Advertisement
MIRROR FOCUS

ವ್ಯಾಪಾರ ಒಪ್ಪಂದ | ದೇಶದ ಕೃಷಿ ವಹಿವಾಟಿನ ಹಿತಾಸಕ್ತಿ ರಕ್ಷಣೆ

Share

“ಮುಕ್ತ ವ್ಯಾಪಾರ ಒಪ್ಪಂದ – ದೇಶದ ಕೃಷಿ ವಹಿವಾಟಿನ ಹಿತಾಸಕ್ತಿ ರಕ್ಷಣೆ” ಕುರಿತ ವಿಚಾರ ಸಂಕಿರಣ ಬೆಂಗಳೂರಿನಲ್ಲಿ ನಡೆಯಿತು. ಅಮೆರಿಕಾದ ಹೆಚ್ಚುವರಿ ಸುಂಕಗಳಿಂದ ಕೃಷಿ ಉತ್ಪನ್ನಗಳ ರಫ್ತಿನ ಮೇಲಾದ ಪರಿಣಾಮಗಳ ಚರ್ಚೆಗೆ ಈ ವಿಚಾರ ಸಂಕಿರಣ ಆಯೋಜನೆಯಾಗಿತ್ತು.

ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ನಿಯಮಿತ  ವ್ಯವಸ್ಥಾಪಕ ನಿರ್ದೇಶಕ ಸಿ ಎನ್ ಶಿವಪ್ರಕಾಶ್ ಉದ್ಘಾಟಿಸಿದರು.  ಕೃಷಿ ತಂತ್ರಜ್ಞರ ಸಂಸ್ಥೆ,  ಬೆಂಗಳೂರು, ಕರ್ನಾಟಕ ಕೃಷಿ ವ್ಯವಹಾರ ಅಭಿವೃದ್ಧಿ ನಿಗಮ , ಹಾಗೂ ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ನಿಯಮಿತ  ವತಿಯಿಂದ ಆಯೋಜನೆಯಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿದ KAPPEC ವ್ಯವಸ್ಥಾಪಕ ನಿರ್ದೇಶಕ ಸಿ ಎನ್ ಶಿವಪ್ರಕಾಶ್ , ಅಮೆರಿಕಾದ ಹೆಚ್ಚುವರಿ ಸುಂಕಗಳಿಂದ ಕೃಷಿ ಉತ್ಪನ್ನಗಳ ರಫ್ತಿನ ಮೇಲಾದ ಪರಿಣಾಮಗಳ ಚರ್ಚೆಗೆ ಈ ವಿಚಾರ ಸಂಕಿರಣ ಆಯೋಜನೆಯಾಗಿದೆ. ಬದಲಾದ ಪರಿಸ್ಥಿತಿಯಲ್ಲಿ ರೈತರಿಗೆ ಹೊರೆಯಾಗದಂತೆ ಪರ್ಯಾಯ ಅವಕಾಶಗಳ ಬಗ್ಗೆ ಚರ್ಚಿಸುವುದು ಇದರ ಉದ್ದೇಶವಾಗಿದೆ. ಹೆಚ್ಚುವರಿ ಸುಂಕ ಹಿನ್ನೆಲೆ ಪ್ರಮುಖವಾಗಿ ಕೃಷಿ ಉತ್ಪನ್ನಗಳ ಮೇಲೆ ಪರಿಣಾಮ ಉಂಟಾಗಿದ್ದು, ಇದರಿಂದ ರೈತರ ಮೇಲಾಗುವ ಪ್ರಭಾವ ತಗ್ಗಿಸಿ ಪರ್ಯಾಯ ಮಾರುಕಟ್ಟೆ ಅವಕಾಶಗಳ ಬಗ್ಗೆ ಅವಲೋಕಿಸುವುದು ವಿಚಾರ ಸಂಕಿರಣದ ಉದ್ದೇಶವಾಗಿದೆ ಎಂದರು.

ಕೃಷಿ ತಂತ್ರಜ್ಞರ ಸಂಸ್ಥೆ ಅಧ್ಯಕ್ಷ ಡಾ. ಎ ಬಿ ಪಾಟೀಲ್, ಕೃಷಿ ಉತ್ಪನ್ನಗಳ ನೇರ ಮಾರಾಟದ ಬದಲು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ, ಬ್ರಾಂಡಿಂಗ್ ಮೂಲಕ ರೈತರು ಉತ್ತಮ ಆರ್ಥಿಕ ಪ್ರಯೋಜನಗಳನ್ನು ಪಡೆಯಬಹುದು ಎಂದರು. ಕೃಷಿ ತಂತ್ರಜ್ಞರ ಸಂಸ್ಥೆ  ರೈತರಿಗಾಗಿ ಶ್ರಮಿಸುತ್ತಿದೆ. ಕೃಷಿ ಉತ್ಪನ್ನಗಳ ರಫ್ತಿನ ಹೆಚ್ಚಳದ ಬಗ್ಗೆ ಕಾರ್ಯಕ್ರಮದಲ್ಲಿ ಉಪಯುಕ್ತ ಚರ್ಚೆ ನಡೆಯಲಿದೆ ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

18 hours ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

18 hours ago

‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ

ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…

18 hours ago

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

1 day ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

2 days ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

2 days ago