“ಮುಕ್ತ ವ್ಯಾಪಾರ ಒಪ್ಪಂದ – ದೇಶದ ಕೃಷಿ ವಹಿವಾಟಿನ ಹಿತಾಸಕ್ತಿ ರಕ್ಷಣೆ” ಕುರಿತ ವಿಚಾರ ಸಂಕಿರಣ ಬೆಂಗಳೂರಿನಲ್ಲಿ ನಡೆಯಿತು. ಅಮೆರಿಕಾದ ಹೆಚ್ಚುವರಿ ಸುಂಕಗಳಿಂದ ಕೃಷಿ ಉತ್ಪನ್ನಗಳ ರಫ್ತಿನ ಮೇಲಾದ ಪರಿಣಾಮಗಳ ಚರ್ಚೆಗೆ ಈ ವಿಚಾರ ಸಂಕಿರಣ ಆಯೋಜನೆಯಾಗಿತ್ತು.
ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕ ಸಿ ಎನ್ ಶಿವಪ್ರಕಾಶ್ ಉದ್ಘಾಟಿಸಿದರು. ಕೃಷಿ ತಂತ್ರಜ್ಞರ ಸಂಸ್ಥೆ, ಬೆಂಗಳೂರು, ಕರ್ನಾಟಕ ಕೃಷಿ ವ್ಯವಹಾರ ಅಭಿವೃದ್ಧಿ ನಿಗಮ , ಹಾಗೂ ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ನಿಯಮಿತ ವತಿಯಿಂದ ಆಯೋಜನೆಯಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿದ KAPPEC ವ್ಯವಸ್ಥಾಪಕ ನಿರ್ದೇಶಕ ಸಿ ಎನ್ ಶಿವಪ್ರಕಾಶ್ , ಅಮೆರಿಕಾದ ಹೆಚ್ಚುವರಿ ಸುಂಕಗಳಿಂದ ಕೃಷಿ ಉತ್ಪನ್ನಗಳ ರಫ್ತಿನ ಮೇಲಾದ ಪರಿಣಾಮಗಳ ಚರ್ಚೆಗೆ ಈ ವಿಚಾರ ಸಂಕಿರಣ ಆಯೋಜನೆಯಾಗಿದೆ. ಬದಲಾದ ಪರಿಸ್ಥಿತಿಯಲ್ಲಿ ರೈತರಿಗೆ ಹೊರೆಯಾಗದಂತೆ ಪರ್ಯಾಯ ಅವಕಾಶಗಳ ಬಗ್ಗೆ ಚರ್ಚಿಸುವುದು ಇದರ ಉದ್ದೇಶವಾಗಿದೆ. ಹೆಚ್ಚುವರಿ ಸುಂಕ ಹಿನ್ನೆಲೆ ಪ್ರಮುಖವಾಗಿ ಕೃಷಿ ಉತ್ಪನ್ನಗಳ ಮೇಲೆ ಪರಿಣಾಮ ಉಂಟಾಗಿದ್ದು, ಇದರಿಂದ ರೈತರ ಮೇಲಾಗುವ ಪ್ರಭಾವ ತಗ್ಗಿಸಿ ಪರ್ಯಾಯ ಮಾರುಕಟ್ಟೆ ಅವಕಾಶಗಳ ಬಗ್ಗೆ ಅವಲೋಕಿಸುವುದು ವಿಚಾರ ಸಂಕಿರಣದ ಉದ್ದೇಶವಾಗಿದೆ ಎಂದರು.
ಕೃಷಿ ತಂತ್ರಜ್ಞರ ಸಂಸ್ಥೆ ಅಧ್ಯಕ್ಷ ಡಾ. ಎ ಬಿ ಪಾಟೀಲ್, ಕೃಷಿ ಉತ್ಪನ್ನಗಳ ನೇರ ಮಾರಾಟದ ಬದಲು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ, ಬ್ರಾಂಡಿಂಗ್ ಮೂಲಕ ರೈತರು ಉತ್ತಮ ಆರ್ಥಿಕ ಪ್ರಯೋಜನಗಳನ್ನು ಪಡೆಯಬಹುದು ಎಂದರು. ಕೃಷಿ ತಂತ್ರಜ್ಞರ ಸಂಸ್ಥೆ ರೈತರಿಗಾಗಿ ಶ್ರಮಿಸುತ್ತಿದೆ. ಕೃಷಿ ಉತ್ಪನ್ನಗಳ ರಫ್ತಿನ ಹೆಚ್ಚಳದ ಬಗ್ಗೆ ಕಾರ್ಯಕ್ರಮದಲ್ಲಿ ಉಪಯುಕ್ತ ಚರ್ಚೆ ನಡೆಯಲಿದೆ ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..

