ರಾಜ್ಯದಲ್ಲಿ ಮುಸ್ಲಿಂ ಸಮುದಾಯವನ್ನು ದಮನಿಸುವ ನಿಟ್ಟಿನಲ್ಲಿ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರ ದಾಳಿಗಳಾಗುತ್ತಿದೆ. ಇದಕ್ಕೆ ಸರ್ಕಾರ ಕೂಡ ಪರೋಕ್ಷವಾಗಿ ಬೆಂಬಲ ನೀಡುತ್ತಿದೆ. ಇದರ ವಿರುದ್ದವಾಗಿ ಅ.29 ರಂದು ಸುಳ್ಯ ತಾಲೂಕು ಕಚೇರಿ ಎದುರು ಎಲ್ಲಾ ಸಮಾನ ಮನಸ್ಕ ಸಂಘಟನೆಗಳು ಹಾಗೂ ಜಾತ್ಯತೀತ ನಾಯಕರನ್ನು ಸೇರಿಸಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ರಾಜ್ಯ ಮುಸ್ಲಿಂ ಯೂತ್ ಕೌನ್ಸಿಲ್‌ನ ಪ್ರಧಾನ ಕಾರ್ಯದರ್ಶಿ ಟಿ.ಎಂ.ಶಹೀದ್ ತೆಕ್ಕಿಲ್ ಹೇಳಿದ್ದಾರೆ.
ಸುಳ್ಯದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ರಾಜ್ಯದಲ್ಲಿ ನೈತಿಕ ಪೊಲೀಸ್‌ಗಿರಿ ಪ್ರಕರಣಗಳು ಹೆಚ್ಚಾಗುತ್ತಿದೆ. ಕಡಬದ ಕಾಣಿಯೂರಿನಲ್ಲಿ ಬಟ್ಟೆ ವ್ಯಾಪಾರಿಗಳ ಮೇಲೆ ನಡೆದ ಘಟನೆ ಖಂಡನೀಯ. ಅವರು ತಪ್ಪು ಮಾಡಿದ್ದರೆ ಅವರನ್ನು ಶಿಕ್ಷಿಸಲು ಪೊಲೀಸ್ ಇಲಾಖೆ ಇದೆ. ನೈತಿಕ ಪೊಲೀಸ್‌ಗಿರಿ ಮಾಡುವುದು ಸರಿಯಲ್ಲ ಎಂದರು. ಎರಡು ಧರ್ಮಗಳಲ್ಲಿ ಕೆಲವು ಕಿಡಿಗೇಡಿಗಳಿದ್ದಾರೆ. ಸಮಾಜದ ಸ್ವಾಸ್ತ್ಯ ಕೆಡವುತ್ತಿದ್ದಾರೆ. ಸರ್ಕಾರ ಕೂಡ ಮುಸ್ಲಿಂ ಸಮುದಾಯವನ್ನು ಕಡೆಗಣಿಸುತ್ತಿದೆ. ರಾಜ್ಯದಲ್ಲಿ ಹತ್ಯೆಯಾದ ಅಲ್ಪಸಂಖ್ಯಾತ ಸಮುದಾಯದವರಿಗೆ ಪರಿಹಾರ ನೀಡಿಲ್ಲ. ಮಾನವ ಧರ್ಮ ಕಾಪಾಡಲು ಸರ್ಕಾರ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರವು ಮುಸ್ಲಿಂ ಸಮುದಾಯದ ಪ್ರಾಶಸ್ಯ ಕಸಿಯುತ್ತಿದೆ. ಅಲ್ಪಸಂಖ್ಯಾತ ಸಮುದಾಯದ ಸರ್ಕಾರಿ ಉದ್ಯೋಗದ ಮೀಸಲಾತಿ ಮತ್ತು ರಾಜಕೀಯ ಮೀಸಲಾತಿ ಕಡಿತ ಮಾಡಲು ಹೊರಟಿದೆ. ಇದರ ವಿರುದ್ದವು ಹೋರಾಟ ಮಾಡಲಾಗುವುದು ಎಂದರು. ರಾಜಕೀಯದಲ್ಲಿ ಮತ ಪಡೆಯುವ ಹುನ್ನಾರ ಇದು ದೇಶದ ಅಭಿವೃದ್ಧಿಗೆ ಮಾರಕವಾಗಿದೆ. ಯಾಕೆ ಈ ರೀತಿ ವಿಭಜನೆ ಆಗುತ್ತಿದೆ ಮತ್ತು ಇದಕ್ಕೆ ಏನು ಪರಿಹಾರ ಎಂಬ ಬಗ್ಗೆ ಹೈಕೋರ್ಟಿನ ನ್ಯಾಯಾದೀಶರ ನೇತೃತ್ವದಲ್ಲಿ ತನಿಖೆ ಅಗತ್ಯವಿದೆ ಮತ್ತು ಶಾಶ್ವತ ಪರಿಹಾರ ಕಂಡು ಹಿಡಿಯುವಂತೆ ಆಗ್ರಹಿಸಿದರು.
ಸುದ್ದಿಗೋಷ್ಟಿಯಲ್ಲಿ ರಾಜ್ಯ ಅಲ್ಪ ಸಂಖ್ಯಾತರ ಕಾಂಗ್ರೇಸ್ ಘಟಕದ ಕಾರ್ಯದರ್ಶಿ ಸಂಪಾಜೆ ಗ್ರಾ.ಪಂ. ಸದಸ್ಯ ಅಬ್ಬುಶಾಲಿ ಗೂನಡ್ಕ , ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್ , ಅಲ್ಪಸಂಖ್ಯಾತ ಘಟಕದ ಉಪಾದ್ಯಕ್ಷ ಹನೀಫ್ ಬೀಜಕೊಚ್ಚಿ ಉಪಸ್ಥಿತರಿದ್ದರು.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…