ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು ನೀಡುವಂತೆ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ. ನಡ್ಡಾ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಜೆ.ಪಿ. ನಡ್ಡಾ ಅವರು ಇತ್ತೀಚೆಗೆ ಬೆಂಗಳೂರಿಗೆ ಆಗಮಿಸಿದ್ದ ವೇಳೆ ಸಭೆ ನಡೆಸಿದ್ದು, ಕಿದ್ವಾಯಿ ಆಸ್ಪತ್ರೆಯಲ್ಲಿ ಈ ಚಿಕಿತ್ಸಾ ಸೌಲಭ್ಯ ಅಳವಡಿಸಲು ಆರ್ಥಿಕ ನೆರವು ನೀಡುವಂತೆ ಪ್ರಸ್ತಾವನೆ ಸಲ್ಲಿಸಿರುವುದಾಗಿ ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಾರ್ಷಿಕ 21 ಸಾವಿರಕ್ಕೂ ಹೆಚ್ಚು ಕ್ಯಾನ್ಸರ್ ಪ್ರಕರಣಗಳು ದಾಖಲಾಗುತ್ತಿವೆ. ವಿಕಿರಣ ಚಿಕಿತ್ಸೆಯಲ್ಲಿ ಗೆಡ್ಡೆಯ ಅಕ್ಕಪಕ್ಕದ ಭಾಗಗಳಿಗೂ ಪರಿಣಾಮವಾಗುವ ಸಾಧ್ಯತೆಯಿದೆ. ಪ್ರೋಟಾನ್ ಥೆರಪಿ ಚಿಕಿತ್ಸೆ ಅತ್ಯಾಧುನಿಕವಾಗಿದ್ದು, ನಿರ್ಣಾಯಕ ಅಂಗಗಳಿಗೆ ಯಾವ ರೀತಿಯ ಹಾನಿ ಮಾಡುವುದಿಲ್ಲ. ಸೂಕ್ಷ್ಮ ಪ್ರದೇಶಗಳಲ್ಲಿ ದೀರ್ಘಕಾಲಿಕ ಅಡ್ಡ ಪರಿಣಾಮಗಳನ್ನು ತಗ್ಗಿಸುತ್ತದೆ. ರೇಡಿಯೋ ತೆರೆಪಿಗಿಂತಲೂ ಭಿನ್ನವಾಗಿದೆ. ಸಮಸ್ಯೆಯಿರುವ ಭಾಗಕ್ಕೆ ಮಾತ್ರ ಚಿಕಿತ್ಸೆ ದೊರೆಯುತ್ತದೆ ಎಂದು ತಿಳಿಸಿದ್ದಾರೆ. ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಆಧುನಿಕ ಚಿಕಿತ್ಸಾ ಸೌಲಭ್ಯ ಅಳವಡಿಸುವುದರಿಂದ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆ ಮತ್ತು ನಿಮ್ಹಾನ್ಸ್ ನ ರೋಗಿಗಳಿಗೂ ಸೌಲಭ್ಯ ದೊರೆಯಲಿದೆ ಎಂದು ವಿವರಿಸಿದ್ದಾರೆ.
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…
ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…
ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…