ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ.19ರಂದು ಸಿಎಂ ನಿವಾಸದ ಮುಂದೆ ಪ್ರತಿಭಟನೆ ಮಾಡಲಾಗುತ್ತದೆ ಎಂದು ಕರ್ನಾಟಕ ರಸ್ತೆ ಸಾರಿಗೆ ಮಜ್ದೂರ್ ಸಂಘ ಎಚ್ಚರಿಕೆ ನೀಡಿದೆ.
ಸಾರಿಗೆ ನೌಕರರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿ ನಡೆಸಿದ ಮುಖಂಡರು, ಸಾರಿಗೆ ನೌಕರರು ಎದುರಿಸುತ್ತಿರುವ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದೆ ಇಡಲಾಗಿದೆ. ಇಲಾಖೆ ಮತ್ತು ನಿಗಮಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚಿನ ನೌಕರರು ಕೆಲಸ ನಿರ್ವಹಿಸುತ್ತಿದ್ದಾರೆ. ಆ ಎಲ್ಲಾ ನೌಕರರಿಗೆ ವೇತನ ಪರಿಷ್ಕರಣೆ ಆಗಬೇಕು, ಎರಡು ಹಂತದ ಆಡಳಿತ ವ್ಯವಸ್ಥೆ ಜಾರಿಯಾಗಬೇಕು. ಏಕರೂಪ ಶಿಸ್ತು ಕ್ರಮ ಜಾರಿಯಾಗಬೇಕು, ನಿವೃತ್ತಿ, ನಿಧನ ಮತ್ತು ಸ್ವಯಂ ನಿವೃತ್ತಿ ಕಾರ್ಮಿಕರ ಬಾಕಿ ಹಣ ಬಿಡುಗಡೆ ಆಗಬೇಕು. ವಜಾಗೊಂಡ ನೌಕರರನ್ನ ಮರುನೇಮಕ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದರು.
ಈ ಸಂಬಂಧ ಸರ್ಕಾರ ಸಭೆ ನಡೆಸಿ ಬೇಡಿಕೆ ಈಡೇರಿಸಬೇಕು ಇಲ್ಲವಾದಲ್ಲಿ ಅಕ್ಟೋಬರ್ 19 ರಂದು ಮುಖ್ಯಮಂತ್ರಿಗಳ ಅಧಿಕೃತ ನಿವಾಸದ ಮುಂದೆ ಬೃಹತ್ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…
ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 3/4 ಕಪ್ ,ನೀರು…
2025ರಲ್ಲಿ ಮಂಗಳ ಗ್ರಹವು ವಿವಿಧ ನಕ್ಷತ್ರಗಳಲ್ಲಿ ಸಂಚಾರ ಮಾಡುವುದರಿಂದ ಕೆಲ ರಾಶಿಗಳಿಗೆ ವಿಶೇಷ…
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್ನಲ್ಲಿ ಪ್ರಧಾನಿ…