ಕರ್ನಾಟಕ ರಾಜ್ಯದಲ್ಲಿ ಕಸ್ತೂರಿರಂಗನ್ ವರದಿ ಜಾರಿಗೊಳಿಸುವ ಬಗ್ಗೆ ಮತ್ತೆ ರಾಜ್ಯ ಸರಕಾರ ಹುನ್ನಾರ ನಡೆಸುತ್ತಿದ್ದು ಇದರ ವಿರುದ್ಧ ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ವತಿಯಿಂದ ಮುಂದೆ ಬೃಹತ್ ಪ್ರತಿಭಟನೆ ನಡೆಸಲಿರುವುದಾಗಿ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ ತಿಳಿಸಿದ್ದಾರೆ.
ಕಸ್ತೂರಿ ರಂಗನ್ ವರದಿಯ ಕಾರಣದಿಂದ ಪಶ್ಚಿಮ ಘಟ್ಟ ತಪ್ಪಲಿನ ಗ್ರಾಮಗಳ ಜನತೆ ಪ್ರತಿದಿನ ಆತಂಕದ ವಾತಾವರಣದಲ್ಲಿ ಜೀವಿಸುವ ಸ್ಥಿತಿ ನಿರ್ಮಾಣವಾಗಿದೆ . ಪಶ್ಚಿಮ ಘಟ್ಟ ಸೂಕ್ಷ್ಮ ವಲಯ ಪ್ರದೇಶದ ಜನರು ಕಳೆದ 15 ವರ್ಷಗಳಿಂದ ಪಕ್ಷಾತೀತವಾಗಿ, ಜಾತ್ಯಾತೀತವಾಗಿ, ಗ್ರಾಮ ಗ್ರಾಮಗಳಲ್ಲಿಯೂ ಈ ವರದಿ ವಿರುದ್ಧ ಪ್ರತಿಭಟಿಸಿರುವರು. ಅಷ್ಟೆಲ್ಲ ಆದರೂ ಈ ವರದಿ ಬಗ್ಗೆ ಸಂಬಂಧಪಟ್ಟ ಅಧಿಕಾರಿ ವರ್ಗದವರು ಲಿಖಿತವಾಗಿ ಮಾಹಿತಿ ನೀಡದಿರುವುದು ವಿಪರ್ಯಾಸ . ಇದೀಗ ಮತ್ತೆ ರಾಜ್ಯ ಸರಕಾರ ವರದಿ ಬಗ್ಗೆ ತಕರಾರು ಎತ್ತುತ್ತಿದ್ದುಇದರಿಂದ ಮತ್ತೆ ಜನರು ಆತಂಕಕ್ಕೆ ಒಳಗಾಗಿದ್ದಾರೆ ಎಂದರು.
ಅವರು ಸುಬ್ರಹ್ಮಣ್ಯದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದರು .ಈ ಹಿಂದೆಯೇ ಎಲ್ಲಾ ಭಾದಿತ ಗ್ರಾಮಗಳ ಗ್ರಾಮ ಪಂಚಾಯತ್ ಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೊಳಿ ಸುವುದು ಬೇಡ ಎಂಬ ಬಗ್ಗೆ ನಿರ್ಣಯ ಕೈಗೊಂಡಿರುತ್ತಾರೆ. ಹಾಗೆಯೇ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಸಭೆಯಲ್ಲೂ ವರದಿ ಜಾರಿಗೆ ವಿರೋಧ ವ್ಯಕ್ತಪಡಿಸಿ ನಿರ್ಣಯ ಕೈಗೊಳ್ಳಲಾಗಿದೆ .ಇದೀಗ ಮಾನಸಿಕ ಒತ್ತಡದಿಂದ ಪಶ್ಚಿಮ ಘಟ್ಟ ಬುಡದಲ್ಲಿ ವಾಸಿಸುತ್ತಿರುವ ರೈತರು ಆತಂಕದಲ್ಲಿ ಜೀವನ ನಡೆಸುವಂತಾಗಿದೆ ಎಂದು ಕಿಶೋರ್ ಶಿರಾಡಿ ತಿಳಿಸಿದರು.
ಸಮಾಲೋಚನಾ ಸಭೆಯಲ್ಲಿ ಜನಹಿತ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸದಸ್ಯರುಗಳಾದ ಶೇಖರಪ್ಪ ,ಹರೀಶ ಕಲಂಗುಡಿ, ಅಚ್ಯುತ ಗೌಡ ಸುಬ್ರಹ್ಮಣ್ಯ , ಶ್ರೀಕಾಂತ್ ಎನ್, ಜಯಪ್ರಕಾಶ್ ಕೂಜುಗೋಡು ಗಿರೀಶ ಪೈಲಾಜೆ, ಸಂತೋಷ ಎಂ, ಚಿದಾನಂದ ಗೌಡ ದೇವ್ಪಾಲು,ಡಾಟ ಆದರ್ಶ ಜೋಸೆಫ್, ದಿಲೀಪ್ ಉಪ್ಪಳಿಕೆ ಉಪಸ್ಥಿತರಿದ್ದರು.
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…
ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…
ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…
ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…
ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…
ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…