ಸೌಜನ್ಯ ಪ್ರಕರಣ | ಪುತ್ತೂರಿನಲ್ಲಿ ಪುತ್ತಿಲ ಪರಿವಾರದಿಂದ ಪ್ರತಿಭಟನೆ | ಕೊಲೆ ಪ್ರಕರಣದ ನೈಜ ಆರೋಪಿ ಬಂಧನಕ್ಕೆ ಒತ್ತಾಯ |

August 14, 2023
2:49 PM
ಸೌಜನ್ಯ ಕೊಲೆ ಪ್ರಕರಣದ ನೈಜ ಆರೋಪಿಗಳನ್ನು ಬಂಧಿಸುವಂತೆ ಹಾಗೂ  ಪ್ರಕರಣವನ್ನು ಮರು ತನಿಖೆ ನಡೆಸಬೇಕೆಂದು ಆಗ್ರಹಿಸಿ ಪುತ್ತೂರು ಪರಿವಾರದಿಂದ ಬೃಹತ್ ಪ್ರತಿಭಟನೆ, ಪಾದಯಾತ್ರೆ ಸೋಮವಾರದಂದು ನಡೆಯಿತು.

ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ,ಕೊಲೆ ಪ್ರಕರಣದ ನೈಜ ಆರೋಪಿಗಳನ್ನು ಬಂಧಿಸುವಂತೆ ಹಾಗೂ  ಪ್ರಕರಣವನ್ನು ಮರು ತನಿಖೆ ನಡೆಸಬೇಕೆಂದು ಆಗ್ರಹಿಸಿ ಪುತ್ತೂರು ಪರಿವಾರದಿಂದ ಬೃಹತ್ ಪ್ರತಿಭಟನೆ, ಪಾದಯಾತ್ರೆ ಸೋಮವಾರದಂದು ನಡೆಯಿತು.

ಪುತ್ತೂರಿನ ದರ್ಬೆ ವೃತ್ತದಿಂದ ಪಾದಯಾತ್ರೆಯ ಮೂಲಕ ತೆರಳಿದ ಪುತ್ತಿಲ ಪರಿವಾರದ ಕಾರ್ಯಕರ್ತರು ಸರಕಾರಿ ಬಸ್ ನಿಲ್ದಾಣದ ಬಳಿ ಸೇರಿ ಸುಮಾರು 10 ನಿಮಿಷ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯನ್ನು ಉದ್ಧೇಶಿಸಿ ಮಾತನಾಡಿದ ಅರುಣ್ ಕುಮಾರ್ ಪುತ್ತಿಲ, ಸೌಜನ್ಯಳ ಕೊಲೆಯಾಗಿ ಹನ್ನೊಂದು ವರ್ಷಗಳು ಕಳೆದರು  ನೈಜ ಕೊಲೆಗಾರ ಯಾರು ಅನ್ನೋದು ಈವರೆಗೂ ಪತ್ತೆಯಾಗಿಲ್ಲ. ಆರೋಪಿ ಎಂದು ಬಂಧಿಸಲ್ಪಟ್ಟ ಸಂತೋಷ್ ರಾವ್ ನಿರ್ದೋಷಿ ಎಂದು ನ್ಯಾಯಾಲಯವೇ ಆದೇಶ ನೀಡಿರುವಾಗ ನೈಜ ಆರೋಪಿ ಯಾರು ಅನ್ನೋದು ಪತ್ತೆಯಾಗಬೇಕು. ಆ ಕಾರಣಕ್ಕೆ ಪ್ರಕರಣವನ್ನು ಸರಕಾರ ಕೂಡಲೇ ಮರು ತನಿಖೆ ನಡೆಸಬೇಕು ಎಂದರು.

ಸರಕಾರವು ಸೌಜನ್ಯ ವಿಚಾರದಲ್ಲಿ ಮೀನಾಮೇಷ ಎಣಿಸಿದರೆ, ಈ ಪ್ರಕರಣದ ಲಾಭ ಪಡೆಯಲು ಯತ್ನಿಸಿದರೆ ಸರಕಾರ ಪತನವೂ ಆಗಬಹುದು ಎಂದು ಎಚ್ಚರಿಸಿದರು. ಸೌಜನ್ಯ ಪರ ನ್ಯಾಯಕ್ಕಾಗಿ ನಡೆಯುತ್ತಿರುವ ಈ ಆಂದೋಲನ ಮುಂದಿನ ದಿನಗಳಲ್ಲಿ ಸಂಘರ್ಷವಾಗುವ ಮೊದಲು ಸರಕಾರ ಎಚ್ಚೆತ್ತುಕೊಳ್ಳಬೇಕೆಂದ ಅವರು ಸೌಜನ್ಯ ಪ್ರಕರಣ ನಡೆದ ಸಂದರ್ಭದಲ್ಲಿದ್ದ ಪೋಲೀಸ್ ಅಧಿಕಾರಿಗಳಾದ ಅಭಿಷೇಕ್ ಗೋಯಲ್, ಸುದರ್ಶನ್ ಮತ್ತು ಯೋಗೀಶ್ ಎನ್ನುವ ಅಧಿಕಾರಿಗಳನ್ನು ಸರಕಾರ ಎಸ್.ಐ.ಟಿ ಮೂಲಕ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು. ಇವರ ತನಿಖೆಯಿಂದ ಸೌಜನ್ಯಳ ಕೊಲೆಯ ಎಲ್ಲಾ ಮಾಹಿತಿಗಳು ಹೊರಗೆ ಬರಲಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror