Advertisement
MIRROR FOCUS

ಕೇಂದ್ರ ಸರಕಾರದ ನೀತಿ ವಿರೋಧಿಸಿ ನ.26ಕ್ಕೆ ಪ್ರತಿಭಟನೆ | ಕಿಸಾನ್ ಮೋರ್ಚಾ ಹಾಗೂ ಕೇಂದ್ರ ಕಾರ್ಮಿಕ ಸಂಘಟನೆಗಳ ನಿರ್ಧಾರ

Share

ಕಿಸಾನ್ ಮೋರ್ಚಾ(Kisan morcha) ಹಾಗೂ ಕೇಂದ್ರ ಕಾರ್ಮಿಕ ಸಂಘಟನೆಗಳ(central workers Union) ಜಂಟಿ ಸಮಿತಿ ಸಂಯುಕ್ತಾಶ್ರಯದಲ್ಲಿ ಕೇಂದ್ರ ಸರ್ಕಾರದ(central govt) ಜನವಿರೋಧಿ ನೀತಿಗಳನ್ನು ಹಿಮ್ಮೆಟ್ಟಿಸಲು ಹಾಗೂ ರಾಜ್ಯ ಸರ್ಕಾರದ(state govt) ರೈತ ವಿರೋಧಿ ಕೃಷಿ ಕಾಯ್ದೆಗಳ(anti-people) ರದ್ದುಗೊಳಿಸಿ ಪರ್ಯಾಯ ನೀತಿಗಳನ್ನು ತರುವಂತೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್(Bengaluru freedom park) ನಲ್ಲಿ ನ.26 ರಿಂದ 28 ವರೆಗೆ 72 ಗಂಟೆಗಳ ಅವಧಿಯ ಮಹಾಧರಣಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಗೌರವಾಧ್ಯಕ್ಷ ಕುರುವ ಗಣೇಶಪ್ಪ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರದಲ್ಲಿ ಮೋದಿ ನೇತೃತ್ವದ ಸರ್ಕಾರವು ಬಡ ಜನರ ಮೇಲೆ ಜಿಎಸ್ಟಿ ಸೇರಿದಂತೆ ಅನೇಕ ದಿನ ಬಳಕೆ ವಸ್ತುಗಳ ಮೇಲೂ ಬೆಲೆ ಏರಿಕೆ ಮಾಡಿದೆ. ಸಾರ್ವಜನಿಕ ಉದ್ದಿಮೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡಲಾಗುತ್ತಿದೆ. ಜೊತೆಗೆ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ತಂದು ಜನ ತತ್ತರಿಸುವಂತೆ ಮಾಡಿದೆ ಎಂದರು.

ದೆಹಲಿಯಲ್ಲಿ 13 ತಿಂಗಳ ಕಾಲ ರೈತರು ಐತಿಹಾಸಿಕ ಹೋರಾಟ ನಡೆಸಿದ ಪರಿಣಾಮ ಮೋದಿ ಸರ್ಕಾರ ರೈತ ವಿರೋಧಿ 3 ಕೃಷಿ ಕಾಯ್ದೆಗಳನ್ನು ವಾಪಾಸ್ಸು ಪಡೆಯಿತು. ಆದರೂ ಕನಿಷ್ಟ ಬೆಂಬಲ ಬೆಲೆ ಕಾಯ್ದೆ ಜಾರಿ, ವಿದ್ಯುತ್ ತಿದ್ದುಪಡಿ ಮಸೂದೆ ರದ್ದತಿ ಮುಂತಾದ ವಿಷಯಗಳಲ್ಲಿ ರೈತರಿಗೆ ನೀಡಿದ್ದ ಲಿಖಿತ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಸರ್ಕಾರದ ಈ ಧೋರಣೆಗಳು ರೈತಾಪಿ ವರ್ಗವನ್ನು ಸಾಲದ ಸುಳಿಗೆ ಸಿಲುಕಿಸಿ ಕೃಷಿಯಿಂದ ಹೊರ ದೂಡಲಾಗುತ್ತಿದೆ. ಕೃಷಿ ಆರ್ಥಿಕತೆ ಬಿಕ್ಕಟ್ಟಿನಲ್ಲಿ ಸಾಗುತ್ತಿದೆ ಎಂದು ಹೇಳಿದರು.

