ಸುಳ್ಯ ತಾಲೂಕಿನ ಹರಿಹರ ಪಲ್ಲತ್ತಡ್ಕದಲ್ಲಿ ಮದ್ಯದಂಗಡಿ ತೆರೆಯುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಗುರುವಾರ ಹರಿಹರದಲ್ಲಿ ಪ್ರತಿಭಟನೆ ನಡೆಸಿದರು.
ಮದ್ಯ ಮುಕ್ತ ಹೋರಾಟ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಹರಿಹರ ಮುಖ್ಯಪೇಟೆಯಲ್ಲಿ ಪ್ರತಿಭಟನಾ ಮೆರವಣಿಗೆ ಹಾಗೂ ಸಭೆ ನಡೆಯಿತು. ಕಳೆದ ಹಲವು ಸಮಯಗಳಿಂದ ಮದ್ಯದಂಗಡಿ ತೆರೆಯುವುದನ್ನು ವಿರೋಧಿಸಿ ಸಭೆ, ಖಂಡನೆ ನಡೆಯುತ್ತಿತ್ತು. ಮದ್ಯಮುಕ್ತ ಗ್ರಾಮವಾಗಿ ಉಳಿಸಬೇಕು ಎಂಬುದು ಪ್ರತಿಭಟನಾಕಾರರ ಒತ್ತಾಯವಾಗಿತ್ತು. ಇದೀಗ ಹೋರಾಟ, ಪ್ರತಿಭಟನೆ ಆರಂಭವಾಗಿದೆ. ಪ್ರತಿಭಟನೆ ವೇಳೆ ವೀಡಿಯೊ ಮಾಡಿದ ಅಪರಿಚಿತ ವ್ಯಕ್ತಿಯನ್ನು ಪ್ರತಿಭಟನಾಕಾರರು ತರಾಟೆಗೆ ತೆಗೆದುಕೊಂಡರು. ತಕ್ಷಣವೇ ಪೊಲೀಸರು ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel