Advertisement
ರಾಜ್ಯ

ಅಡಿಕೆ ಆಮದು ರದ್ದುಗೊಳಿಸಲು ಒತ್ತಾಯ | ಅ.14 ರಂದು ಶಿವಮೊಗ್ಗದಲ್ಲಿ ಬೆಳೆಗಾರರಿಂದ ಪ್ರತಿಭಟನೆ |

Share

ಕೇಂದ್ರ ಸರ್ಕಾರ ಅಡಿಕೆ ಆಮದನ್ನು ರದ್ದುಗೊಳಿಸಲು ಒತ್ತಾಯಿಸಿ ಶಿವಮೊಗ್ಗದಲ್ಲಿ ಅ.14ರಂದು ಪ್ರತಿಭಟನಾ ಸಭೆ ನಡೆಯಲಿದೆ.ಅಡಿಕೆ ಮಾರಾಟ ಸಹಕಾರ ಸಂಘಗಳ ಒಕ್ಕೂಟ ಹಾಗೂ ಅಡಿಕೆ ವರ್ತಕರ ಸಂಘದ ಸಹಕಾರದೊಂದಿಗೆ  ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.

ಈ ಬಗ್ಗೆ ಮಾಹಿತಿ ನೀಡಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡ ಎಚ್.ಆರ್. ಬಸವರಾಜಪ್ಪ, ಭೂತಾನ್‌ನಿಂದ 17ಸಾವಿರ ಮೆಟ್ರಿಕ್ ಟನ್ ಹಸಿ ಅಡಿಕೆಯನ್ನು ಪ್ರತಿವರ್ಷ ಯಾವುದೇ ಷರತ್ತು ಇಲ್ಲದೆ ಆಮದು ಮಾಡಿಕೊಳ್ಳಲು ಅನುಕೂಲವಾಗುವಂತೆ ಕೇಂದ್ರ ಸರ್ಕಾರ ತಿದ್ದುಪಡಿ ತಂದಿದ್ದು, ಇದು ಮುಂದಿನ ದಿನಗಳಲ್ಲಿ 50ಸಾವಿರ ಮೆಟ್ರಿಕ್ ಟನ್‌ಗಿಂತಲೂ ಆಮದನ್ನು ಹೆಚ್ಚಿಸಬಹುದು. ಆಗ ನಮ್ಮ ದೇಶದ ಅಡಿಕೆ ಬೆಲೆಯು ಕೂಡ ಕಡಿಮೆಯಾಗುವ ಸಾಧ್ಯತೆ ಇದೆ  ಇದಕ್ಕಾಗಿ ತಕ್ಷಣವೇ ಅಡಿಕೆ ಆಮದು ರದ್ದಾಗಬೇಕು ಎಂದರು. ಆಮದು ಖಂಡಿಸಿ ಶಿವಮೊಗ್ಗದಲ್ಲಿ ವಿವಿಧ ಸಂಘಸಂಸ್ಥೆಗಳ ಸಹಕಾರದೊಂದಿಗೆ ಪ್ರತಿಭಟನೆ ನಡೆಸಲಾಗುವುದು. ಅಂದು ಬೆಳಿಗ್ಗೆ 10ಗಂಟೆಗೆ ಖಾಸಗಿ ಬಸ್ ನಿಲ್ದಾಣದಿಂದ ಜಿಲ್ಲಾಧಿಕಾರಿಗಳ ಕಛೇರಿ ಆವರಣದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ನಂತರ ಅಲ್ಲಿ ಪ್ರತಿಭಟನಾ ಸಭೆ ನಡೆಸಿ ಜಿಲ್ಲಾಡಳಿತದ ಮೂಲಕ ಪ್ರಧಾನ ಮಂತ್ರಿ, ಕೇಂದ್ರದ ವಾಣಿಜ್ಯ, ಕೃಷಿ ಸಚಿವರಿಗೆ ಹಾಗೂ ರಾಜ್ಯದ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದರು.

ರೈತ ಸಂಘಟನೆ ಮತ್ತು ಅಡಿಕೆ ಸಹಕಾರಿ ಸಂಸ್ಥೆಗಳು ಪರಿಷ್ಕರಣಾ ಕೆ.ಜಿ ಅಡಿಕೆಗೆ ಆಮದು ಸುಂಕವನ್ನು 260 ರೂ. ನಿಂದ 360ರೂ. ಗಳಿಗೆ ಹೆಚ್ಚಿಸುವಂತೆ ಸರ್ಕಾರಕ್ಕೆ ಈಗಾಗಲೇ ಬೇಡಿಕೆಯನ್ನು ಸಲ್ಲಿಸಿವೆ. ಹೀಗಿರುವಾಗ ಕೇಂದ್ರ ಸರ್ಕಾರ ಆಮದು ಸುಂಕವಿಲ್ಲದೆ ಅಡಿಕೆ ಆಮದು ಮಾಡಿಕೊಳ್ಳುತ್ತಿರುವುದು ಸರಿಯಲ್ಲ. ಭಾರತ ದೇಶದಲ್ಲಿ ವಾರ್ಷಿಕವಾಗಿ 8 ರಿಂದ 10ಲಕ್ಷ ಮೆಟ್ರಿಕ್ ಟನ್ ಅಡಿಕೆ ಬೆಳೆಯಲಾಗುತ್ತಿದೆ. ಈ ಪ್ರಮಾಣದ ಉತ್ಪಾದನೆಯಿಂದ ಸ್ಥಳೀಯ ಬೇಡಿಕೆ ಪೂರೈಕೆ ಜೊತೆಗೆ ರಫ್ತು ಕೂಡ ಮಾಡಬಹುದು. ಕರ್ನಾಟಕ ಸೇರಿದಂತೆ ತಮಿಳುನಾಡು, ಆಂಧ್ರಪ್ರದೇಶದ ರಾಜ್ಯಗಳಲ್ಲಿ ಅಡಿಕೆ ಬೆಳೆಯುವ ಪ್ರದೇಶ ವಿಸ್ತರಣೆಯಾಗಿದ್ದು ಇನ್ನು 4-5ವರ್ಷಗಳಲ್ಲಿ ದೇಶದಲ್ಲಿ 15ಲಕ್ಷ ಮೆಟ್ರಿಕ್ ಟನ್ ಅಡಿಕೆ ಉತ್ಪಾದನೆಯಾಗುವ ನಿರೀಕ್ಷೆ ಇದೆ ಎಂದರು. ಹೀಗಾಗಿ ದೇಶದ ಅಡಿಕೆ ಬೆಳೆಗಾರರ ರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಎಚ್.ಆರ್. ಬಸವರಾಜಪ್ಪ ಒತ್ತಾಯಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

1 day ago

ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ

ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…

1 day ago

ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ

ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…

1 day ago

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ

ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…

2 days ago

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ

ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…

2 days ago

ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!

ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…

2 days ago