Advertisement
ಸುದ್ದಿಗಳು

ಸೌಜನ್ಯ ಪ್ರಕರಣ | ಪುತ್ತೂರಿನಲ್ಲಿ ಪುತ್ತಿಲ ಪರಿವಾರದಿಂದ ಪ್ರತಿಭಟನೆ | ಕೊಲೆ ಪ್ರಕರಣದ ನೈಜ ಆರೋಪಿ ಬಂಧನಕ್ಕೆ ಒತ್ತಾಯ |

Share

ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ,ಕೊಲೆ ಪ್ರಕರಣದ ನೈಜ ಆರೋಪಿಗಳನ್ನು ಬಂಧಿಸುವಂತೆ ಹಾಗೂ  ಪ್ರಕರಣವನ್ನು ಮರು ತನಿಖೆ ನಡೆಸಬೇಕೆಂದು ಆಗ್ರಹಿಸಿ ಪುತ್ತೂರು ಪರಿವಾರದಿಂದ ಬೃಹತ್ ಪ್ರತಿಭಟನೆ, ಪಾದಯಾತ್ರೆ ಸೋಮವಾರದಂದು ನಡೆಯಿತು.

Advertisement
Advertisement
Advertisement

ಪುತ್ತೂರಿನ ದರ್ಬೆ ವೃತ್ತದಿಂದ ಪಾದಯಾತ್ರೆಯ ಮೂಲಕ ತೆರಳಿದ ಪುತ್ತಿಲ ಪರಿವಾರದ ಕಾರ್ಯಕರ್ತರು ಸರಕಾರಿ ಬಸ್ ನಿಲ್ದಾಣದ ಬಳಿ ಸೇರಿ ಸುಮಾರು 10 ನಿಮಿಷ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

Advertisement

Advertisement

ಪ್ರತಿಭಟನೆಯನ್ನು ಉದ್ಧೇಶಿಸಿ ಮಾತನಾಡಿದ ಅರುಣ್ ಕುಮಾರ್ ಪುತ್ತಿಲ, ಸೌಜನ್ಯಳ ಕೊಲೆಯಾಗಿ ಹನ್ನೊಂದು ವರ್ಷಗಳು ಕಳೆದರು  ನೈಜ ಕೊಲೆಗಾರ ಯಾರು ಅನ್ನೋದು ಈವರೆಗೂ ಪತ್ತೆಯಾಗಿಲ್ಲ. ಆರೋಪಿ ಎಂದು ಬಂಧಿಸಲ್ಪಟ್ಟ ಸಂತೋಷ್ ರಾವ್ ನಿರ್ದೋಷಿ ಎಂದು ನ್ಯಾಯಾಲಯವೇ ಆದೇಶ ನೀಡಿರುವಾಗ ನೈಜ ಆರೋಪಿ ಯಾರು ಅನ್ನೋದು ಪತ್ತೆಯಾಗಬೇಕು. ಆ ಕಾರಣಕ್ಕೆ ಪ್ರಕರಣವನ್ನು ಸರಕಾರ ಕೂಡಲೇ ಮರು ತನಿಖೆ ನಡೆಸಬೇಕು ಎಂದರು.

Advertisement

ಸರಕಾರವು ಸೌಜನ್ಯ ವಿಚಾರದಲ್ಲಿ ಮೀನಾಮೇಷ ಎಣಿಸಿದರೆ, ಈ ಪ್ರಕರಣದ ಲಾಭ ಪಡೆಯಲು ಯತ್ನಿಸಿದರೆ ಸರಕಾರ ಪತನವೂ ಆಗಬಹುದು ಎಂದು ಎಚ್ಚರಿಸಿದರು. ಸೌಜನ್ಯ ಪರ ನ್ಯಾಯಕ್ಕಾಗಿ ನಡೆಯುತ್ತಿರುವ ಈ ಆಂದೋಲನ ಮುಂದಿನ ದಿನಗಳಲ್ಲಿ ಸಂಘರ್ಷವಾಗುವ ಮೊದಲು ಸರಕಾರ ಎಚ್ಚೆತ್ತುಕೊಳ್ಳಬೇಕೆಂದ ಅವರು ಸೌಜನ್ಯ ಪ್ರಕರಣ ನಡೆದ ಸಂದರ್ಭದಲ್ಲಿದ್ದ ಪೋಲೀಸ್ ಅಧಿಕಾರಿಗಳಾದ ಅಭಿಷೇಕ್ ಗೋಯಲ್, ಸುದರ್ಶನ್ ಮತ್ತು ಯೋಗೀಶ್ ಎನ್ನುವ ಅಧಿಕಾರಿಗಳನ್ನು ಸರಕಾರ ಎಸ್.ಐ.ಟಿ ಮೂಲಕ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು. ಇವರ ತನಿಖೆಯಿಂದ ಸೌಜನ್ಯಳ ಕೊಲೆಯ ಎಲ್ಲಾ ಮಾಹಿತಿಗಳು ಹೊರಗೆ ಬರಲಿದೆ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 31-10-2024 | ಎರಡು ದಿನ ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ | ಮಳೆ ದೂರವಾಗುವ ಲಕ್ಷಣ |

ಈಗಿನಂತೆ ಈ ಮಳೆಯು ನವೆಂಬರ್ 4ರ ವರೆಗೆ ಮುಂದುವರಿಯುವ ಲಕ್ಷಣಗಳಿವೆ.

16 hours ago

ಬೆಳಕಿನ ಹಬ್ಬ ದೀಪಾವಳಿ | ಮಾರುಕಟ್ಟೆಯಲ್ಲಿ ವಿವಿಧ ವಿನ್ಯಾಸದ ಹಣತೆ | ಗ್ರಾಹಕರ ಮನಸೆಳೆಯುತ್ತಿರುವ ಮಣ್ಣಿನ ಹಣತೆ |

ಕತ್ತಲಿನಿಂದ ಬೆಳಕಿನೆಡೆಗೆ ಸಾಗುವ  ದೀಪಾವಳಿಗೆ ದೀಪವೇ ವಿಶೇಷ. ವಿವಿಧ ವಿನ್ಯಾಸದ ಬಣ್ಣದ ದೀಪಗಳನ್ನು…

22 hours ago

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ 24 ವಿಶೇಷ ರೈಲು | ಪಟಾಕಿಗಳನ್ನು ರೈಲುಗಳಲ್ಲಿ ಕೊಂಡೊಯ್ಯದಂತೆ ರೈಲ್ವೆ ಇಲಾಖೆ ಮನವಿ

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ನಿವಾರಿಸಲು ನೈರುತ್ಯ ರೈಲ್ವೆ ರಾಜ್ಯದ ವಿವಿಧ…

22 hours ago

ಕಂದಾಯ ಅಧಿಕಾರಿಗಳು ಸಂವೇದನಾಶೀಲರಾಗಿ ಕಾರ್ಯ ನಿರ್ವಹಿಸಿ | ಕಂದಾಯ ಸಚಿವ ಕೃಷ್ಣಬೈರೇಗೌಡ

ಕಂದಾಯ ಅಧಿಕಾರಿಗಳು ಸಂವೇದನಾಶೀಲತೆಯಿಂದ ಕಾರ್ಯ ನಿರ್ವಹಿಸಿದರೆ ಸಾರ್ವಜನಿಕರಿಗೆ ಅತ್ಯುತ್ತಮ ಸೇವೆ ನೀಡಬಹುದು ಎಂದು…

22 hours ago

ಸರ್ಕಾರಿ ಆಸ್ಪತ್ರೆಗಳಲ್ಲಿನ ಔಷಧಿಗಳ ಪಟ್ಟಿ 250 ರಿಂದ ಒಂದು ಸಾವಿರಕ್ಕೆ ಏರಿಕೆ | ಎಲ್ಲಾ ಔಷಧಿಗಳು ಸರ್ಕಾರಿ ಆಸ್ಪತ್ರೆಗಳಲ್ಲಿ  ಸಿಗುವಂತೆ ಕ್ರಮ

 ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ  ಸರಬರಾಜು ಮಾಡುವ ಅಗತ್ಯ  ಔಷಧಿಗಳ  ಪಟ್ಟಿಯನ್ನು 250 ರಿಂದ…

22 hours ago