ರೈತರ ಉತ್ಪನ್ನಗಳಿಗೆ ಎಂ.ಎಸ್.ಸ್ವಾಮಿನಾಥನ್ ಶಿಫಾರಸ್ಸಿನ ಪ್ರಕಾರ ಕನಿಷ್ಠ ಬೆಂಬಲ ಬೆಲೆ ಹಾಗೂ ಖರೀದಿ ಖಾತ್ರಿ ಒದಗಿಸುವ ಶಾಸನ ಜಾರಿ ಮಾಡಬೇಕು, ರೈತರಿಗೆ ಬಿತ್ತನೆ ಬೀಜ ರಸಗೊಬ್ಬರ ಹಾಗೂ ವಿದ್ಯುತ್‌ಚ್ಚಕ್ತಿ ಮೇಲಿನ ಸಬ್ಸಿಡಿ ಹೆಚ್ಚಿಸಬೇಕು, ರೈತರ ಆತ್ಮಹತ್ಯೆ ತಡೆಯುವಲ್ಲಿ ಅಗತ್ಯ ಕ್ರಮ ಕೈಹೊಳ್ಳಬೇಕು, ಫಸಲ್ ಬಿಮಾ ಯೋಜನೆ ರದ್ದುಪಡಿಸಿ, ಎಲ್ಲಾ ಬೆಳೆಗಳಿಗೂ ವಿಮೆ ಒದಗಿಸುವ ಸಮಗ್ರ ಸಾರ್ವಜನಿಕ ವಿಮಾ ಯೋಜನೆ ಜಾರಿಗೆ ತರಬೇಕು, ದೆಹಲಿ ರೈತ ಹೋರಾಟದ ಸಂದರ್ಭ ನೀಡಿದ್ದ ಲಿಖಿತ ಭರವಸೆಗಳನ್ನು ಜಾರಿ ಮಾಡಬೇಕು ಸೇರಿದಂತೆ ಇನ್ನೂ ಅನೇಕ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಈ ಮಹಾಧರಣಿ ಮೂಲಕ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದರು.

ರಾಜ್ಯ ಕಾಂಗ್ರೆಸ್ ಸರ್ಕಾರವು ಚುನಾವಣೆ ಪೂರ್ವ ಪ್ರಣಾಳಿಕೆಯಲ್ಲಿ ಹೇಳಿದಂತೆ ರೈತ ವಿರೋಧಿ 3 ಕೃಷಿ ಕಾಯ್ದೆಗಳನ್ನು ಕೂಡಲೇ ಹಿಂಪಡೆಯಬೇಕು, ವಿದ್ಯುತ್ ಖಾಸಗೀಕರಣ ಮಾಡುವುದಿಲ್ಲವೆಂದು ಕೇಂದ್ರ ಸರ್ಕಾರಕ್ಕೆ ನಿರ್ಣಯ ತಿಳಿಸಬೇಕು, ರೈತರ ಐ.ಪಿ. ಸೆಟ್‌ಗಳಿಗೆ ರೈತರೇ ಸ್ವಯಂ ವೆಚ್ಚದಲ್ಲಿ ಕಂಬ, ತಂತಿ, ಟಿಸಿ ಹಾಕಿಸಿಕೊಳ್ಳಬೇಕು ಎನ್ನುವ ಆದೇಶ ರದ್ದು ಮಾಡಬೇಕು ಸೇರಿದಂತೆ ಇನ್ನೂ ಹಲವು ಬೇಡಿಕೆಗೆ ಸ್ಪಂದಿಸುವಂತೆ ರಾಜ್ಯ ಸರ್ಕಾರಕ್ಕೆ ಮಹಾಧರಣಿಯಲ್ಲಿ ಒತ್ತಾಯಿಸಲಾಗುವುದು ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಸೇನೆಯ ರಾಜ್ಯ ಉಪಾಧ್ಯಕ್ಷ ಹೊನ್ನೂರು ಮುನಿಯಪ್ಪ, ಜಿಲ್ಲಾಧ್ಯಕ್ಷ ಪಿ.ಪಿ.ಮರುಳಸಿದ್ದಪ್ಪ, ಸಂತೋಷ್ ನಾಯ್ಕ, ಅಭಿಲಾಷ್, ಮಾಯಕೊಂಡದ ಬೀರಪ್ಪ, ಮಲ್ಲೇನಹಳ್ಳಿ ನಾಗರಾಜ್, ಕೈದಾಳ್ ಓಂಕಾರಯ್ಯ ಇತರರು ಇದ್ದರು.

The joint committee of Kisan Morcha and Central Workers Union held a strike at Freedom Park, Bengaluru from 26th to 28th, demanding to reverse the anti-people policies of the central government and bring alternative policies to repeal the anti-farmer agricultural laws of the state government. Karnataka State Farmers Association and Green Sena State Honorary President Kuru Ganeshappa said that the hour-long strike was called.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

4 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

5 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

13 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

15 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

20 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

21 hours ago