ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನೈತಿಕ ಪೊಲೀಸ್‌ಗಿರಿಗೆ ಖಂಡನೆ | ಅ.29 ರಂದು ತಾಲೂಕು ಕಚೇರಿ ಎದುರು ಧರಣಿ ಸತ್ಯಾಗ್ರಹ -ಟಿ.ಎಂ.ಶಹೀದ್ ತೆಕ್ಕಿಲ್

October 24, 2022
4:51 PM

ರಾಜ್ಯದಲ್ಲಿ ಮುಸ್ಲಿಂ ಸಮುದಾಯವನ್ನು ದಮನಿಸುವ ನಿಟ್ಟಿನಲ್ಲಿ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರ ದಾಳಿಗಳಾಗುತ್ತಿದೆ. ಇದಕ್ಕೆ ಸರ್ಕಾರ ಕೂಡ ಪರೋಕ್ಷವಾಗಿ ಬೆಂಬಲ ನೀಡುತ್ತಿದೆ. ಇದರ ವಿರುದ್ದವಾಗಿ ಅ.29 ರಂದು ಸುಳ್ಯ ತಾಲೂಕು ಕಚೇರಿ ಎದುರು ಎಲ್ಲಾ ಸಮಾನ ಮನಸ್ಕ ಸಂಘಟನೆಗಳು ಹಾಗೂ ಜಾತ್ಯತೀತ ನಾಯಕರನ್ನು ಸೇರಿಸಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ರಾಜ್ಯ ಮುಸ್ಲಿಂ ಯೂತ್ ಕೌನ್ಸಿಲ್‌ನ ಪ್ರಧಾನ ಕಾರ್ಯದರ್ಶಿ ಟಿ.ಎಂ.ಶಹೀದ್ ತೆಕ್ಕಿಲ್ ಹೇಳಿದ್ದಾರೆ.

Advertisement
Advertisement
Advertisement
Advertisement

ಸುಳ್ಯದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ರಾಜ್ಯದಲ್ಲಿ ನೈತಿಕ ಪೊಲೀಸ್‌ಗಿರಿ ಪ್ರಕರಣಗಳು ಹೆಚ್ಚಾಗುತ್ತಿದೆ. ಕಡಬದ ಕಾಣಿಯೂರಿನಲ್ಲಿ ಬಟ್ಟೆ ವ್ಯಾಪಾರಿಗಳ ಮೇಲೆ ನಡೆದ ಘಟನೆ ಖಂಡನೀಯ. ಅವರು ತಪ್ಪು ಮಾಡಿದ್ದರೆ ಅವರನ್ನು ಶಿಕ್ಷಿಸಲು ಪೊಲೀಸ್ ಇಲಾಖೆ ಇದೆ. ನೈತಿಕ ಪೊಲೀಸ್‌ಗಿರಿ ಮಾಡುವುದು ಸರಿಯಲ್ಲ ಎಂದರು. ಎರಡು ಧರ್ಮಗಳಲ್ಲಿ ಕೆಲವು ಕಿಡಿಗೇಡಿಗಳಿದ್ದಾರೆ. ಸಮಾಜದ ಸ್ವಾಸ್ತ್ಯ ಕೆಡವುತ್ತಿದ್ದಾರೆ. ಸರ್ಕಾರ ಕೂಡ ಮುಸ್ಲಿಂ ಸಮುದಾಯವನ್ನು ಕಡೆಗಣಿಸುತ್ತಿದೆ. ರಾಜ್ಯದಲ್ಲಿ ಹತ್ಯೆಯಾದ ಅಲ್ಪಸಂಖ್ಯಾತ ಸಮುದಾಯದವರಿಗೆ ಪರಿಹಾರ ನೀಡಿಲ್ಲ. ಮಾನವ ಧರ್ಮ ಕಾಪಾಡಲು ಸರ್ಕಾರ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Advertisement

ರಾಜ್ಯ ಸರ್ಕಾರವು ಮುಸ್ಲಿಂ ಸಮುದಾಯದ ಪ್ರಾಶಸ್ಯ ಕಸಿಯುತ್ತಿದೆ. ಅಲ್ಪಸಂಖ್ಯಾತ ಸಮುದಾಯದ ಸರ್ಕಾರಿ ಉದ್ಯೋಗದ ಮೀಸಲಾತಿ ಮತ್ತು ರಾಜಕೀಯ ಮೀಸಲಾತಿ ಕಡಿತ ಮಾಡಲು  ಹೊರಟಿದೆ. ಇದರ ವಿರುದ್ದವು ಹೋರಾಟ ಮಾಡಲಾಗುವುದು ಎಂದರು. ರಾಜಕೀಯದಲ್ಲಿ ಮತ ಪಡೆಯುವ ಹುನ್ನಾರ ಇದು ದೇಶದ ಅಭಿವೃದ್ಧಿಗೆ ಮಾರಕವಾಗಿದೆ. ಯಾಕೆ ಈ ರೀತಿ ವಿಭಜನೆ ಆಗುತ್ತಿದೆ ಮತ್ತು ಇದಕ್ಕೆ ಏನು ಪರಿಹಾರ ಎಂಬ ಬಗ್ಗೆ ಹೈಕೋರ್ಟಿನ ನ್ಯಾಯಾದೀಶರ ನೇತೃತ್ವದಲ್ಲಿ ತನಿಖೆ ಅಗತ್ಯವಿದೆ ಮತ್ತು ಶಾಶ್ವತ ಪರಿಹಾರ ಕಂಡು ಹಿಡಿಯುವಂತೆ ಆಗ್ರಹಿಸಿದರು.

Advertisement

ಸುದ್ದಿಗೋಷ್ಟಿಯಲ್ಲಿ ರಾಜ್ಯ ಅಲ್ಪ ಸಂಖ್ಯಾತರ ಕಾಂಗ್ರೇಸ್ ಘಟಕದ ಕಾರ್ಯದರ್ಶಿ ಸಂಪಾಜೆ ಗ್ರಾ.ಪಂ. ಸದಸ್ಯ ಅಬ್ಬುಶಾಲಿ ಗೂನಡ್ಕ , ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್ , ಅಲ್ಪಸಂಖ್ಯಾತ ಘಟಕದ ಉಪಾದ್ಯಕ್ಷ ಹನೀಫ್ ಬೀಜಕೊಚ್ಚಿ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ
February 25, 2025
7:20 AM
by: ದ ರೂರಲ್ ಮಿರರ್.ಕಾಂ
ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ
February 25, 2025
7:10 AM
by: The Rural Mirror ಸುದ್ದಿಜಾಲ
ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು
February 25, 2025
7:05 AM
by: The Rural Mirror ಸುದ್ದಿಜಾಲ
ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |
February 24, 2025
10:54 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror