ಕಸ್ತೂರಿ ರಂಗನ್ ವರದಿ ವಿರುದ್ಧ ಬೃಹತ್ ಪ್ರತಿಭಟನೆಗೆ ಸಿದ್ಧತೆ |

August 22, 2023
11:00 PM
ಕರ್ನಾಟಕ ರಾಜ್ಯದಲ್ಲಿ ಕಸ್ತೂರಿರಂಗನ್ ವರದಿ ಜಾರಿಗೊಳಿಸುವ ಬಗ್ಗೆ ಮತ್ತೆ ರಾಜ್ಯ ಸರಕಾರ ಹುನ್ನಾರ ನಡೆಸುತ್ತಿದ್ದು ಇದರ ವಿರುದ್ಧ ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಲಾಗಿದೆ.

ಕರ್ನಾಟಕ ರಾಜ್ಯದಲ್ಲಿ ಕಸ್ತೂರಿರಂಗನ್ ವರದಿ ಜಾರಿಗೊಳಿಸುವ ಬಗ್ಗೆ ಮತ್ತೆ ರಾಜ್ಯ ಸರಕಾರ ಹುನ್ನಾರ ನಡೆಸುತ್ತಿದ್ದು ಇದರ ವಿರುದ್ಧ ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ವತಿಯಿಂದ ಮುಂದೆ ಬೃಹತ್ ಪ್ರತಿಭಟನೆ ನಡೆಸಲಿರುವುದಾಗಿ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ ತಿಳಿಸಿದ್ದಾರೆ. ‌

Advertisement
Advertisement
Advertisement

ಕಸ್ತೂರಿ ರಂಗನ್‌ ವರದಿಯ ಕಾರಣದಿಂದ  ಪಶ್ಚಿಮ ಘಟ್ಟ ತಪ್ಪಲಿನ ಗ್ರಾಮಗಳ ಜನತೆ ಪ್ರತಿದಿನ ಆತಂಕದ ವಾತಾವರಣದಲ್ಲಿ ಜೀವಿಸುವ ಸ್ಥಿತಿ ನಿರ್ಮಾಣವಾಗಿದೆ . ಪಶ್ಚಿಮ ಘಟ್ಟ ಸೂಕ್ಷ್ಮ ವಲಯ ಪ್ರದೇಶದ ಜನರು ಕಳೆದ 15 ವರ್ಷಗಳಿಂದ ಪಕ್ಷಾತೀತವಾಗಿ, ಜಾತ್ಯಾತೀತವಾಗಿ, ಗ್ರಾಮ ಗ್ರಾಮಗಳಲ್ಲಿಯೂ ಈ ವರದಿ ವಿರುದ್ಧ ಪ್ರತಿಭಟಿಸಿರುವರು. ಅಷ್ಟೆಲ್ಲ ಆದರೂ ಈ ವರದಿ ಬಗ್ಗೆ ಸಂಬಂಧಪಟ್ಟ ಅಧಿಕಾರಿ ವರ್ಗದವರು ಲಿಖಿತವಾಗಿ ಮಾಹಿತಿ ನೀಡದಿರುವುದು ವಿಪರ್ಯಾಸ . ಇದೀಗ   ಮತ್ತೆ ರಾಜ್ಯ ಸರಕಾರ ವರದಿ ಬಗ್ಗೆ ತಕರಾರು ಎತ್ತುತ್ತಿದ್ದುಇದರಿಂದ ಮತ್ತೆ ಜನರು ಆತಂಕಕ್ಕೆ ಒಳಗಾಗಿದ್ದಾರೆ ಎಂದರು.

Advertisement

ಅವರು  ಸುಬ್ರಹ್ಮಣ್ಯದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದರು .ಈ ಹಿಂದೆಯೇ ಎಲ್ಲಾ ಭಾದಿತ ಗ್ರಾಮಗಳ ಗ್ರಾಮ ಪಂಚಾಯತ್ ಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೊಳಿ ಸುವುದು ಬೇಡ ಎಂಬ ಬಗ್ಗೆ ನಿರ್ಣಯ ಕೈಗೊಂಡಿರುತ್ತಾರೆ. ಹಾಗೆಯೇ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಸಭೆಯಲ್ಲೂ ವರದಿ ಜಾರಿಗೆ ವಿರೋಧ ವ್ಯಕ್ತಪಡಿಸಿ ನಿರ್ಣಯ ಕೈಗೊಳ್ಳಲಾಗಿದೆ .ಇದೀಗ ಮಾನಸಿಕ ಒತ್ತಡದಿಂದ ಪಶ್ಚಿಮ ಘಟ್ಟ ಬುಡದಲ್ಲಿ ವಾಸಿಸುತ್ತಿರುವ ರೈತರು ಆತಂಕದಲ್ಲಿ ಜೀವನ ನಡೆಸುವಂತಾಗಿದೆ ಎಂದು ಕಿಶೋರ್ ಶಿರಾಡಿ ತಿಳಿಸಿದರು.

Advertisement

ಸಮಾಲೋಚನಾ ಸಭೆಯಲ್ಲಿ ಜನಹಿತ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸದಸ್ಯರುಗಳಾದ ಶೇಖರಪ್ಪ ,ಹರೀಶ ಕಲಂಗುಡಿ, ಅಚ್ಯುತ ಗೌಡ ಸುಬ್ರಹ್ಮಣ್ಯ , ಶ್ರೀಕಾಂತ್ ಎನ್, ಜಯಪ್ರಕಾಶ್ ಕೂಜುಗೋಡು ಗಿರೀಶ ಪೈಲಾಜೆ, ಸಂತೋಷ ಎಂ, ಚಿದಾನಂದ ಗೌಡ ದೇವ್ಪಾಲು,ಡಾಟ ಆದರ್ಶ ಜೋಸೆಫ್, ದಿಲೀಪ್ ಉಪ್ಪಳಿಕೆ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಕ್ಯಾನ್ಸರ್‌ಕಾರಕವಲ್ಲ | WHO ವರದಿ ಸತ್ಯಕ್ಕೆ ದೂರವಾದುದು | ಅಧ್ಯಯನದ ನೆರವಿಗೆ ಕೇಂದ್ರ ಸರ್ಕಾರಕ್ಕೆ ಮನವಿ | ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿಕೆ |
November 22, 2024
4:02 PM
by: ದ ರೂರಲ್ ಮಿರರ್.ಕಾಂ
ನ.23 | ಗುತ್ತಿಗಾರು ಸಹಕಾರಿ ಸಂಘದ ಶತಮಾನೋತ್ಸವ | ಕೃಷಿ ವಿಚಾರಗೋಷ್ಠಿ | ಅಡಿಕೆ ರೋಗಗಳ ಬಗ್ಗೆ ಮಾಹಿತಿ ವಿನಿಮಯ |
November 22, 2024
2:32 PM
by: ದ ರೂರಲ್ ಮಿರರ್.ಕಾಂ
ಕೋಲಾರದಲ್ಲಿ ಅತೀ ಹೆಚ್ಚು ನಕಲಿ ವೈದ್ಯರು…! | ನಕಲಿ ವೈದ್ಯರ ಕಡಿವಾಣಕ್ಕೆ ಕಟ್ಟುನಿಟ್ಟಿನ ಕ್ರಮ
November 21, 2024
7:36 PM
by: The Rural Mirror ಸುದ್ದಿಜಾಲ
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ  ಮನವಿ
November 21, 2024
7:32 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror