ಕೇಂದ್ರ ಸರ್ಕಾರ ಅಡಿಕೆ ಆಮದನ್ನು ರದ್ದುಗೊಳಿಸಲು ಒತ್ತಾಯಿಸಿ ಶಿವಮೊಗ್ಗದಲ್ಲಿ ಅ.14ರಂದು ಪ್ರತಿಭಟನಾ ಸಭೆ ನಡೆಯಲಿದೆ.ಅಡಿಕೆ ಮಾರಾಟ ಸಹಕಾರ ಸಂಘಗಳ ಒಕ್ಕೂಟ ಹಾಗೂ ಅಡಿಕೆ ವರ್ತಕರ ಸಂಘದ ಸಹಕಾರದೊಂದಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.
ಈ ಬಗ್ಗೆ ಮಾಹಿತಿ ನೀಡಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡ ಎಚ್.ಆರ್. ಬಸವರಾಜಪ್ಪ, ಭೂತಾನ್‌ನಿಂದ 17ಸಾವಿರ ಮೆಟ್ರಿಕ್ ಟನ್ ಹಸಿ ಅಡಿಕೆಯನ್ನು ಪ್ರತಿವರ್ಷ ಯಾವುದೇ ಷರತ್ತು ಇಲ್ಲದೆ ಆಮದು ಮಾಡಿಕೊಳ್ಳಲು ಅನುಕೂಲವಾಗುವಂತೆ ಕೇಂದ್ರ ಸರ್ಕಾರ ತಿದ್ದುಪಡಿ ತಂದಿದ್ದು, ಇದು ಮುಂದಿನ ದಿನಗಳಲ್ಲಿ 50ಸಾವಿರ ಮೆಟ್ರಿಕ್ ಟನ್‌ಗಿಂತಲೂ ಆಮದನ್ನು ಹೆಚ್ಚಿಸಬಹುದು. ಆಗ ನಮ್ಮ ದೇಶದ ಅಡಿಕೆ ಬೆಲೆಯು ಕೂಡ ಕಡಿಮೆಯಾಗುವ ಸಾಧ್ಯತೆ ಇದೆ ಇದಕ್ಕಾಗಿ ತಕ್ಷಣವೇ ಅಡಿಕೆ ಆಮದು ರದ್ದಾಗಬೇಕು ಎಂದರು. ಆಮದು ಖಂಡಿಸಿ ಶಿವಮೊಗ್ಗದಲ್ಲಿ ವಿವಿಧ ಸಂಘಸಂಸ್ಥೆಗಳ ಸಹಕಾರದೊಂದಿಗೆ ಪ್ರತಿಭಟನೆ ನಡೆಸಲಾಗುವುದು. ಅಂದು ಬೆಳಿಗ್ಗೆ 10ಗಂಟೆಗೆ ಖಾಸಗಿ ಬಸ್ ನಿಲ್ದಾಣದಿಂದ ಜಿಲ್ಲಾಧಿಕಾರಿಗಳ ಕಛೇರಿ ಆವರಣದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ನಂತರ ಅಲ್ಲಿ ಪ್ರತಿಭಟನಾ ಸಭೆ ನಡೆಸಿ ಜಿಲ್ಲಾಡಳಿತದ ಮೂಲಕ ಪ್ರಧಾನ ಮಂತ್ರಿ, ಕೇಂದ್ರದ ವಾಣಿಜ್ಯ, ಕೃಷಿ ಸಚಿವರಿಗೆ ಹಾಗೂ ರಾಜ್ಯದ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದರು.
ರೈತ ಸಂಘಟನೆ ಮತ್ತು ಅಡಿಕೆ ಸಹಕಾರಿ ಸಂಸ್ಥೆಗಳು ಪರಿಷ್ಕರಣಾ ಕೆ.ಜಿ ಅಡಿಕೆಗೆ ಆಮದು ಸುಂಕವನ್ನು 260 ರೂ. ನಿಂದ 360ರೂ. ಗಳಿಗೆ ಹೆಚ್ಚಿಸುವಂತೆ ಸರ್ಕಾರಕ್ಕೆ ಈಗಾಗಲೇ ಬೇಡಿಕೆಯನ್ನು ಸಲ್ಲಿಸಿವೆ. ಹೀಗಿರುವಾಗ ಕೇಂದ್ರ ಸರ್ಕಾರ ಆಮದು ಸುಂಕವಿಲ್ಲದೆ ಅಡಿಕೆ ಆಮದು ಮಾಡಿಕೊಳ್ಳುತ್ತಿರುವುದು ಸರಿಯಲ್ಲ. ಭಾರತ ದೇಶದಲ್ಲಿ ವಾರ್ಷಿಕವಾಗಿ 8 ರಿಂದ 10ಲಕ್ಷ ಮೆಟ್ರಿಕ್ ಟನ್ ಅಡಿಕೆ ಬೆಳೆಯಲಾಗುತ್ತಿದೆ. ಈ ಪ್ರಮಾಣದ ಉತ್ಪಾದನೆಯಿಂದ ಸ್ಥಳೀಯ ಬೇಡಿಕೆ ಪೂರೈಕೆ ಜೊತೆಗೆ ರಫ್ತು ಕೂಡ ಮಾಡಬಹುದು. ಕರ್ನಾಟಕ ಸೇರಿದಂತೆ ತಮಿಳುನಾಡು, ಆಂಧ್ರಪ್ರದೇಶದ ರಾಜ್ಯಗಳಲ್ಲಿ ಅಡಿಕೆ ಬೆಳೆಯುವ ಪ್ರದೇಶ ವಿಸ್ತರಣೆಯಾಗಿದ್ದು ಇನ್ನು 4-5ವರ್ಷಗಳಲ್ಲಿ ದೇಶದಲ್ಲಿ 15ಲಕ್ಷ ಮೆಟ್ರಿಕ್ ಟನ್ ಅಡಿಕೆ ಉತ್ಪಾದನೆಯಾಗುವ ನಿರೀಕ್ಷೆ ಇದೆ ಎಂದರು. ಹೀಗಾಗಿ ದೇಶದ ಅಡಿಕೆ ಬೆಳೆಗಾರರ ರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಎಚ್.ಆರ್. ಬಸವರಾಜಪ್ಪ ಒತ್ತಾಯಿಸಿದರು.
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…
ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ…
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…
ಮುಂಜಾನೆಯ ಸಮಯದಲ್ಲಿ ಸ್ಥಬ್ಧವೆನ್ನಿಸುವ ವಾತಾವರಣದಲ್ಲೂ ಸಾಕಷ್ಟು ಹಕ್ಕಿಗಳ ಚಿಲಿಪಿಲಿ ಶಬ್ದ ಕೇಳುತ್ತಿರುತ್ತದೆ. ಆದರೆ…
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು…