ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ,ಕೊಲೆ ಪ್ರಕರಣದ ನೈಜ ಆರೋಪಿಗಳನ್ನು ಬಂಧಿಸುವಂತೆ ಹಾಗೂ ಪ್ರಕರಣವನ್ನು ಮರು ತನಿಖೆ ನಡೆಸಬೇಕೆಂದು ಆಗ್ರಹಿಸಿ ಪುತ್ತೂರು ಪರಿವಾರದಿಂದ ಬೃಹತ್ ಪ್ರತಿಭಟನೆ, ಪಾದಯಾತ್ರೆ ಸೋಮವಾರದಂದು ನಡೆಯಿತು.
ಪುತ್ತೂರಿನ ದರ್ಬೆ ವೃತ್ತದಿಂದ ಪಾದಯಾತ್ರೆಯ ಮೂಲಕ ತೆರಳಿದ ಪುತ್ತಿಲ ಪರಿವಾರದ ಕಾರ್ಯಕರ್ತರು ಸರಕಾರಿ ಬಸ್ ನಿಲ್ದಾಣದ ಬಳಿ ಸೇರಿ ಸುಮಾರು 10 ನಿಮಿಷ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯನ್ನು ಉದ್ಧೇಶಿಸಿ ಮಾತನಾಡಿದ ಅರುಣ್ ಕುಮಾರ್ ಪುತ್ತಿಲ, ಸೌಜನ್ಯಳ ಕೊಲೆಯಾಗಿ ಹನ್ನೊಂದು ವರ್ಷಗಳು ಕಳೆದರು ನೈಜ ಕೊಲೆಗಾರ ಯಾರು ಅನ್ನೋದು ಈವರೆಗೂ ಪತ್ತೆಯಾಗಿಲ್ಲ. ಆರೋಪಿ ಎಂದು ಬಂಧಿಸಲ್ಪಟ್ಟ ಸಂತೋಷ್ ರಾವ್ ನಿರ್ದೋಷಿ ಎಂದು ನ್ಯಾಯಾಲಯವೇ ಆದೇಶ ನೀಡಿರುವಾಗ ನೈಜ ಆರೋಪಿ ಯಾರು ಅನ್ನೋದು ಪತ್ತೆಯಾಗಬೇಕು. ಆ ಕಾರಣಕ್ಕೆ ಪ್ರಕರಣವನ್ನು ಸರಕಾರ ಕೂಡಲೇ ಮರು ತನಿಖೆ ನಡೆಸಬೇಕು ಎಂದರು.
ಸರಕಾರವು ಸೌಜನ್ಯ ವಿಚಾರದಲ್ಲಿ ಮೀನಾಮೇಷ ಎಣಿಸಿದರೆ, ಈ ಪ್ರಕರಣದ ಲಾಭ ಪಡೆಯಲು ಯತ್ನಿಸಿದರೆ ಸರಕಾರ ಪತನವೂ ಆಗಬಹುದು ಎಂದು ಎಚ್ಚರಿಸಿದರು. ಸೌಜನ್ಯ ಪರ ನ್ಯಾಯಕ್ಕಾಗಿ ನಡೆಯುತ್ತಿರುವ ಈ ಆಂದೋಲನ ಮುಂದಿನ ದಿನಗಳಲ್ಲಿ ಸಂಘರ್ಷವಾಗುವ ಮೊದಲು ಸರಕಾರ ಎಚ್ಚೆತ್ತುಕೊಳ್ಳಬೇಕೆಂದ ಅವರು ಸೌಜನ್ಯ ಪ್ರಕರಣ ನಡೆದ ಸಂದರ್ಭದಲ್ಲಿದ್ದ ಪೋಲೀಸ್ ಅಧಿಕಾರಿಗಳಾದ ಅಭಿಷೇಕ್ ಗೋಯಲ್, ಸುದರ್ಶನ್ ಮತ್ತು ಯೋಗೀಶ್ ಎನ್ನುವ ಅಧಿಕಾರಿಗಳನ್ನು ಸರಕಾರ ಎಸ್.ಐ.ಟಿ ಮೂಲಕ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು. ಇವರ ತನಿಖೆಯಿಂದ ಸೌಜನ್ಯಳ ಕೊಲೆಯ ಎಲ್ಲಾ ಮಾಹಿತಿಗಳು ಹೊರಗೆ ಬರಲಿದೆ ಎಂದರು.
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…
ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…
ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್ ಲಭ್ಯತೆ ಕಡಿಮೆಯಾಗುತ್ತದೆ ಎಂದು…