ಪ್ರೋಟಾನ್ ಥೆರಪಿ ಮೂಲಕ ಕ್ಯಾನ್ಸರ್ ಗೆ ಚಿಕಿತ್ಸೆ | ಕಿದ್ವಾಯಿ ಆಸ್ಪತ್ರೆಯಲ್ಲಿ ಸೌಲಭ್ಯ ಜಾರಿಗೆ ಪ್ರಸ್ತಾವನೆ

June 9, 2025
9:24 PM

ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು ನೀಡುವಂತೆ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ. ನಡ್ಡಾ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಜೆ.ಪಿ. ನಡ್ಡಾ ಅವರು ಇತ್ತೀಚೆಗೆ ಬೆಂಗಳೂರಿಗೆ ಆಗಮಿಸಿದ್ದ ವೇಳೆ ಸಭೆ ನಡೆಸಿದ್ದು, ಕಿದ್ವಾಯಿ ಆಸ್ಪತ್ರೆಯಲ್ಲಿ ಈ ಚಿಕಿತ್ಸಾ ಸೌಲಭ್ಯ ಅಳವಡಿಸಲು ಆರ್ಥಿಕ ನೆರವು ನೀಡುವಂತೆ ಪ್ರಸ್ತಾವನೆ ಸಲ್ಲಿಸಿರುವುದಾಗಿ ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಾರ್ಷಿಕ 21 ಸಾವಿರಕ್ಕೂ ಹೆಚ್ಚು ಕ್ಯಾನ್ಸರ್ ಪ್ರಕರಣಗಳು ದಾಖಲಾಗುತ್ತಿವೆ. ವಿಕಿರಣ ಚಿಕಿತ್ಸೆಯಲ್ಲಿ ಗೆಡ್ಡೆಯ ಅಕ್ಕಪಕ್ಕದ ಭಾಗಗಳಿಗೂ ಪರಿಣಾಮವಾಗುವ ಸಾಧ್ಯತೆಯಿದೆ. ಪ್ರೋಟಾನ್ ಥೆರಪಿ  ಚಿಕಿತ್ಸೆ ಅತ್ಯಾಧುನಿಕವಾಗಿದ್ದು, ನಿರ್ಣಾಯಕ ಅಂಗಗಳಿಗೆ ಯಾವ ರೀತಿಯ ಹಾನಿ ಮಾಡುವುದಿಲ್ಲ. ಸೂಕ್ಷ್ಮ ಪ್ರದೇಶಗಳಲ್ಲಿ ದೀರ್ಘಕಾಲಿಕ ಅಡ್ಡ ಪರಿಣಾಮಗಳನ್ನು ತಗ್ಗಿಸುತ್ತದೆ. ರೇಡಿಯೋ ತೆರೆಪಿಗಿಂತಲೂ ಭಿನ್ನವಾಗಿದೆ. ಸಮಸ್ಯೆಯಿರುವ ಭಾಗಕ್ಕೆ ಮಾತ್ರ ಚಿಕಿತ್ಸೆ ದೊರೆಯುತ್ತದೆ ಎಂದು ತಿಳಿಸಿದ್ದಾರೆ. ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಆಧುನಿಕ ಚಿಕಿತ್ಸಾ ಸೌಲಭ್ಯ ಅಳವಡಿಸುವುದರಿಂದ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆ ಮತ್ತು ನಿಮ್ಹಾನ್ಸ್ ನ ರೋಗಿಗಳಿಗೂ ಸೌಲಭ್ಯ ದೊರೆಯಲಿದೆ ಎಂದು ವಿವರಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ
October 12, 2026
12:17 PM
by: ದ ರೂರಲ್ ಮಿರರ್.ಕಾಂ
ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!
October 12, 2026
7:30 AM
by: ಮಹೇಶ್ ಪುಚ್ಚಪ್ಪಾಡಿ
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ
October 11, 2026
10:37 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ
October 11, 2026
10:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror