ ಘಟ್ಟ ವ್ಯಾಪ್ತಿಗೆ ಒಳಪಡುವ ಎಲ್ಲಾ ಭೂ ಪರಿವರ್ತನೆ ಪ್ರಸ್ತಾವನೆಗಳನ್ನು ತಾತ್ಕಾಲಿಕವಾಗಿ ತಡೆಹಿಡಿಯುವುದು ಸೂಕ್ತವೆಂದು ತಜ್ಞರು ಅಭಿಪ್ರಾಯ ಪಟ್ಟಿದ್ದು, ಕೂಡಲೇ ವಿವಿಧ ಇಲಾಖೆ ಸಮನ್ವಯದೊಂದಿಗೆ ಸ್ಪಷ್ಟ ಅಭಿಪ್ರಾಯದೊಂದಿಗೆ ಪ್ರಸ್ತಾವನೆ ಸಲ್ಲಿಸಲು ಕ್ರಮವಹಿಸುವಂತೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.

ಸಾರ್ವಜನಿಕ ಮಹತ್ವದ ಯೋಜನೆಗೆ ಮಾತ್ರ ಸಮ್ಮತಿ: ಅತೀ ಜರೂರಾದ, ಸಾರ್ವಜನಿಕ ಮಹತ್ವದ ಪ್ರಕರಣಗಳಲ್ಲಿ ಮಾತ್ರ ಯೋಜನೆಗೆ ಪರಿಸರ ಸಮ್ಮತಿ ಪತ್ರವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಂಬಂಧಿತ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ತಜ್ಞರ ಸಮಿತಿಯ ಉನ್ನತಾಧಿಕಾರ ಸಮಿತಿ ಸಭೆಯ ಅನುಮೋದನೆ ನಂತರವಷ್ಟೇ ನೀಡುವುದು ಸೂಕ್ತ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಮುಂದಿನ ಪೀಳಿಗೆಯ ಹಿತದೃಷ್ಟಿಯಿಂದ ಭೂ ಉಪಯೋಗ ಕುರಿತಂತೆ ಹೊಸ ನಿಯಮಾವಳಿ ರೂಪಿಸಲು ಪ್ರಸ್ತಾವನೆಯನ್ನು ಕಡತದಲ್ಲಿ ಮಂಡಿಸುವಂತೆಯೂ ಅವರು ಅಪರ ಮುಖ್ಯ ಕಾರ್ಯದರ್ಶಿಯವರಿಗೆ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 23-11-2024 | ರಾಜ್ಯದಲ್ಲಿ ಒಣಹವೆ ಮುಂದುವರಿಕೆ | ನ.28 ರಿಂದ ಕೆಲವು ಕಡೆ ಮಳೆ ಸಾಧ್ಯತೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.

1 hour ago

ಇಂಧನ ಉಳಿತಾಯ | ಪರಿಸರ ಜಾಗೃತಿ | ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ

ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…

7 hours ago

ಕೃಷಿ ಭೂಮಿ ಉಳಿಸಿಕೊಳ್ಳಲು- ಆರೋಗ್ಯ ಕಾಪಾಡಲು ಸಾವಯವ ಕೃಷಿಯತ್ತ ಒಲವು ಬೆಳೆಸಿ | ಐಐಟಿ ನಿರ್ದೇಶಕ ಡಾ.ವೆಂಕಪ್ಪಯ್ಯ ಆರ್. ದೇಸಾಯಿ

ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…

7 hours ago

ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಕ್ಯೂಆರ್ ಕೋಡ್ ಅಳವಡಿಕೆ

ಕ್ಯೂಆರ್ ಕೋಡ್  ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…

8 hours ago

ಅಡಿಕೆ ಹಳದಿರೋಗ ಪೀಡಿತ ಪ್ರದೇಶದಲ್ಲಿ ಗೇರುಕೃಷಿ ಹೇಗೆ..? | ಸಂಪಾಜೆಯಲ್ಲಿ ಪರ್ಯಾಯ ಕೃಷಿಯ ಬಗ್ಗೆ ಚಿಂತನೆ |

ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…

8 hours ago

ಅಡಿಕೆ ಮೇಲೆ ಕ್ಯಾನ್ಸರ್‌ ತೂಗುಗತ್ತಿಯ ಭಯ ಏಕೆ ? | ಅಡಿಕೆಯ ಔಷಧೀಯ ಅಧ್ಯಯನ ಸಾಕಷ್ಟಿದೆ | ಈಗ ಸಂಘಟಿತ ಹೋರಾಟ ಅಗತ್ಯ |

ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…

17 hours ago