ರಾಜ್ಯ

ಶರಾವತಿ ಮುಳುಗಡೆ ಸಂತ್ರಸ್ತರ ಹಕ್ಕುಪತ್ರ ನೀಡಲು ಒತ್ತಾಯಿಸಿ ಧರಣಿ

Share

ಅರಣ್ಯವಾಸಿಗಳ ಕೃಷಿ ಭೂಮಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ರೈತರು ಒಗ್ಗೂಡಿ ಸಂಯುಕ್ತ ವೇದಿಕೆ ಮೂಲಕ ಸಾಗರದ ಉಪವಿಭಾಗಾಧಿಕಾರಿ ಕಚೇರಿ ಆವರಣದಲ್ಲಿ ಅನಿರ್ಧಿಷ್ಟಾವಧಿ ಧರಣಿ ನಡೆಸಿದರು.

Advertisement

ಧರಣಿಯಲ್ಲಿ ಮಾತನಾಡಿದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಮಲೆನಾಡಿನಲ್ಲಿ ಸಣ್ಣ ರೈತರು ನೂರಾರು ವರ್ಷಗಳಿಂದ ಕೃಷಿ ಮಾಡಿಕೊಂಡು ಬರುತ್ತಿದ್ದಾರೆ. ಅವರನ್ನು ಏಕಾಏಕಿ ಒಕ್ಕಲೆಬ್ಬಿಸುವುದು ಸರಿಯಲ್ಲ. ಸರ್ಕಾರ ರೈತರ ಮನವಿಯನ್ನು ಆಲಿಸಿ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಹರತಾಳು ಹಾಲಪ್ಪ ಮಾತನಾಡಿ, ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸುವ ಕೆಲಸಕ್ಕೆ ಮುಂದಾದರೆ ಕಾಗೋಡು ಚಳವಳಿಯಂತೆ ಮತ್ತೊಂದು ಹೋರಾಟ ಆರಂಭಿಸುವುದಾಗಿ ತಿಳಿಸಿದರು.

ರೈತ ಸಂಘದ ಜಿಲ್ಲಾಧ್ಯಕ್ಷ  ದಿನೇಶ್ ಶಿರವಾಳ, ಐವತ್ತು ಅರವತ್ತು ವರ್ಷಗಳಿಂದ ಅರಣ್ಯವಾಸಿಗಳು ಕೃಷಿ ಮಾಡಿಕೊಂಡು ಬರುತ್ತಿದ್ದಾರೆ. ಸರ್ಕಾರ ಮಧ್ಯ ಪ್ರವೇಶಿಸಿ ಸಮಸ್ಯೆ ಪರಿಹರಿಸಿ ಹಕ್ಕು ಪತ್ರ ನೀಡಬೇಕು ಎಂದು ಮನವಿ ಮಾಡಿದರು.

ಧರಣಿ ಸತ್ಯಾಗ್ರಹ ಸ್ಥಳಕ್ಕೆ  ಭೇಟಿ ನೀಡಿದ ಸಂಸದ ಬಿ ವೈ ರಾಘವೇಂದ್ರ,  ಸಮಗ್ರ ಬೇಡಿಕೆಗಳನ್ನು ಸ್ವೀಕರಿಸಿದರು. ಮುಳುಗಡೆ ಸಂತ್ರಸ್ತರಿಗೆ ಅವರ ಬೇಡಿಕೆಗಳಿಗೆ ಅನುಗುಣವಾಗಿ ಸಾಮಾಜಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮೀನುಗಾರಿಕಾ ದೋಣಿಯಲ್ಲಿ 450 ಚೀಲ ಅಡಿಕೆ ಪತ್ತೆ | 14 ಜನರ ಬಂಧನ |

ಭಾರತೀಯ ಕರಾವಳಿ ರಕ್ಷಣಾ ಪಡೆಯು ಸಮುದ್ರದ ಮೂಲಕ ಅಡಿಕೆ ಕಳ್ಳಸಾಗಣೆ ಮಾಡುವ ಪ್ರಕರಣವನ್ನು…

9 hours ago

ಪುತ್ತೂರು ಕ್ಯಾಂಪ್ಕೊ ಶಾಖೆಯಲ್ಲಿ ಮಣ್ಣಿನ ಪರೀಕ್ಷಾ ಯಂತ್ರಕ್ಕೆ ಚಾಲನೆ

ವೈಜ್ಞಾನಿಕ ಮಣ್ಣಿನ ವಿಶ್ಲೇಷಣೆಯ ಮೂಲಕ ಉತ್ತಮ ಬೆಳೆ ಇಳುವರಿಯನ್ನು ಸಾಧಿಸಲು ರೈತರಿಗೆ ಬೆಂಬಲ…

9 hours ago

ಹವಾಮಾನ ವರದಿ | 11-04-2025 | ಕೆಲವು ಕಡೆ ಗುಡುಗು ಸಹಿತ ಮಳೆ ಸಾಧ್ಯತೆ | ಮುಂದಿನ 10 ದಿನಗಳವರೆಗೂ ಮಳೆ ಅಲ್ಲಲ್ಲಿ ಮಳೆಯ ಸಾಧ್ಯತೆ

ಅಲ್ಲಲ್ಲಿ ಗುಡುಗು ಸಹಿತ ಸಂಜೆ, ರಾತ್ರಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಮುಂದಿನ…

18 hours ago

ಪರಿಸರಕ್ಕೆ ಕೊಡುಗೆಯಾಗಬಹುದು ಅಡಿಕೆ ಮರ | ಅಡಿಕೆ ಮರಕ್ಕೆ ಮೌಲ್ಯ ತರಲು ಒಂದು ದಾರಿ | ಒಂದು ಮರಕ್ಕೆ ಕನಿಷ್ಟ 700 ರೂಪಾಯಿ ಪಡೆಯಬಹುದು ಹೇಗೆ ?

ಪರಿಸರ ಪ್ರೇಮಿಗಳಿಗೆ, ನಗರದಲ್ಲಿ ಹೂವು, ಸಣ್ಣ ಸಣ್ಣ ಗಿಡ ಬೆಳೆಸುವವರಿಗೆ ಹೂಕುಂಡವಾಗಿ ಅಡಿಕೆಯ…

22 hours ago

2026 ರ ವೇಳೆಗೆ ತುಮಕೂರಿಗೆ ಎತ್ತಿನಹೊಳೆ ನೀರು

2026 ಜೂನ್ ವೇಳೆಗೆ ಎತ್ತಿನಹೊಳೆ ನೀರು ತುಮಕೂರು ತಲುಪಲಿದೆ ಎಂದು ಗೃಹ ಸಚಿವ…

23 hours ago

ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಸಂಭವ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಒಂದೆರೆಡು ಕಡೆ ಮಳೆಯಾಗಿದೆ. ಉತ್ತರ ಕನ್ನಡ, ಉಡುಪಿ,…

24 hours ago